Thumbe ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಡಿ.ಸಿ.ಎಂ. ಡಿ.ಕೆ.ಶಿ. ಭೇಟಿ
Team Udayavani, Feb 17, 2024, 1:18 PM IST
ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಫೆ. 17ರ ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿ ನಿರ್ಮಾಣ ಕಾರ್ಯಗಳನ್ನು ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು.
ಜೀರ್ಣೋದ್ಧಾರ- ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಅಶ್ವನಿಕುಮಾರ್ ರೈ, ಪದ್ಮರಾಜ್ ಆರ್, ಇನಾಯಕ್ ಆಲಿ ಮೊದಲಾದ ಪ್ರಮುಖರು ಜತೆಗಿದ್ದರು.