ಮಂಗಳೂರು: ವರ್ಕ್ ಫ್ರಂ ಹೋಮ್ ನೆಪದಲ್ಲಿ 1.45 ಲಕ್ಷ ರೂ. ವಂಚನೆ
Team Udayavani, Apr 30, 2023, 7:40 AM IST
ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಟಾಸ್ಕ್ ನೀಡಿ 1.45 ಲಕ್ಷ ರೂ. ಪಡೆದುಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿ ಫೆ. 20ರಂದು ಫೇಸ್ಬುಕ್ನಲ್ಲಿ “ವರ್ಕ್ ಫ್ರಂ ಹೋಮ್ ವಿದ್ ಅಮೆಜಾನ್’ ಎಂಬ ಜಾಹೀರಾತು ಕಂಡು ಅದನ್ನು ಕ್ಲಿಕ್ ಮಾಡಿದಾಗ ವಾಟ್ಸ್ಆ್ಯಪ್ ಪೇಜ್ ತೆರೆದುಕೊಂಡಿತ್ತು. ಅದರಲ್ಲಿ ಲಿಂಕ್ವೊಂದನ್ನು ಕಳುಹಿಸಲಾಗಿತ್ತು. ಫೆ.21ರಂದು ಲಿಂಕ್ನ್ನು ಕ್ಲಿಕ್ ಮಾಡಿ ಅದರಲ್ಲಿ ತಿಳಿಸಿದಂತೆ ನೋಂದಣಿ ಮೊತ್ತವಾಗಿ 200 ರೂ. ಪಾವತಿಸಿದ್ದರು.
ಅನಂತರ ಟೆಲಿಗ್ರಾಂನಲ್ಲಿ ದೂರುದಾರರನ್ನು ಸಂಪರ್ಕಿಸಿದ ಅಪರಿಚಿತ ವ್ಯಕ್ತಿ ಹಲವು ಟಾಸ್ಕ್ಗಳನ್ನು ಪೂರೈಸಿ ಕಮಿಷನ್ ಪಡೆದುಕೊಳ್ಳುವಂತೆ ತಿಳಿಸಿ 500 ರೂ. ವರ್ಗಾಯಿಸಿಕೊಂಡ. ಫೆ.23ರಂದು ಟಾಸ್ಕ್ ನೆಪದಲ್ಲಿ ಆದಾಯ ತೆರಿಗೆ, ಕಮಿಷನ್ ಮೊದಲಾದ ಹಲವು ಕಾರಣಗಳನ್ನು ತಿಳಿಸಿ ಹಂತ ಹಂತವಾಗಿ ಒಟ್ಟು 1,45,225 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್