ಬಂಟ್ವಾಳ: ಲಾರಿ ಪಲ್ಟಿ: ಚಾಲಕ ಮೃತ್ಯು
Team Udayavani, Dec 1, 2020, 11:06 PM IST
ಬಂಟ್ವಾಳ: ರಾ.ಹೆ.75ರ ಕಲ್ಲಡ್ಕದ ಅಮ್ಟೂರಿನಲ್ಲಿ ಲಾರಿಯೊಂದು ಹೆದ್ದಾರಿಗೆ ಮಗುಚಿ ಬಿದ್ದು ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಮೃತ ದುರ್ಧೈವಿ. ಲಾರಿಯಲ್ಲಿ ಇಲೆಕ್ಟ್ರಾನಿಕ್ ಕೇಬಲ್ ಗಳನ್ನು ಮಂಗಳೂರಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕನನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444