ಪಾಳು ಬಿದ್ದಿದೆ ಬೆಳ್ಳಾರೆ ಮಾರುಕಟ್ಟೆ ಕಟ್ಟಡ


Team Udayavani, Mar 18, 2019, 6:13 AM IST

18-march-6.jpg

ಬೆಳ್ಳಾರೆ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ವತಿಯಿಂದ ನಿರ್ಮಾಣಗೊಂಡ ಬೆಳ್ಳಾರೆಯ ಗ್ರಾಮೀಣ ಸಂತೆ ಮಾರುಕಟ್ಟೆ ಕಟ್ಟಡ ಉದ್ಘಾಟನೆಗೊಂಡು 8 ತಿಂಗಳು ಕಳೆದರೂ ಕಾರ್ಯಾಚರಿಸದೆ ಪಾಳು ಬಿದ್ದಿದ್ದು, ಅನ್ಯ ಚಟುವಟಿಕೆಗಳ ತಾಣವಾಗಿದೆ.

2015-16ನೇ ಸಾಲಿನ ನಬಾರ್ಡ್‌ ಆರ್‌.ಐ.ಡಿ.ಎಫ್. -21ರ ಯೋಜನೆ ಅನ್ವಯ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಕಳೆದ ವರ್ಷ ಜುಲೈ ತಿಂಗಳಲ್ಲಿ ಉದ್ಘಾಟನೆಗೊಂಡಿತ್ತು. ಗ್ರಾಮೀಣ ಸಂತೆ ಮಾರುಕಟ್ಟೆಯಾದ ಇಲ್ಲಿ ಇದುವರೆಗೆ ಯಾವುದೇ ಕಾರ್ಯ ಚಟುವಟಿಕೆಗಳು ನಡೆಯದೆ ಹಳೆಯ ಸಂತೆ ಮಾರುಕಟ್ಟೆಯಲ್ಲೇ ವಾರದ ಸಂತೆ ನಡೆಯುತ್ತಿದೆ. ನೂತನ ಕಟ್ಟಡದ ಹೊರ ಭಾಗದ ರಸ್ತೆ ಬದಿಯಲ್ಲೂ ಪ್ರತಿ ಶನಿವಾರ ಸಂತೆ ಮಾರುಕಟ್ಟೆ ನಡೆಯುತ್ತಿದೆ.

ಹಳೆಯ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಸ್ಥಳಾವಕಾಶದ ಕೊರತೆಯಿದ್ದು, ಶನಿವಾರ ಹೆಚ್ಚಿನ ವ್ಯಾಪಾರ ರಸ್ತೆ ಬದಿಯಲ್ಲೇ ನಡೆಯುತ್ತಿದೆ. ವ್ಯಾಪಾರಸ್ಥರು ತಮ್ಮ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ವ್ಯಾಪಾರ ನಡೆಸುವುದರಿಂದ ಗ್ರಾಹಕರಿಗೂ ಸುಲಲಿತವಾಗಿ ರಸ್ತೆ ಬದಿ ಓಡಾಡಲು ಕಷ್ಟವಾಗುತ್ತಿದೆ. ಬಸ್‌ ನಿಲ್ದಾಣದ ಬದಿಯಲ್ಲೇ ಸಂತೆ ಮಾರುಕಟ್ಟೆ ಯಿದ್ದರೂ, ವ್ಯಾಪಾರ ಮಾತ್ರ ರಸ್ತೆಯಲ್ಲೇ ಹೆಚ್ಚಾಗಿ ನಡೆಯುತ್ತಿರುವುದು ಸಂಚಾರಕ್ಕೂ ತೊಡಕಾಗಿದೆ. ನೂತನ ಸಂತೆ ಮಾರುಕಟ್ಟೆ ಕಾರ್ಯಾಚರಿಸಲು ಆರಂಭಿಸಿದಲ್ಲಿ ವ್ಯಾಪಾರಸ್ಥರಿಗೆಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ.

ಕುಡುಕರ ಆಶ್ರಯ ತಾಣ
ಸುಸಜ್ಜಿತವಾದ ಕಟ್ಟಡ ಹಲವು ತಿಂಗಳುಗಳಿಂದ ಪಾಳು ಬಿದ್ದಿರುವ ಕಾರಣ ಸಾಮಾನ್ಯವಾಗಿಯೇ ಇಲ್ಲಿ ಅನ್ಯ ಚಟುವಟಿಕೆಗಳು ನಡೆಯುತ್ತಿವೆ. ಮದ್ಯಪಾನ ಮಾಡಿದ ವ್ಯಕ್ತಿಗಳು ಮಲಗುವುದು ಮಾಮೂಲಾಗಿದೆ. ಮುಖ್ಯ ರಸ್ತೆ ಬದಿಯಲ್ಲೇ ಇದ್ದರೂ, ನಿರ್ಲಕ್ಷ್ಯದಿಂದಾಗಿ ಪಾಳು ಬೀಳುವಂತಾಗಿದೆ. ಈ ಗ್ರಾಮೀಣ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆಗಳನ್ನು ಎ.ಪಿ.ಎಂ.ಸಿ. ಆರಂಭಿಸಿದಲ್ಲಿ ಆದಾಯದ ಜತೆಗೆ ಕಟ್ಟಡದ ಸದ್ಬಳಕೆಯೂ ಆಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.