ಕಾಲು ಹೋದರೂ ಭರವಸೆಯಿಂದ ಬದುಕು ಕಟ್ಟಿಕೊಂಡ ಛಲಗಾರ

 ಅಪಘಾತದಲ್ಲಿ ಕಾಲು, ಪಾದ ಕಳೆದುಕೊಂಡ ಅಬ್ದುಲ್‌ ಖಾದರ್‌ ; ಮೊದಲಿಗೆ ಬಟ್ಟೆ, ಈಗ ಮೀನು ವ್ಯಾಪಾರ ಮಾಡಿ ಜೀವನಕ್ಕೆ ಆಧಾರ

Team Udayavani, Nov 17, 2019, 4:19 AM IST

nn-21

ಅರಂತೋಡ: ಬದುಕು ನಾವು ಅಂದುಕೊಂಡಂತೆ ಇರುವುದಿಲ್ಲ. ಅದೆಷ್ಟೋ ಆಕಸ್ಮಿಕ ತಿರುವುಗಳು ಘಟಿಸುತ್ತವೆ. ಆದರೂ ಎದೆಗುಂದದೆ ಸಾಧನೆ ಮಾಡುವವರಿದ್ದಾರೆ. ಒಂದು ಕಾಲು ಹಾಗೂ ಮತ್ತೂಂದು ಪಾದವನ್ನು ಸಂಪೂರ್ಣ ಕಳೆದುಕೊಂಡಿದ್ದರೂ ಗೂನಡ್ಕದ ಅಬ್ದುಲ್‌ ಖಾದರ್‌ ಅವರು ಮೀನು ಮಾರಾಟ ಮಾಡಿ ಸ್ವಾವಲಂಬಿ ಜೀವನ ನಡೆಸುತ್ತ ಮಾದರಿಯಾಗಿದ್ದಾರೆ.

ಗೂನಡ್ಕದ ಮೋಯ್ದಿನ್‌ ಕುಂಞಿ ಅವರ ನಾಲ್ವರು ಮಕ್ಕಳಲ್ಲಿ ಅಬ್ದುಲ್‌ ಖಾದರ್‌ ಒಬ್ಬರು. ಅವರು ತನ್ನ 12ನೇ ವಯಸ್ಸಿನಲ್ಲಿ ಮಾಣಿ- ಮೈಸೂರು ರಸ್ತೆಯ ಗೂನಡ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ಸು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಲಾರಿ ಅಬ್ದುಲ್‌ ಖಾದರ್‌ ಅವರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಖಾದರ್‌ ಅವರ ಒಂದು ಕಾಲು ಸಂಪೂರ್ಣ ತುಂಡಾಗಿ ಇನ್ನೊಂದು ಕಾಲಿನ ಪಾದ ಮುರಿಯಿತು. ದೀರ್ಘ‌ಕಾಲ ಚಿಕಿತ್ಸೆ ಪಡೆಯಬೇಕಾಯಿತು. ಮೂರನೇ ತರಗತಿಯಲ್ಲಿ ಓದುತ್ತಿದ್ದ ಅವರು ಈ ಕಾರಣಕ್ಕಾಗಿಯೇ ಶಾಲೆಯನ್ನೂ ತೊರೆಯಬೇಕಾಯಿತು.

ಕಳೆದುಕೊಳ್ಳದ ಭರವಸೆ
ಕಾಲು ಕಳೆದುಕೊಂಡರೂ ಖಾದರ್‌ ಬದುಕಿನಲ್ಲಿ ಭರವಸೆ ಕಳೆದುಕೊಳ್ಳದೆ ಕೆಲವು ವರ್ಷಗಳ ಕಾಲ ಬೀದಿಗಳಲ್ಲಿ ವ್ಯಾಪಾರ ಮಾಡಿದರು. ಕಾಲು ಕಳೆದುಕೊಂಡ ತನ್ನನ್ನು ಯಾರು ಮದುವೆಯಾಗಲು ಮುಂದೆ ಬರುತ್ತಾರೆ ಎಂಬ ಆತಂಕವೂ ಅವರಿಗಿತ್ತು. ಆದರೆ, ತಮ್ಮದೇ ಊರಿನ ಅಬ್ದುಲ್ಲ ಅವರು ಮಗಳು ಅಮೀನಾ ಮನೆಯವರ ಒಪ್ಪಿಗೆಯೊಂದಿಗೆ ಖಾದರ್‌ ಅವರನ್ನು ಮದುವೆಯಾದರು. ಬದುಕಿನಲ್ಲಿ ಹೊಸ ಧೈರ್ಯ, ಭರವಸೆ ತುಂಬಿದರು.

ಸುಮಾರು 20 ವರ್ಷಗಳ ಕಾಲ ಬಟ್ಟೆ ವ್ಯಾಪಾರ ನಡೆಸಿದ ಅಬ್ದುಲ್‌ ಖಾದರ್‌ ಪ್ರಸ್ತುತ ಮೀನು ವ್ಯಾಪಾರ ಮಾಡುತ್ತಿದ್ದಾರೆ. ಸರಕಾರದಿಂದ ರಿಯಾಯಿತಿ ದರದಲ್ಲಿ ದೊರೆತ ಮೂರು ಚಕ್ರದ ಸ್ಕೂಟರ್‌ನಲ್ಲಿ ಸುಳ್ಯದ ಮೀನು ಮಾರುಕಟ್ಟೆಯಿಂದ ಸುಮಾರು 25 ಕೆ.ಜಿ. ಮೀನು ಖರೀದಿಸಿ, ಕೊಯಿನಾಡು ತನಕ ಮೀನು ಮಾರಾಟ ಮಾಡುತ್ತಾರೆ. ಪತ್ನಿ, ಇಬ್ಬರು ಮಕ್ಕಳೊಂದಿಗೆ ಅಬ್ದುಲ್‌ ಖಾದರ್‌ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ನಿರಾಸೆಗೊಳ್ಳದೆ ಬದುಕು ಕಟ್ಟಿಕೊಂಡೆ
ನಾನು ಕಾಲು ಕಳೆದುಕೊಂಡ ಮೇಲೆ ಜೀವನದಲ್ಲಿ ನಿರಾಸೆಗೊಂಡಿಲ್ಲ. ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಆಲೋಚಿಸಿ ಬಟ್ಟೆ ವ್ಯಾಪಾರ ಆರಂಭಿಸಿದೆ. ಬಳಿಕ ಬಟ್ಟೆ ವ್ಯಾಪಾರ ಕಡಿಮೆಯಾಗುತ್ತ ಬಂತು. ಈಗ ಮೀನು ವ್ಯಾಪಾರ ಆರಂಭಿಸಿದ್ದೇನೆ. ವ್ಯಾಪಾರ ಪರವಾಗಿಲ್ಲ. ನಾನು ಎಲ್ಲದಕ್ಕೂ ಮನೆಯವರನ್ನು ಅವಲಂಬಿಸುವುದು ಸರಿಯಾಗುವುದಿಲ್ಲ. ನನಗೆ ಆರೋಗ್ಯ ಅಷ್ಟು ಸರಿ ಇಲ್ಲ. ಮದ್ದಿಗೆ ಸ್ವಲ್ಪ ಹಣ ಬೇಕಾಗುತ್ತದೆ. ಇದಕ್ಕೆಲ್ಲ ವ್ಯಾಪಾರದಲ್ಲಿ ಬಂದ ಹಣ ಹೊಂದಾಣಿಯಾಗುತ್ತದೆ.
 - ಅಬ್ದುಲ್‌ ಖಾದರ್‌ ಗೂನಡ್ಕ, ಸಂಚಾರಿ ಮೀನು ವ್ಯಾಪಾರಿ

– ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.