
ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
Team Udayavani, Mar 30, 2023, 1:30 PM IST

ಕಡಬ: ಟ್ಯೂಷನ್ ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರದಂದು ಪತ್ತೆಯಾಗಿದೆ.
ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ.
ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿತ್ತು.
ಇದನ್ನೂ ಓದಿ:ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ. ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ಭಯದಿಂದ ಬಾಲಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
