ಆಂತರಿಕ ವಿಮರ್ಶೆ ನಡೆಸಿ ನಿರ್ಧಾರ: ಡಾ| ಅಮಾತೆ ವಿಕ್ರಂ

Team Udayavani, Mar 16, 2019, 9:19 AM IST

16-march-14.jpg

ಬಂಟ್ವಾಳ:  ಬಿ.ಸಿ. ರೋಡ್‌ ನಗರದ ಬಸ್‌ ಸಂಚಾರದಲ್ಲಿ ಪೊಲೀಸ್‌ ವ್ಯವಸ್ಥೆಯಿಂದ ಆಗಿರುವ ಬದಲಾವಣೆ ಬಗ್ಗೆ ಆಂತರಿಕ ವಿಮರ್ಶೆ ನಡೆಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ| ಅಮಾತೆ ವಿಕ್ರಂ ಹೇಳಿದರು.

ಅವರು ಮಾ. 14ರಂದು ಬಿ.ಸಿ. ರೋಡ್‌ ತಾ.ಪಂ. ಸಭಾಂಗಣದಲ್ಲಿ ಬಸ್‌ ಸಂಚಾರ ಬದಲಾವಣೆ ಬಳಿಕದ ಸಮಸ್ಯೆ ಸಾರ್ವಜನಿಕ ಅಭಿಪ್ರಾಯ ಸ್ವೀಕರಿಸಿ ಮಾತನಾಡಿದರು.

ಸಭೆಯಲ್ಲಿ ಸಾರ್ವಜನಿಕರ ಪರವಾಗಿ ಸಾಮಾಜಿಕ ನೇತಾರರಾದ ಸದಾಶಿವ ಬಂಗೇರ, ಪ್ರಭಾಕರ ದೈವಗುಡ್ಡೆ, ಲೋಕೇಶ್‌, ಕೇಶವ ದೈಪಲ, ವಾಲ್ಟರ್‌ ಮೊದಲಾದವರು ಮಾತನಾಡಿ, ಬಿ.ಸಿ. ರೋಡ್‌ ಸರ್ವಿಸ್‌ ರಸ್ತೆಗೆ ಬಸ್‌ ಬಾರದೆ ಫ್ಲೈ ಓವರ್‌ ಮೇಲಿಂದ ಹೋಗುವುದರಿಂದ ಸರ್ವಿಸ್‌ ಬಸ್‌ ನಿಲ್ದಾಣ ಅಥವಾ ವಿವಿಧ ಸರಕಾರಿ ಕಚೇರಿಗಳಿಗೆ ಬರುವವರು ನಡೆದೇ ಬರಬೇಕು ಅಥವಾ ಅಟೋದಲ್ಲಿ ಬರಬೇಕು. ನಡೆದು ಬರುವುದಕ್ಕೆ ಸೂಕ್ತ ಫ‌ುಟ್‌ಪಾತ್‌ ಇಲ್ಲ. ಕಿರಿದಾದ ರಸ್ತೆ, ವೇಗವಾಗಿ ಬರುವಂತಹ ವಾಹನಗಳು, ರಸ್ತೆಯಲ್ಲಿ ನಡೆಯುವಾಗ ಹಿಂದೆ ನೋಡಿ ನಡೆಯಬೇಕಾದ ಸಮಸ್ಯೆ ಇಲ್ಲಿದೆ ಎಂದು ಬಸ್‌ ಸಂಚಾರ ಬದಲಾವಣೆಯ ಅನಂತರದ ಸಮಸ್ಯೆ ವಿವರಿಸಿದರು. 

ಆಟೋ ಚಾಲಕರ ಸಮಸ್ಯೆ ಬಗ್ಗೆ ವಿವಿಧ ಸಂಘಟನೆಗಳ ನೇತಾರರಾದ ವಸಂತ್‌, ಯಾಕೂಬ್‌, ಸಂಶುದ್ದೀನ್‌ ಮಾತನಾಡಿ, ನಗರ ಗ್ರಾಮಾಂತರ ಎಂಬ ಆಟೋ ಪರ್ಮಿಟ್‌ ವಿಂಗಡಿಸಿ ನೀಡಬೇಕೆಂದು ಆಗ್ರಹಿಸಿದರು. ಆಟೋಗಳಿಗೆ ಬಿ.ಸಿ. ರೋಡ್‌ ನಲ್ಲಿ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸುವ ಮೂಲಕ ಅನುಕೂಲ ಮಾಡಿ ಕೊಡುವಂತೆ ಅಭಿಪ್ರಾಯ ನೀಡಿದರು. 

ಬಂಟ್ವಾಳ ಉಪ ವಿಭಾಗ ಎಎಸ್‌ಪಿ ಸೈದುಲ್‌ ಅಡಾವತ್‌ ಮಾತನಾಡಿ ಮಂಗಳೂರು – ಬೆಂಗಳೂರು, ಧರ್ಮಸ್ಥಳ- ಮಂಗಳೂರು, ಪುತ್ತೂರು -ಮಂಗಳೂರು ನೇರ ಸಂಚಾರದ ಬಸ್‌ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಅವುಗಳನ್ನು ಫ್ಲೈ  ಓವರ್‌ನಲ್ಲಿ ನೇರ ಹೋಗುವಂತೆ, ಎಲ್ಲ ಸರ್ವಿಸ್‌, ಖಾಸಗಿ ಬಸ್‌ಗಳು ಸರ್ವಿಸ್‌ ರಸ್ತೆಯಲ್ಲಿ ಬರುವಂತೆ ಕ್ರಮ ಕೈಗೊಂಡಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಬದಲಾವಣೆ ತರಲಾಗಿದ್ದು, ಸಂಚಾರ ಒತ್ತಡ ಕಡಿಮೆ ಮಾಡುವ ಪ್ರಯತ್ನ ಮಾಡಲಾಗಿದೆ.

ಬದಲಾವಣೆಗಳನ್ನು ಜನರು ಸ್ವಾಗತಿಸ ಬೇಕು. ಅನನುಕೂಲ ಸಂದರ್ಭ ಎದುರಾದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಈ ಸಭೆ ಕರೆಯಲಾಗಿದೆ. ಅಭಿಪ್ರಾಯ ಸಂಗ್ರಹ ಮಾಡುವ ಮೂಲಕ ನಗರದಲ್ಲಿ ಸೌಕರ್ಯ ಕಲ್ಪಿಸುವ ಉದ್ದೇಶ ಹೊಂದಿದೆ ಎಂದರು.

ಬಂಟ್ವಾಳ ವೃತ್ತ ನಿರೀಕ್ಷಕ ಶರಣ್‌ ಗೌಡ, ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಕುಮಾರ್‌, ಸಂಚಾರ ಠಾಣಾಧಿಕಾರಿ ಮಂಜುನಾಥ್‌, ಅಪರಾಧ ಪತ್ತೆ ವಿಭಾಗದ ಎಸ್‌ಐ ಸುಧಾಕರ ತೋನ್ಸೆ, ಕೆಎಸ್‌ ಆರ್‌ಟಿಸಿ, ಆರ್‌ಟಿಒ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.