Bellare: ಎಣ್ಮೂರಿನ ಮನೆಯೊಂದಕ್ಕೆ ಎನ್.ಐ.ಎ ದಾಳಿ
Team Udayavani, Mar 5, 2024, 11:39 AM IST
ಸುಳ್ಯ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕಲ್ಲೇರಿಯ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ಎನ್ಐಎ ಅಧಿಕಾರಿಗಳ ತಂಡ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ವಿಚಾರಣೆ ನಡೆಸಿರುವುದಾಗಿ ಹೇಳಲಾಗಿದೆ.
ಕೇರಳ ಮೂಲದ ವ್ಯಕ್ತಿಯನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯನ್ವಯ ವಿಚಾರಣೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಏಳು ರಾಜ್ಯಗಳ 17 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.