Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
Team Udayavani, Mar 29, 2024, 8:46 PM IST
ಬೆಳ್ತಂಗಡಿ: ಗರ್ಡಾಡಿ ಕೊಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾ. 29ರಂದು ಸಂಭವಿಸಿದೆ.
ವೇಣೂರು ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಚರಂಡಿಗೆ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿದೆ.
ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲೈನ್ ಚಾರ್ಜ್ ಇತ್ತು. ತತ್ಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಮಡಂತ್ಯಾರು ಮೂಲದ ಕಾರು ಇದಾಗಿದ್ದು ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !