ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ
Team Udayavani, May 18, 2022, 12:34 PM IST
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ: ಕಳೆದ ಏ. 23 ರ ಮದ್ಯರಾತ್ರಿ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೇ ಇಲಾಖೆಯ ಸಿಬ್ಬಂದಿಯವರಾದ ಅನೂಫ್ ಎಂಬವರ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆ ದಾಖಲಾಗಿತ್ತು.
ಕಳೆದ ಏ. 27 ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಮುಖೇಶ್ ಎಂಬುವವರು ತಮ್ಮ ಬೈಕ್ ನ್ನು ರಸ್ತೆ ಬದಿ ನಿಲ್ಲಿಸಿದ್ದರು. ಮರುದಿನ ನೋಡುವಾಗ ಸುಮಾರು 1 ಲಕ್ಷದ ಮೌಲ್ಯದ ಬೈಕ್ ಕಳ್ಳತನವಾಗಿದೆ. ಈ ಬಗ್ಗೆ ಮುಖೇಶ್ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು, ಬೆಳ್ತಂಗಡಿಯ ಅಬೂಬ್ಬಕ್ಕರ್( 27), ಬಂಟ್ವಾಳದ ಅಕ್ಬರ್ (32), ಹಾಗೂ ಬೆಳ್ತಂಗಡಿಯ ಮೊಹಮ್ಮದ್ ಸಮೀರ್ (23) ಎಂಬುವವರನ್ನು ಬಂಧಿಸಿ, ಕಳವುಗೈದ ಎರಡು ಬೈಕ್ ಹಾಗೂ ಕೃತ್ಯಕ್ಕೆ ಬಳಸಲಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಅಧೀಕ್ಷಕರು ದ.ಕ. ಜಿಲ್ಲೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ. ಜಿಲ್ಲೆ ಮಂಗಳೂರು ರವರ ಮಾರ್ಗದರ್ಶನದಂತೆ, ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರು ಶಿವಾಂಸು ರಜಪೂತ್ ಮತ್ತು ಪೊಲೀಸ್ ನಿರೀಕ್ಷಕರಾದ ವಿವೇಕಾನಂದ ರವರ ನಿರ್ದೇಶನದಂತೆ ಪಿಎಸ್ಐಗಳಾದ ಅವಿನಾಶ್ ಕಲೈಮಾರ್ ನೇತೃತ್ವದಲ್ಲಿ ವಿಶೇಷ ತಂಡದ ಸಿಬ್ಬಂದಿಯವರಾದ ನಾರಾಯಣ, ಇರ್ಷಾದ್ ಪಿ, ಗಣೇಶ್, ಮನೋಹರ, ಪ್ರವೀಣ್, ಮೋಹನ, ನಾಗರಾಜ್, ಹಾಗೂ ಕಂಪ್ಯೂಟರ್ ವಿಭಾಗದ ಸಿಬ್ಬಂದಿಯವರಾದ ಸಂಪತ್ ಮತ್ತು ದಿವಾಕರ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತ್ಯೇಕ ರಾಜ್ಯ ಹೇಳಿಕೆಯನ್ನು ಪುನರ್ ಪರಿಶೀಲನೆ ನಡೆಸಿಕೊಳ್ಳಲಿ: ಗೃಹ ಸಚಿವ ಆರಗ ಜ್ಣಾನೇಂದ್ರ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ಸುಳ್ಯ : ಎರಡು ಅಂಗಡಿಯಲ್ಲಿ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ
ಉಪ್ಪಿನಂಗಡಿ :ಲಾಡ್ಜ್ ಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ : ಒಂಟಿ ಮಹಿಳೆಯ ಮನೆಯಿಂದ ಪಾತ್ರೆಗಳ ಕಳವು