ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
Team Udayavani, Oct 28, 2020, 10:31 PM IST
ಸಾಂದರ್ಭಿಕ ಚಿತ್ರ
ಬಂಟ್ವಾಳ: ರಾ.ಹೆ.75ರ ಕಲ್ಲಡ್ಕದಲ್ಲಿ ಸ್ಕೂಟರ್ ಹಾಗೂ ಗೂಡ್ಸ್ ಟೆಂಪೋ ಮಧ್ಯೆ ಢಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಬಿ.ಸಿ.ರೋಡಿನ ಸಿವಿಲ್ ಎಂಜಿನಿಯರ್ ವಸಂತ ಪೂಜಾರಿ(55) ಮೃತಪಟ್ಟವರು. ಅವರು ಸ್ಕೂಟರ್ ನಲ್ಲಿ ಕಲ್ಲಡ್ಕದಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.