ಬುಡಾ ಕಚೇರಿ ಬಿ.ಸಿ. ರೋಡ್‌ಗೆ ಸ್ಥಳಾಂತರ

Team Udayavani, Jun 23, 2020, 5:55 AM IST

ಬುಡಾ ಕಚೇರಿ ಬಿ.ಸಿ. ರೋಡ್‌ಗೆ ಸ್ಥಳಾಂತರ

ಬಂಟ್ವಾಳ: ಕಳೆದ 10 ವರ್ಷ ಗಳಿಂದ ಬಂಟ್ವಾಳ ಪುರಸಭೆ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ಪ್ರಸ್ತುತ ಪೂರ್ಣ ಪ್ರಮಾಣದಲ್ಲಿ ಬಿ.ಸಿ. ರೋಡ್‌ನ‌ ಪುರಸಭೆ ಕಟ್ಟಡದಲ್ಲಿ ಪ್ರಾಧಿಕಾರಕ್ಕೆ ಮೀಸಲಿರಿಸಲಾದ ಕಚೇರಿಗೆ ಸ್ಥಳಾಂತರಗೊಂಡಿದೆ.

ಈ ಕುರಿತು ನೂತನ ಕಚೇರಿಯಲ್ಲಿ ಬುಡಾ ಅಧ್ಯಕ್ಷ ಬಿ. ದೇವದಾಸ್‌ ಶೆಟ್ಟಿ ಅವರು ಪತ್ರಕರ್ತರ ಜತೆ ಮಾತನಾಡಿ, ಕಳೆದ 2 ವರ್ಷಗಳ ಹಿಂದೆ ಬಿ.ಸಿ.ರೋಡ್‌ನ‌ ಪುರಸಭೆ ಕಟ್ಟಡದಲ್ಲಿ ಬುಡಾ ಕಚೇರಿ ಉದ್ಘಾಟನೆಗೊಂಡಿದ್ದರೂ ಪೂರ್ಣ ಪ್ರಮಾಣದ ಕಚೇರಿ ಸ್ಥಳಾಂತರ ಗೊಂಡಿರಲಿಲ್ಲ. ಕಳೆದ ಮಾರ್ಚ್‌ ತಿಂಗಳಲ್ಲಿ ಸರಕಾರ ಬುಡಾಕ್ಕೆ ತನ್ನನ್ನು ಅಧ್ಯಕ್ಷನನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಈ ಕಟ್ಟಡದಲ್ಲೇ ತಾನು ಅಧಿಕಾರ ಸ್ವೀಕರಿಸಿದ್ದೆ. ಪ್ರಸ್ತುತ ಕೋವಿಡ್ ಲಾಕ್‌ಡೌನ್‌ ಬಳಿಕ ಜೂ. 15ರಿಂದ ಪೂರ್ಣ ಪ್ರಮಾಣದ ಕಚೇರಿ ಸ್ಥಳಾಂತರಗೊಂಡಿದೆ.

ಮುಂದಿನ ದಿನಗಳಲ್ಲಿ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ಕೂಡ ಇದೇ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಬಂಟ್ವಾಳ ಕಸ್ಬಾ, ಬಿ. ಮೂಡ, ಪಾಣೆಮಂಗಳೂರು ಗ್ರಾಮಗಳು ಹಾಗೂ ನರಿಕೊಂಬು, ಅಮಾಡಿ ಗ್ರಾಮಗಳ ಭಾಗಶಃ ವ್ಯಾಪ್ತಿಯನ್ನು ಈ ಕಚೇರಿ ಹೊಂದಿರುತ್ತದೆ ಎಂದರು.

ಸಮಸ್ಯೆಗಳ ಬಗ್ಗೆ ಚರ್ಚೆ
ತಾನು ಹಾಗೂ ಬುಡಾ ಸದಸ್ಯ ಕಾರ್ಯದರ್ಶಿಯವರು ಸಭೆಯಲ್ಲಿ ಭಾಗವಹಿಸಿ ಯೋಜನಾ ಪ್ರಾಧಿಕಾರದಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಕೂಡ ಚರ್ಚಿಸಿ, ಅದಕ್ಕೂ ಪರಿಹಾರ ಕಲ್ಪಿಸುವ ಭರವಸೆ ಸಿಕ್ಕಿದೆ. ಮುಂದೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬುಡಾ ಕಾರ್ಯನಿರ್ವಹಿಸಲಿದೆ ಎಂದು ದೇವದಾಸ್‌ ಶೆಟ್ಟಿ ತಿಳಿಸಿದರು.

ಸಿಂಗಲ್‌ ಲೇಔಟ್‌ ಸಮಸ್ಯೆಗೆ ಮುಕ್ತಿ
ಜೂ. 19ರಂದು ಬೆಂಗಳೂರಿನಲ್ಲಿ ಸಚಿವರು ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಭೆ ನಡೆದಿದ್ದು, ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಮೂಲಕ ತುಂಡು ಭೂಮಿಯ ಪರಿವರ್ತನೆ (ಸಿಂಗಲ್‌ ಲೇಔಟ್‌) ಏರಿಕೆಯಾದ ಅಭಿವೃದ್ಧಿ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದು, ಒಂದು ತಿಂಗಳೊಳಗೆ ಅದಕ್ಕೆ ಪರಿಹಾರ ಸಿಗಲಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.