“ಅಶಕ್ತರಿಗೆ ನೆರವಾಗುವ ಹೃದಯವಂತಿಕೆ ಜಾಗೃತವಾಗಲಿ ’

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ

Team Udayavani, Feb 20, 2022, 5:05 AM IST

“ಅಶಕ್ತರಿಗೆ ನೆರವಾಗುವ ಹೃದಯವಂತಿಕೆ ಜಾಗೃತವಾಗಲಿ ’

ಮಂಗಳೂರು: ಸಮಾಜದ ಅಶಕ್ತರಿಗೆ ನೆರವಾಗುವ ಹೃದಯವಂತಿಕೆ ಎಲ್ಲರಲ್ಲೂ ಜಾಗೃತ ವಾಗಬೇಕು ಎಂದು ಉದ್ಯಮಿ, ಕಲಾ ಪೋಷಕ ಸದಾಶಿವ ಶೆಟ್ಟಿ ಕೂಳೂರು, ಕನ್ಯಾನ ಹೇಳಿದ್ದಾರೆ.

ಶನಿವಾರ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಉಳ್ಳವರು ಇಲ್ಲದವರಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದರು.

ಭಾಗವತಿಕೆಯೊಂದಿಗೆ ಹೃದಯವಂತಿಕೆ
ಪಟ್ಲ ಸತೀಶ ಶೆಟ್ಟಿ ಯಕ್ಷಗಾನವನ್ನು ಉನ್ನತ ಮಟ್ಟದತ್ತ ಕೊಂಡೊಯ್ಯುತ್ತಿದ್ದಾರೆ. ಭಾಗವತಿಕೆಯೊಂದಿಗೆ ಹೃದಯ ವಂತಿಕೆ ತೋರಿಸುತ್ತಿದ್ದಾರೆ. ಅವರ ತಂಡದ ಸೇವಾ ಕಾರ್ಯದ ಮೇಲಿನ ಪ್ರೀತಿಯಿಂದ ಟ್ರಸ್ಟ್‌ನ ಗೌರವಾ ಧ್ಯಕ್ಷನಾಗಲು ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದರು.

ಟ್ರಸ್ಟ್‌ ಅಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಸ್ವಾಗತಿಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್‌, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಎಂ.ಎಲ್‌. ಸಾಮಗ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಸಹಾಯಕ ಆಯುಕ್ತ ಮದನಮೋಹನ್‌, ಹಿರಿಯ ಮಾರ್ಗದರ್ಶಕ ಪಟ್ಲ ಮಹಾಬಲ ಶೆಟ್ಟಿ, ಪ್ರಧಾನ ಸಂಚಾಲಕ ಐಕಳ ಹರೀಶ್‌ ಶೆಟ್ಟಿ, ಪ್ರಧಾನ ಸಂಚಾಲಕ ಶಶಿಧರ ಬಿ. ಶೆಟ್ಟಿ ಬರೋಡ, ಸಿಎ ದಿವಾಕರ ರಾವ್‌ ಕಟೀಲು, ಕೋಶಾಧಿಕಾರಿ ಸಿಎ ಸುದೇಶ್‌ ಕುಮಾರ್‌ ರೈ, ಉಪಾಧ್ಯಕ್ಷರಾದ ಡಾ| ಮನು ರಾವ್‌, ದುರ್ಗಾಪ್ರಕಾಶ್‌ ಪಡುಬಿದ್ರಿ, ಜತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ಸಂಘಟನ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕೆ. ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿ ದರು. ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ವಂದಿಸಿದರು.

ನೆರವು ವಿತರಣೆ, ಸಮ್ಮಾನ
ಮೂವರು ಕಲಾವಿದರಿಗೆ ತಲಾ 25 ಸಾವಿರ ರೂ. ವೈದ್ಯಕೀಯ ನೆರವು, ಇಬ್ಬರು ಕಲಾವಿದರಿಗೆ ಮನೆ ನಿರ್ಮಾಣಕ್ಕೆ ತಲಾ 1 ಲ.ರೂ. ನೆರವು ವಿತರಿಸಲಾಯಿತು. ಯಕ್ಷಗಾನ ಸೇರಿದಂತೆ ಬಹುಮುಖ ಪ್ರತಿಭೆ, ಸಿಎ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವೃಂದಾ ಕೊನ್ನಾರ್‌ ಅವರನ್ನು ಸಮ್ಮಾನಿಸಲಾಯಿತು.

ಯಕ್ಷ ಧ್ರುವ ಪಟ್ಲ ಫೌಂಡೇಶನ್‌ 6 ವರ್ಷಗಳಲ್ಲಿ ಅಶಕ್ತ ಕಲಾವಿದರಿಗೆ ಸುಮಾರು 7.50 ಕೋ.ರೂ. ಆರ್ಥಿಕ ನೆರವು ನೀಡಿದೆ ಎಂದು ಪಟ್ಲ ಸತೀಶ ಶೆಟ್ಟಿ ತಿಳಿಸಿದರು.

ಇನ್ನಷ್ಟು ಕಲಾವಿದರಿಗೆ
ಸಹಾಯವಾಗಲಿ
ಪದಗ್ರಹಣ ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಯಕ್ಷ ಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಕಲಾವಿದರಿಗೆ ನೆರವಾಗುವ ಮೂಲಕ ಸರಕಾರದ ಜತೆ ಕೈಜೋಡಿಸಿದೆ. ಟ್ರಸ್ಟ್‌ನ ಸಾಮರ್ಥ್ಯ ಹೆಚ್ಚಾಗಿ ಇನ್ನಷ್ಟು ಕಲಾವಿದರಿಗೆ ಸಹಾಯ ದೊರೆಯಲಿ ಎಂದರು. ತಾನು ಬಾಲ್ಯದಿಂದಲೇ ಯಕ್ಷಗಾನ ಪ್ರಿಯನಾಗಿದ್ದು ಐಎಎಸ್‌ ತರಬೇತಿ ವೇಳೆ “ಇಂಡಿಯಾ ಡೇ ಸೆಲೆಬ್ರೇಷನ್‌’ನಲ್ಲಿ ಯಕ್ಷಗಾನ ದೃಶ್ಯ ಪ್ರಸ್ತುತಪಡಿಸಿದ್ದನ್ನು ನೆನಪಿಸಿಕೊಂಡರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.