Belthangady: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಮೃತ್ಯು
Team Udayavani, Jul 16, 2023, 7:23 PM IST
ಬೆಳ್ತಂಗಡಿ: ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.
ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು