ಮುಡಿಪು ಕೆನರಾ ಕೈಗಾರಿಕಾ ಪ್ರದೇಶಕ್ಕೂ ನೇತ್ರಾವತಿಯ ನೀರು!
Team Udayavani, Jul 9, 2019, 5:18 AM IST
ಮಂಗಳೂರು: ತುಂಬೆಯ ನೇತ್ರಾವತಿ ನದಿಯಿಂದ ಮುಡಿಪು ಸಮೀಪದ ಮೂಳೂರುವಿನಲ್ಲಿ ಹೊಸದಾಗಿ ಜಾರಿಗೊಳಿಸಿದ ಕೆನರಾ ಕೈಗಾರಿಕಾ ಪ್ರದೇಶ ಗಳಿಗೆ ನೀರು ಸರಬರಾಜು ಮಾಡಲು ಯೋಜನೆ ರೂಪಿಸಲಾಗುತ್ತಿದ್ದು, ಈ ಮೂಲಕ ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನ ಮೇಲೆ ಇನ್ನಷ್ಟು ಒತ್ತಡ ಎದುರಾದಂತಾಗಿದೆ.
ಈ ಬಾರಿ, ತುಂಬೆ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ನಗರದಲ್ಲಿ ಕುಡಿ ಯುವ ನೀರಿಗೆ ಸಮಸ್ಯೆ ಉಲ್ಬಣಿಸಿತ್ತು. ಹೀಗಾಗಿ ಕೈಗಾರಿಕೆಗಳಿಗೆ ಆವಶ್ಯ ನೀರನ್ನು ಪರ್ಯಾಯ ಮೂಲಗಳಿಂದ ಒದಗಿಸ ಬೇಕು ಎಂದು ಆಡಳಿತ ವ್ಯವಸ್ಥೆ ಚಿಂತನೆ ನಡೆಸುತ್ತಿತ್ತು. ಆದರೆ ಇದೀಗ ತುಂಬೆ ಡ್ಯಾಂನ ನೀರನ್ನು ಕೆನರಾ ಕೈಗಾರಿಕಾ ಪ್ರದೇಶಕ್ಕೆ ಹರಿಸಲು ಯೋಜನೆಯೊಂದನ್ನು ರೂಪಿಸಲಾಗುತ್ತಿದೆ.
ಯೋಜನೆಗೆ ಟೆಂಡರ್ ಆಹ್ವಾನ
ಕೆನರಾ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 600 ಎಕ್ರೆಯಷ್ಟು ಭೂಮಿ ಕೆಐಎಡಿಬಿ ವಶದಲ್ಲಿದೆ. ಇದರಲ್ಲಿ 67.87 ಎಕ್ರೆ ಭೂಮಿಯನ್ನು ಹೊಸ ಜೈಲು ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಉಳಿದ ಭೂಮಿ ಇನ್ನಷ್ಟೇ ಕೈಗಾರಿಕೆಗಳಿಗೆ ನೀಡಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಪ್ರದೇಶಕ್ಕೆ ನೀರು ಸರಬರಾಜಿಗಾಗಿ ನೇತ್ರಾವತಿ ನದಿಯಿಂದ ನೇರವಾಗಿ ಪೈಪ್‌ಲೈನ್ ಅಳವಡಿಸುವ ಬಗ್ಗೆ ಚಿಂತಿಸಲಾಗಿತ್ತು. ಆದರೆ ಇದು ದುಬಾರಿಯಾಗುವ ಕಾರಣದಿಂದ ಸದ್ಯದ ಮಾಹಿತಿ ಪ್ರಕಾರ, ಇನ್ಪೋಸಿಸ್ ಎಸ್‌ಇಝಡ್ ನೇತ್ರಾ ಕ್ಯಾಂಪಸ್‌ನಲ್ಲಿರುವ ನೀರು ಸಂಸ್ಕರಣಾ ಘಟಕಕ್ಕೆ ನೇತ್ರಾವತಿಯಿಂದ ಬಂದ ನೀರಿನಲ್ಲಿ ಒಂದಂಶವನ್ನು ಕೆನರಾ 1ನೇ ಹಂತ ಕೈಗಾರಿಕಾ ಪ್ರದೇಶದವರೆಗೆ ನೀರು ಸರಬರಾಜು ಮಾಡಲು ಕೆಐಎಡಿಬಿ ನಿರ್ಧರಿಸಿದೆ. ಇದಕ್ಕಾಗಿ 4 ಕೋ.ರೂ.ಗಳ ಯೋಜನೆಗೆ ಟೆಂಡರ್ ಆಹ್ವಾನಿಸಿದೆ. ಸದ್ಯಕ್ಕೆ ನೇತ್ರಾವತಿಯಿಂದ ಕೆನರಾ ಕೈಗಾರಿಕಾ ವ್ಯಾಪ್ತಿಗೆ ಅರ್ಧ ಎಂಜಿಡಿ ನೀರು ಬಳಸಲು ಉದ್ದೇಶಿಸಿಸಲಾಗಿದೆ.
ನೇತ್ರಾವತಿಯೇ ಆಧಾರ
ತುಂಬೆ ಡ್ಯಾಂನಿಂದ ನಗರಕ್ಕೆ 160 ಎಂಎಲ್ಡಿ (ದಿನವೊಂದಕ್ಕೆ ಮಿಲಿಯ ಲೀಟರ್) ನೀರು ಪೂರೈಕೆಯಾಗುತ್ತಿದೆ. ಎಂಜಿಡಿ (ಮಿಲಿಯ ಗ್ಯಾಲನ್ಸ್) ಲೆಕ್ಕಾಚಾರದಲ್ಲಿ 160 ಎಂಎಲ್ಡಿ ಅಂದರೆ ಸುಮಾರು 35 ಎಂಜಿಡಿ. ತುಂಬೆ ಡ್ಯಾಂನಿಂದ ಎಂಸಿಎಫ್‌ಗೆ 2 ಎಂಜಿಡಿ ಹಾಗೂ ಎನ್‌ಎಂಪಿಟಿಗೆ 0.5 ಎಂಜಿಡಿ, ಇತರ ಕೈಗಾರಿಕೆಗಳಿಗೆ 1 ಎಂಜಿಡಿ ನೀರು ಪೂರೈಕೆಯಾಗುತ್ತಿದೆ. ಬಂಟ್ವಾಳ ಸಮೀಪವಿರುವ ಎಎಂಆರ್ ಡ್ಯಾಂನಿಂದ ಎಂಆರ್‌ಪಿಎಲ್ಗೆ 6 ಎಂಜಿಡಿ, ವಿಶೇಷ ಆರ್ಥಿಕ ವಲಯಕ್ಕೆ (ಎಸ್‌ಇಝೆಡ್) 8 ಎಂಜಿಡಿ ನೀರು ಪೂರೈಕೆಯಾಗುತ್ತದೆ.
ಮುಡಿಪು ಸಮೀಪ ಇರಾ-ಚೇಳೂರು-ಕುರ್ನಾಡು ಗ್ರಾ.ಪಂ. ವ್ಯಾಪ್ತಿಯ ಕೆನರಾ ಕೈಗಾರಿಕಾ ಪ್ರದೇಶದಲ್ಲಿ ನೂತನ ಸುಸಜ್ಜಿತ ಜೈಲು ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆ. ಜೈಲು ನಿರ್ಮಾಣಕ್ಕಾಗಿ ಮೀಸಲಿರಿಸಿರುವ 67.87 ಎಕ್ರೆ ಜಮೀನಿಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ವತಿಯಿಂದ ಆವರಣ ಗೋಡೆಯನ್ನು ನಿರ್ಮಾಣ ಮಾಡಿ ನಿವೇಶನವನ್ನು ಭದ್ರ ಪಡಿಸಲಾಗಿದೆ. 200 ಕೋಟಿ ರೂ. ವೆಚ್ಚದಲ್ಲಿ ಜೈಲು ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 2017ರ ಬಜೆಟ್‌ನಲ್ಲಿ 7.5 ಕೋಟಿ ರೂ. ಒದಗಿಸಲಾಗಿತ್ತು. ಜೈಲು ಕಟ್ಟಡವನ್ನು 3 ಹಂತಗಳಲ್ಲಿ ನಿರ್ಮಿಸಿ 3- 4 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ. ಮೊದಲ ಹಂತದಲ್ಲಿ 110 ಕೋ.ರೂ.ಮೊತ್ತದ ಕಾಮಗಾರಿಗೆ ಟೆಂಡರ್ ಸಿದ್ಧಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಕೆನರಾ ಕೈಗಾರಿಕಾ ಪ್ರದೇಶಕ್ಕೆ ಮುಡಿಪುವಿನಿಂದ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ವಿಸ್ತರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಫಾಝಿಲ್ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ