ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕ ಕಣ್ಮರೆ
Team Udayavani, Aug 21, 2022, 5:16 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬೆಂಗಳೂರಿನ ಯುವಕನೋರ್ವ ಕಣ್ಮರೆಯಾಗಿರುವ ಘಟನೆ ಇಂದು (ಭಾನುವಾರ) ಸಂಭವಿಸಿದೆ.
ಮಂಡ್ಯ ಮೂಲದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶಿವು (25) ನೀರಲ್ಲಿ ಕಣ್ಮರೆಯಾಗಿರುವ ಯುವಕ ಎಂದು ಆತನ ಜೊತೆಗಾರರು ತಿಳಿಸಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಶಿವು ಬೆಂಗಳೂರಿನ ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿದ್ದು ಈ ವೇಳೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ನೀರಿಗೆ ಹಾರಿದ್ದು ಕೆಲ ಹೊತ್ತಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಯುವಕನಿಗೆ ಈಜು ಬರುತ್ತದೆ ಎಂದು ಜೊತೆಗಾರರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದವರು ಆಗಮಿಸಿ ಪತ್ತೆ ಕಾರ್ಯಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ