ಸಂಪ್ರದಾಯದಂತೆ ಚಂಪಾಷಷ್ಠಿ: ಕೋಟ

ಕೋವಿಡ್‌ ನಿಯಮ ಪಾಲನೆ; ರಥ ಎಳೆಯಲು ಭಕ್ತರಿಗಿಲ್ಲ ಅವಕಾಶ

Team Udayavani, Nov 23, 2020, 1:59 AM IST

ಸಂಪ್ರದಾಯದಂತೆ ಚಂಪಾಷಷ್ಠಿ: ಕೋಟ

ಸುಬ್ರಹ್ಮಣ್ಯ: ಪೂರ್ವಶಿಷ್ಟ ಸಂಪ್ರದಾಯಗಳಿಗೆ ಅನುಗುಣವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರೋತ್ಸವವು ನಡೆಯಲಿದೆ. ಪರಂಪರೆ ಮತ್ತು ಸಂಪ್ರ ದಾಯಗಳಿಗೆ ಯಾವುದೇ ಧಕ್ಕೆ ಬಾರದಂತೆ ಕೋವಿಡ್‌ ನಿಯಮಗಳಿಗೆ ಅನು ಗುಣವಾಗಿ ಉತ್ಸವ ನಡೆಯಲಿದೆ ಎಂದು ಮುಜರಾಯಿ ಹಾಗೂ ಬಂದರು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಕ್ಕೆ ಕ್ಷೇತ್ರಕ್ಕೆ ರವಿವಾರ ಆಗಮಿಸಿದ ಸಚಿವರು ದೇವರ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಹಿಂದೆ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶವಿತ್ತು. ಆದರೆ ಈ ಬಾರಿ ಕೋವಿಡ್‌ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶ ವಿರುವುದಿಲ್ಲ ಎಂದರು.

ಮೀನುಗಾರಿಕಾ ಇಲಾಖೆಯಲ್ಲಿ ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ ಕಲ್ಪನೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುವುದು. ಇಲಾಖೆಯಲ್ಲಿ 10 ಸಾವಿರ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುತ್ತದೆ. ಸಮುದ್ರ, ಸರೋವರ, ಹಿನ್ನೀರು, ಹೊಳೆ, ಕೆರೆ ಇತ್ಯಾದಿಗಳಲ್ಲಿ ಪಂಜರ ಕೃಷಿ ವ್ಯವಸ್ಥೆ ಅಳವಡಿಸಲಾಗುವುದು. ಇದಕ್ಕಾಗಿ ಇಲಾಖೆ ಯಿಂದ ರಿಯಾಯಿತಿ ದರದಲ್ಲಿ ಸಾಲ ನೀಡಲಾಗುವುದು ಎಂದು ವಿವರಿಸಿದರು.

ಒಕ್ಕಲೆಬ್ಬಿಸುವ ಭಯ ಅನಗತ್ಯ
ಕಸ್ತೂರಿ ರಂಗನ್‌ ವರದಿ ಹಿನ್ನೆಯಲ್ಲಿ ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಬಂದ ಸೂಚನೆಗೆ ರಾಜ್ಯ ಸರಕಾರವು ಯಾವುದೇ ಮಾರ್ಗಸೂಚಿ ಸಿದ್ಧ ಪಡಿಸಿಲ್ಲ. ಈ ವರದಿ ಮೂಲಕ ರೈತರನ್ನು ಒಕ್ಕಲೆಬ್ಬಿಸುವುದಾಗಲೀ ತೊಂದರೆ ಕೊಡುವುದಾಗಲೀ ಮಾಡುವುದಿಲ್ಲ. ಜನರ ಬದುಕಿಗೆ ತೊಂದರೆ ಯಾಗದಂತೆ ಪರಿಸರ ಉಳಿಸಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.

ಯಕ್ಷಗಾನ ಹಾಗೂ ದೈವಗಳ ನೇಮ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಮಾಜಿಕ ಅಂತರ ಪಾಲಿಸಿಕೊಂಡು ನಡೆಸಲು ಸರಕಾರ ಅನುಮತಿ ನೀಡಿದೆ. ಆದರೆ ಯಕ್ಷಗಾನ ಪಾತ್ರಧಾರಿಗಳಿಗೆ ಮತ್ತು ದೈವ ನರ್ತಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಶಾಸಕ ಎಸ್‌. ಅಂಗಾರ, ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಉಪಸ್ಥಿತರಿದ್ದರು.

180 ಕೊಠಡಿಗಳ ಸುಸಜ್ಜಿತ ವಸತಿಗೃಹ ಲೋಕಾರ್ಪಣೆ
ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಮಾಸ್ಟರ್‌ ಪ್ಲಾನ್‌ ಯೋಜನೆಯಲ್ಲಿ ಆದಿಸುಬ್ರಹ್ಮಣ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 180 ಕೊಠಡಿಗಳ ವಸತಿಗೃಹ “ಅನಘ’ವನ್ನು ರವಿವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಕ್ಷೇತ್ರಕ್ಕೆ ಬರುವ ಭಕ್ತರು ಎಲ್ಲ ಸೇವೆಗಳನ್ನು ಸುಸೂತ್ರವಾಗಿ ನೆರವೇರಿಸಿ ಸಂತುಷ್ಟರಾಗಿ ತೆರಳಲು ಬೇಕಾದ ವ್ಯವಸ್ಥೆಗಳನ್ನು ಸರಕಾರ ಕಲ್ಪಿಸಿಕೊಡಲಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

ಡಿಸೆಂಬರ್‌ನಲ್ಲಿ ಸಪ್ತಪದಿ
ಕುಕ್ಕೆ ಸೇರಿದಂತೆ ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಡೆಸಲು ಯೋಜಿಸಲಾಗಿದ್ದ ಸರಳ ಸಾಮೂಹಿಕ ವಿವಾಹ “ಸಪ್ತಪದಿ’ಯು ಕೋವಿಡ್‌ ಹಿನ್ನೆಲೆಯಲ್ಲಿ ಜಾರಿಯಾಗಿರಲಿಲ್ಲ. ಡಿಸೆಂಬರ್‌ ಆರಂಭದಲ್ಲಿ ನೆರವೇರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.