ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಪುತ್ತೂರಿನ ಮಾಡ್ನೂರು ಗ್ರಾಮದ ವ್ಯಕ್ತಿ ಸಾವು
Team Udayavani, Jul 12, 2020, 1:04 PM IST
ಪುತ್ತೂರು: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿಇಂದು ಸಾವನ್ನಪ್ಪಿದ್ದಾರೆ.
ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಮಾಡ್ನೂರು ಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ರೈ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೋವಿಡ್ 19 ಕಾರಣದಿಂದ ಮತ್ತೊಂದು ಸಾವು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸಾವು 60 ವರ್ಷದ ವೃದ್ಧ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ