ಬೆಳ್ತಂಗಡಿ: ಪಜಿರಡ್ಕ ಸಂಗಮ ಕ್ಷೇತ್ರಕ್ಕೆ ರಸ್ತೆ-ಸೇತುವೆ ಸಂಪರ್ಕ

ಸುಮಾರು 3.5ಕಿ.ಮೀ. ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು.

Team Udayavani, Jan 21, 2023, 1:33 PM IST

ಬೆಳ್ತಂಗಡಿ: ಪಜಿರಡ್ಕ ಸಂಗಮ ಕ್ಷೇತ್ರಕ್ಕೆ ರಸ್ತೆ-ಸೇತುವೆ ಸಂಪರ್ಕ

ಬೆಳ್ತಂಗಡಿ: ನೇತ್ರಾವತಿ ಮತ್ತು ಕುಮಾರಧಾರಾ ನದಿ ಸೇರುವ ಕಲ್ಮಂಜ ಗ್ರಾ.ಪಂ. ವ್ಯಾಪ್ತಿಯ ಪಜಿರಡ್ಕ ಶ್ರೀ ಸದಾ ಶಿವೇಶ್ವರ ದೇವಸ್ಥಾನದ ಸಹಿತ ಊರಿನ ಜನರ ಹಲವು ವರ್ಷದ ಬೇಡಿಕೆಯೊಂದು ಈಡೇರುತ್ತಿದೆ.

800 ವರ್ಷದಷ್ಟು ಪುರಾತನ ಐತಿಹ್ಯವುಳ್ಳ ದೇವಸ್ಥಾನವಿದ್ದರೂ ಪಜಿರಡ್ಕ ಕ್ಷೇತ್ರದ ಅಭಿವೃದ್ಧಿ ದೃಷ್ಟಿಕೋನದಲ್ಲಿ ಬಹಳಷ್ಟು ಹಿಂದುಳಿದೆ. ಇದು 1923ರಲ್ಲಿ ಹಾಗೂ 2019ರಲ್ಲಿ ಪ್ರವಾಹಕ್ಕೆ ತುತ್ತಾದ ಊರಾಗಿದೆ. ಹಲವು ವರ್ಷಗಳ ಹಿಂದಿನಿಂದಲೇ ಕಲ್ಮಂಜ ಪಜಿರಡ್ಕ ಮಂದಿ ಸೇತುವೆ, ರಸ್ತೆಯ ಬೇಡಿಕೆ ಇಟ್ಟಿದ್ದರು. ಇದೀಗ ಕಾಲ ಸನ್ನಿಹಿತವಾಗಿದೆ. 2019 ಜೂನ್‌ 11ರಂದು ಉದಯವಾಣಿ ಸುದಿನ ಇಲ್ಲಿನ ಸಮಸ್ಯೆ ಕುರಿತು ವರದಿ ಪ್ರಕಟಿಸಿತ್ತು.

ಸೇತುವೆ ಸಹಿತ ಕಿಂಡಿ ಅಣೆಕಟ್ಟು ಧರ್ಮಸ್ಥಳ ಹಾಗೂ ಕಲ್ಮಂಜದ ಮತ್ತೂಂದು ಭಾಗದಿಂದ ಪಜಿರಡ್ಕ ದೇವಸ್ಥಾನಕ್ಕೆ ತಲುಪಲು ಧರ್ಮಸ್ಥಳ ಇಲ್ಲವೇ ಉಜಿರೆಯಾಗಿ ಸುತ್ತಿಬಳಸಿ ಬರ ಬೇಕಿತ್ತು. ಈಗ ಪಜಿರಡ್ಕ ದೇವಸ್ಥಾನ ಸಮೀಪ ನೇತ್ರಾವತಿ ನದಿಗೆ 5 ಕೋ.ರೂ. ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಗೊಂಡಿದೆ. ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ನೀರಾವರಿ ಸಹಿತ ಸಂಪರ್ಕ ಯೋಗ್ಯ ಕಾಮಗಾರಿ ಆಗಿದೆ.

ಸಂಪರ್ಕ ರಸ್ತೆ ಕಾಮಗಾರಿ ಚುರುಕು ಪಜಿರಡ್ಕಕ್ಕೆ ನಿಡಿಗಲ್‌ ಸೇತುವೆ ಪಕ್ಕದ ರಸ್ತೆ ಹಾಗೂ ಉಜಿರೆಯ ನೀರಚಿಲುಮೆ ಕನ್ಯಾಡಿ ಮೂಲಕ ಎರಡು ಸಂಪರ್ಕ ರಸ್ತೆಗಳಿವೆ. ನಿಡಿಗಲ್‌ನಿಂದ ಬರುವ ರಸ್ತೆಗೆ ಕಳೆದ ವರ್ಷ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 1.6 ಕಿ.ಮೀ. ವ್ಯಾಪ್ತಿಗೆ ಕಾಂಕ್ರೀಟ್‌ ಆಗಿತ್ತು. ನೀರಚಿಲುಮೆಯಿಂದ ಬರುವ ರಸ್ತೆಯಲ್ಲಿ 2 ಕಿ.ಮೀ. ರಸ್ತೆ ಡಾಮರು ಆಗಿತ್ತು. ಉಳಿದ ಸುಮಾರು 3.5ಕಿ.ಮೀ. ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು.

ಶಾಸಕ ಹರೀಶ್‌ ಪೂಂಜ ಅವರ ಮುತುವರ್ಜಿಯಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ಇದೀಗ ದೇವಸ್ಥಾನ ಸಂಪರ್ಕ ರಸ್ತೆಯ ಡಾಮರು ಕಾಮಗಾರಿ ಭರದಿಂದ ಸಾಗುತ್ತಿದೆ.

ಕಾಮಗಾರಿ ಪೂರ್ಣ 
ಪಜಿರಡ್ಕ ದೇವಸ್ಥಾನ ಸಹಿತ ಇಲ್ಲಿನ ಜನರ ಬಹುವರ್ಷದ ಬೇಡಿಕೆಯಾಗಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಜ. 31ರಿಂದ ಫೆ. 6ರ ತನಕ ಪಜಿರಡ್ಕ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿರುವುದರಿಂದ ಬಹುಬೇಗನೆ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು.
-ಹರೀಶ್‌ ಪೂಂಜ, ಶಾಸಕರು

ಕ್ಷೇತ್ರಕ್ಕೆ ವಿಶೇಷ ಮಹತ್ವ
ಪಜಿರಡ್ಕ ದೇವಸ್ಥಾನ ಸಂಗಮ ಕ್ಷೇತ್ರವಾದ್ದರಿಂದ ಪಿಂಡಪ್ರದಾನಕ್ಕೆ ವಿಶೇಷ ಮಹತ್ವವಿದೆ. ಇಲ್ಲಿರುವ ಮೋಕ್ಷ ಪದವನ್ನು ಅಭಿವೃದ್ಧಿಗೊಳಿಸುವ ಯೋಜನೆ ರೂಪಿಸಲಾಗಿದೆ. ನದಿಗೆ ಇಳಿಯುವ ಪ್ರದೇಶದಲ್ಲಿ ಮೆಟ್ಟಿಲುಗಳನ್ನು ಕಟ್ಟುವ ಕುರಿತು ಯೋಚಿಸಲಾಗಿದೆ. ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ.
-ತುಕಾರಾಮ ಸಾಲ್ಯಾನ್‌, ಪಜಿರಡ್ಕ ದೇಗುಲ ವ್ಯವಸ್ಥಾಪನ ಸಮಿತಿ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.