ಬಿ.ಸಿ.ರೋಡು: ತಾಲೂಕು ಆಡಳಿತ ಸೌಧದ ಪಕ್ಕದ ನಿವೇಶನ

ಸೌಂದರ್ಯಕ್ಕೆ ಅಡ್ಡಿ: ಶುಚಿಗೊಳಿಸುವಿಕೆ ಅಗತ್ಯ

Team Udayavani, Oct 9, 2022, 8:51 AM IST

1

ಬಂಟ್ವಾಳ: ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡ್‌ನ‌ ಹೃದಯ ಭಾಗದಲ್ಲಿ ತಾಲೂಕು ಆಡಳಿತ ಸೌಧದ ಪಕ್ಕದಲ್ಲೇ ಕಂದಾಯ ಇಲಾಖೆಗೆ ಸೇರಿದ ಜಾಗವೊಂದಿದ್ದು, ಪ್ರಸ್ತುತ ಅಲ್ಲಿರುವ ಹಳೆಯ ಶೆಡ್‌ ಹಾಗೂ ಸಂಪೂರ್ಣ ಪೊದೆ ತುಂಬಿರುವ ಪರಿಸರ ನಗರ ಸೌಂದರ್ಯಕ್ಕೆ ಅಡ್ಡಿಯಾಗುತ್ತಿದ್ದು, ಅದರ ಶುಚಿಗೊಳಿಸುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಬೇಕಿದೆ.

ಕಳೆದ ಸುಮಾರು ಆರೇಳು ವರ್ಷಗಳ ಹಿಂದೆ ಬಂಟ್ವಾಳದ ಹಳೆಯ ತಾ| ಕಚೇರಿ ಯನ್ನು ಕೆಡವಿ ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನಿರ್ಮಿಸಲಾಗಿದ್ದು, ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಕಾರ್ಯಾಚರಣೆಗೆ ಕಂದಾಯ ಇಲಾಖೆಗೆ ಸೇರಿದ ಪಕ್ಕದ ನಿವೇಶನದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸಲಾಗಿತ್ತು. ಬಳಿಕ ತಾಲೂಕು ಕಚೇರಿ ಸೌಧಕ್ಕೆ ಸ್ಥಳಾಂತರಗೊಂಡ ಬಳಿಕ ಶೆಡ್‌ಗೆ ಬಾಗಿಲು ಹಾಕಲಾಗಿದೆ.

ಪ್ರಸ್ತುತ ತಾತ್ಕಾಲಿಕ ಶೆಡ್‌ ಹಾಗೇ ಪಾಳು ಬಿದ್ದಿದ್ದು, ಅದರ ಸುತ್ತಲೂ ಕಾಡು ಬೆಳೆದಿದೆ. ಈ ಪ್ರದೇಶವು ನಗರದ ಹೃದಯ ಭಾಗದಲ್ಲೇ ಇರು ವುದರಿಂದ ಇಲ್ಲಿನ ಸೌಂದರ್ಯಕ್ಕೆ ಅಡ್ಡಿ ಯಾಗುತ್ತಿದೆ. ಅಲ್ಲೇ ಪಕ್ಕದಲ್ಲಿ ಹಳೆಯ ನೋಂದಣಿ ಕಚೇರಿ ಕೂಡ ಇದ್ದು, ಅದು ಕೂಡ ಪಾಳು ಬಿದ್ದ ಸ್ಥಿತಿಯಲ್ಲಿದೆ.

ಪ್ರಸ್ತುತ ಅಲ್ಲಿರುವ ಶೆಡ್‌ ಉತ್ತಮ ಸ್ಥಿತಿ ಯಲ್ಲಿರುವುದರಿಂದ ಯಾವುದಾ ದರೂ ಉದ್ದೇಶಕ್ಕೆ ಅದನ್ನು ಬಳಸಿಕೊಳ್ಳ ಬಹುದು. ಇಲ್ಲದೇ ಇದ್ದರೆ ಅದನ್ನು ಪೂರ್ಣ ತೆರವು ಮಾಡಿ ಜಾಗವನ್ನು ಶುಚಿಗೊಳಿಸಬಹುದು. ಪ್ರಸ್ತುತ ಅಲ್ಲಿರುವ ಮರಗಳನ್ನು ಉಳಿಸಿ ಕೊಂಡು ತ್ಯಾಜ್ಯ, ಪೊದೆಗಳನ್ನು ತೆರವು ಮಾಡಿದರೂ, ಪರಿಸರ ಸ್ವತ್ಛವಾಗುವ ಜತೆಗೆ ಸೌಂದರ್ಯ ಬಂದಂತಾಗುತ್ತದೆ.

ಪಾರ್ಕಿಂಗ್‌ಗೂ ಬಳಸಬಹುದು

ಕಂದಾಯ ಇಲಾಖೆಯ ಈ ಪ್ರದೇಶ ವನ್ನು ಸುಮ್ಮನೇ ಪಾಳು ಬಿಡುವುದಕ್ಕಿಂತ ಶೆಡ್‌ ತೆರವು ಮಾಡಿ ಸಂಪೂರ್ಣ ಶುಚಿಗೊಳಿಸಿ ಪಾರ್ಕಿಂಗ್‌ ವ್ಯವಸ್ಥೆಯನ್ನೂ ಮಾಡಬಹುದು. ಆ ಪ್ರದೇಶವನ್ನೂ ಆಡಳಿತ ಸೌಧದ ಆವರಣಕ್ಕೆ ಸೇರಿಸಿ ಕಚೇರಿ ಕೆಲಸಕ್ಕೆ ಆಗಮಿಸುವ ಮಂದಿಯ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬಹುದು.

ಇಲ್ಲದೇ ಇದ್ದರೆ ಅದಕ್ಕೆ ಪ್ರತ್ಯೇಕ ಆವರಣ ಗೋಡೆ ನಿರ್ಮಿಸಿ ಬಿ.ಸಿ.ರೋಡ್‌ ಗೆ ಬರುವ ಮಂದಿಗೆ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಬಹುದು. ಮುಂದೆ ಅಗತ್ಯ ಬಿದ್ದಾಗ ಕಂದಾಯ ಇಲಾಖೆಯ ಯಾವುದೇ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಕೂಲವಾಗುತ್ತದೆ. ಈ ರೀತಿ ಮಾಡಿದಾಗ ಬಿ.ಸಿ.ರೋಡ್‌ನ‌ ಪಾರ್ಕಿಂಗ್‌ ಒತ್ತಡ ಕಡಿಮೆಯಾಗುವ ಜತೆಗೆ ನಗರ ಸೌಂದರ್ಯಕ್ಕೂ ಹೊಸರೂಪ ಬರಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಡಿಸಿ ಪರಿಶೀಲನೆ

ಕೆಲವು ತಿಂಗಳ ಹಿಂದೆ ದ.ಕ.ಡಿಸಿ ತಾ| ಕಚೇರಿಗೆ ಅಹವಾಲು ಸ್ವೀಕಾರಕ್ಕೆ ಬಂದ ಸಂದರ್ಭದಲ್ಲಿ ಈ ಕುರಿತು ಅವರ ಬಳಿ ಪ್ರಸ್ತಾವಿಸಲಾಗಿದ್ದು, ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಯಾವ ರೀತಿ ಮಾಡಬಹುದು ಎಂಬುದನ್ನು ಚರ್ಚಿಸಿ ನಿರ್ಧರಿಸುವುದಾಗಿ ತಿಳಿಸಿದ್ದರು. ಕೆಲವು ದಿನಗಳ ಹಿಂದೆ 2ನೇ ಬಾರಿ ಜಿಲ್ಲಾಧಿಕಾರಿಗಳು ಅಹವಾಲು ಸ್ವೀಕಾರಕ್ಕೆ ಬಂದಾಗ ಮತ್ತೆ ಅದೇ ವಿಚಾರವನ್ನು ಗಮನಕ್ಕೆ ತರಲಾಗಿದ್ದು, ಕ್ರಮದ ಭರವಸೆಯನ್ನೂ ನೀಡಿದ್ದಾರೆ. ಆದರೆ ಈ ವರೆಗೆ ಪ್ರಗತಿಯಾಗಿಲ್ಲ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.