ಕುಸಿಯುವ ಭೀತಿಯಲ್ಲಿ ಚೆಲ್ಯಡ್ಕ ಮುಳುಗು ಸೇತುವೆ

ಆಧಾರ ಸ್ತಂಭದ ಕಗ್ಗಲ್ಲು ಕೆಳಭಾಗದಲ್ಲಿ ಕಳಚಿ ಹೋಗಿದೆ; ಮಳೆಗಾಲದಲ್ಲಿ ಅಪಾಯ

Team Udayavani, Jun 16, 2019, 9:19 AM IST

z-31

ಈಶ್ವರಮಂಗಲ: ಚೆಲ್ಯಡ್ಕದ ಲ್ಲಿರುವ ಪುತ್ತೂರು ತಾಲೂಕಿನ ಏಕೈಕ ಮುಳುಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಕುಸಿಯುವ ಭೀತಿ ಎದುರಾಗಿದೆ. ಈ ಸೇತುವೆಯ ಕುರಿತು ಅಧಿಕಾರಿಗಳು ಲಕ್ಷ್ಯ ವಹಿಸಿ ದುರಸ್ತಿ ಮಾಡಿಸಬೇಕು, ಇಲ್ಲವೇ ಮಳೆಗಾಲದಲ್ಲಿ ಹಲವು ಬಾರಿ ಮುಳುಗಡೆಯಾಗುವ ಸೇತುವೆಯ ಬದಲು ಸರ್ವಋತು ಸಂಪರ್ಕ ಸೇತುವೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಬೆಟ್ಟಂಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆ ನದಿಯ ತಳದಿಂದ ಕೇವಲ ಐದಾರು ಅಡಿಗಳಷ್ಟು ಎತ್ತರವಿದ್ದು, ಮಳೆಗಾಲದ ಸಂದರ್ಭದಲ್ಲಿ ಆಗಾಗ ಮುಳುಗಡೆಯಾಗುವುದರಿಂದ ಸಂಚಾರ ಸ್ಥಗಿತಗೊಳ್ಳುತ್ತದೆ. ಸೇತುವೆ ಇಕ್ಕೆಲಗಳಲ್ಲಿ ತಡೆಗೋಡೆ ಇಲ್ಲದಿದ್ದರೂ ಈವರೆಗೆ ಅದೃಷ್ಟವಶಾತ್‌ ಜೀವಹಾನಿ ಸಂಭವಿಸಿಲ್ಲ.ಸೇತುವೆ ಮುಳು ಗಡೆಯಾದರೆ ಗುಮ್ಮಟ ಗದ್ದೆ, ಅಜ್ಜಿಕಲ್ಲು, ಚಿಲ್ಮೆತ್ತಾರು, ಬಳೇರಿ ಅಸುಪಾಸಿನ ಜನತೆ ಸಂಪರ್ಕ ಕಳೆದುಕೊಳ್ಳುತ್ತಾರೆ.

ಹಲವು ಖಾಸಗಿ ಬಸ್‌ಗಳು ಇದೇ ರಸ್ತೆಯಲ್ಲಿ ಸಂಚರಿಸಲು ಪರವಾನಿಗೆ ಹೊಂದಿದ್ದು, ಮುಳುಗಡೆ ಸಂದರ್ಭ ಸಂಟ್ಯಾರ್‌ ಮೂಲಕವಾಗಿ ಸಂಚರಿಸಬೇಕಾಗಿದೆ. ದೇವಸ್ಯದಿಂದ ಪುತ್ತೂರು ಮತ್ತು ಚೆಲ್ಯಡ್ಕದಿಂದ ಪಾಣಾಜೆಯವರೆಗೆ ಲೋಕೋಪಯೋಗಿ ಇಲಾಖೆ ರಸ್ತೆಯಾದರೆ ಇದರ ನಡುವೆ ಸುಮಾರು 4 ಕಿ.ಮೀ. ಜಿ.ಪಂ. ರಸ್ತೆಯಾಗಿದೆ. ದೇವಸ್ಯದಿಂದ ಅಜ್ಜಿಕಲ್ಲುವಿನವರೆಗೆ ರಸ್ತೆ ಅಭಿವೃದ್ಧಿಗೊಂಡಿದ್ದು, ಉಳಿದ ಭಾಗದ ರಸ್ತೆ ಅಭಿವೃದ್ಧಿ ಜತೆತೆ ಸರ್ವಋತು ಸೇತುವೆ ಕಾಮಗಾರಿ ಆಗಬೇಕಾಗಿದೆ.

1.50 ಕೋಟಿ ರೂ. ಪ್ರಸ್ತಾವನೆ
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ 1.50 ಕೋಟಿ ರೂ. ವೆಚ್ಚದ ಕಾಮಗಾರಿಯ ಪ್ರಸ್ತಾವನೆಯನ್ನು ನಬಾರ್ಡ್‌ ಮೂಲಕ ಸರಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಈ ಬೇಸಗೆಯಲ್ಲಿ ಮಂಜೂರಾತಿ ಪ್ರಕ್ರಿಯೆ ನಡೆಯದೇ ಇರುವುದರಿಂದ ಸರಕಾರ ಮಟ್ಟದಿಂದ ಅನುಮೋದನೆಗೆ ಬಾಕಿಯಿದೆ.

ಶಿಥಿಲಾವಸ್ಥೆಯಲ್ಲಿದೆ ಮುಳುಗು ಸೇತುವೆ
ಸುಮಾರು 45 ವರ್ಷಗಳ ಹಿಂದೆ ಚೆಲ್ಯಡ್ಕ ಎನ್ನುವಲ್ಲಿ ನಿರ್ಮಾಣ ಮಾಡಿರುವ ಸೇತುವೆ ಈಗ ಶಿಥಿಲಾವಸ್ಥೆಗೆ ತಲುಪಿ, ಕುಸಿಯುವ ಭೀತಿಯಲ್ಲಿದೆ. ಸೇತುವೆ ಆಧಾರ ಸ್ತಂಭದ ಕಗ್ಗಲ್ಲು ಕೆಳಭಾಗದಲ್ಲಿ ಕಳಚಿ ಹೋಗಿದೆ. ಸ್ತಂಭಕ್ಕೆ ಆಳವಡಿಸಿದ ಕಬ್ಬಿಣದ ರಾಡ್‌ಗಳು ನೇತಾಡುತ್ತಿವೆ. ಕಗ್ಗಲ್ಲಿನಿಂದ ನಿರ್ಮಿಸಲಾಗಿದ್ದ ಸೇತುವೆಯ ಆಧಾರ ಸ್ತಂಭದ ಗೋಡೆ ಮಾತ್ರವಲ್ಲದೆ ಸೇತುವೆ ಮೇಲ್ಗಡೆಯೂ ಬಿರುಕು ಕಾಣಿಸುತ್ತಿದೆ. ಮಳೆಗಾಲದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿಸಿದೆ. ಭಾರೀ ಮಳೆ ಸುರಿದರೆ ನೆರೆಯ ನೀರು ತುಂಬಿ ಸೇತುವೆ ಮುಳುಗುವ ಜತೆಗೆ ನೀರಿನೊಂದಿಗೆ ಭಾರೀ ಗಾತ್ರದ ಮರದ ದಿಮ್ಮಿಗಳು ಬಂದು ಸೇತುವೆಗೆ ಬಡಿದರೆ ಕುಸಿಯುವ ಸಾಧ್ಯತೆಯೇ ಹೆಚ್ಚು.

ಸೇತುವೆ ಪರಿಶೀಲಿಸಲಿ
ಕಳೆದ ಮಳೆಗಾಲದಲ್ಲಿ ಬಂಟ್ವಾಳ ಸಮೀಪದ ಮೂಲರಪಟ್ನ ಸೇತುವೆ ಕುಸಿದ ನೆನಪು ಮಾಸುವ ಮೊದಲೇ ಈ ಸೇತುವೆಯೂ ಅಪಾಯದ ಕರೆಗಂಟೆ ಬಾರಿಸುತ್ತಿದ್ದು, ಅಧಿಕಾರಿಗಳು ಸೇತುವೆಯ ಗುಣಮಟ್ಟ ಹಾಗೂ ಧಾರಣ ಸಾಮರ್ಥ್ಯವನ್ನು ಪರೀಕ್ಷಿಸಿ, ಜನ ಹಾಗೂ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕುಸಿಯುವ ಸಾಧ್ಯತೆ ಹೆಚ್ಚು
ಹಲವು ವರ್ಷಗಳ ಕನಸು ನನಸಾಗಿಲ್ಲ. ಮಳೆಗಾಲದಲ್ಲಿ ಪ್ರವಾಹದ ಸಂದರ್ಭ ಅನಾಹುತ ಸಂಭವಿಸುವ ಅಪಾಯವಿದೆ. ಸೇತುವೆ ಕುಸಿಯುವ ಸಾಧ್ಯತೆ ಇರುವುದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಇಲ್ಲಿ ಹೊಸದಾಗಿ ಸರ್ವಋತು ಸೇತುವೆ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. – ಸನತ್‌ ಕುಮಾರ್‌ ಸ್ಥಳೀಯ ನಿವಾಸಿ

ಅನುಮತಿ ಬಾಕಿ ಇದೆ
ಇದು ಜಿ.ಪಂ. ರಸ್ತೆಯಾಗಿದೆ. ಲೋಕೋಪಯೋಗಿ ಇಲಾಖೆಯಿಂದ ನಬಾರ್ಡ್‌ 25ನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ನಡೆಯುತ್ತದೆ. ಸರಕಾರ ಅನುಮತಿ ನೀಡುವುದು ಬಾಕಿ ಉಳಿದಿದೆ.
– ಪ್ರಮೋದ್‌ ಕುಮಾರ್‌, ಲೋಕೋ ಪಯೋಗಿ ಎಂಜಿನಿಯರ್‌, ಪುತ್ತೂರು

ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.