‘ಶಾಲೆಯ ನೂತನ ಕಟ್ಟಡಕ್ಕೆ  ಪ್ರಯತ್ನ` 


Team Udayavani, Dec 23, 2018, 2:48 PM IST

23-december-16.gif

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಉನ್ನತೀಕರಿಸಿದ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಶತಮಾನೋತ್ಸವದ ಸವಿನೆನಪಿಗಾಗಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭೋಜನ ಶಾಲೆಯನ್ನು ಮತ್ತು ಶತಮಾನೋತ್ಸವ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಉದ್ಘಾಟಿಸಿ, ಕನ್ನಡ ಮಾಧ್ಯಮದ ಸರಕಾರಿ ಶಾಲೆಗಳು ಮುಚ್ಚುತ್ತಿರುವ ಕಾಲಘಟ್ಟದಲ್ಲಿ ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಆಚರಿಸುತ್ತಿರುವುದು ನಮಗೆ ಮತ್ತು ಊರವರಿಗೆ ಹೆಮ್ಮೆಯ ವಿಷಯವಾಗಿದೆ. ಈ ಶಾಲೆಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಾಸಕನ ನೆಲೆಯಲ್ಲಿ ಪ್ರಯತ್ನಿಸಲಾಗುವುದು ಎಂದರು.

ಈ ಶಾಲೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ಮಂದಿ ಉನ್ನತ ಸ್ಥಾನ ಪಡೆದಿದ್ದು, ಪ್ರಸ್ತುತ ಈ ಶಾಲೆ 308 ವಿದ್ಯಾರ್ಥಿಗಳನ್ನು ಹೊಂದಿರುವುದು ಇಲ್ಲಿನ ಜನರಿಗೆ ಶಾಲೆಯ ಮೇಲಿನ ಕಾಳಜಿಯ ದ್ಯೋತಕ. ಸಮುದಾಯದ ಒಗ್ಗೂಡುವಿಕೆಯಿಂದ ಶಾಲೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭ ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್‌ ಎಂ. ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ತಾ.ಪಂ. ಸದಸ್ಯೆ ರತ್ನಾವತಿ ಜೆ. ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಎನ್‌., ದಿಲ್ಲಿ ಕರ್ನಾಟಕ ಭವನದ ಸುಧಾಕರ ನಾಯಕ್‌ ಪರಾರಿ, ವಾರ್ತಾ ವಾಚಕಿ ಸುಕನ್ಯಾ ಸಂಪತ್‌, ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್‌, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್‌, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಹಂಝ ಎ. ಬಸ್ತಿಕೋಡಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪ್ರಮೀಳಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಸಮಿತಿ ಪದಾಧಿಕಾರಿಗಳಾದ ಡೆನಿಸ್‌ ಫೆರ್ನಾಂಡಿಸ್‌, ನಾರಾಯಣ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಸುನಿತ್‌ ರೈ ದಪ್ಪರಬೈಲು, ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನವೀನ್‌ಚಂದ್ರ ಶೆಟ್ಟಿ, ಸತೀಶ್‌ ಶೆಟ್ಟಿ, ಕಮಲ್‌ ಶೆಟ್ಟಿ, ಶ್ರೀಧರ ಪೈ, ರಾಮರಾಯ ನಾಯಕ್‌, ಸತೀಶ್‌ ಅಂತರಗುತ್ತು, ಪ್ರಕಾಶ್‌ ಗಟ್ಟಿ ಬಸ್ತಿಕೋಡಿ, ಚಂದ್ರಶೇಖರ ಶೆಟ್ಟಿ, ಶಾಲಾಭಿವೃದ್ಧಿ, ಶತಮಾನೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮಾನ
ಈ ಸಂದರ್ಭ ಶಾಲೆಯಲ್ಲಿ ಈ ಹಿಂದೆ ಶಿಕ್ಷಕರಾಗಿದ್ದ 50 ಮಂದಿ ಶಿಕ್ಷಕರಿಗೆ ಮತ್ತು 10 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಆನಂದ ಆಚಾರ್ಯ ಸ್ವಾಗತಿಸಿ, ಸಮಿತಿ ಸಲಹೆಗಾರ, ಪರ್ತಕರ್ತ ಗೋಪಾಲ ಅಂಚನ್‌ ಪ್ರಸ್ತಾವಿಸಿದರು. ಮುಖ್ಯ ಶಿಕ್ಷಕಿ ಜಾನೆಟ್‌ ಕೊನ್ಸೆಸೊ ವರದಿ ವಾಚಿಸಿದರು. ಕೋಶಾಧಿಕಾರಿ ಅನಂತ ಪೈ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್‌ ಕುಮಾರ್‌ ಸಮ್ಮಾನಿತರ ವಿವರ ನೀಡಿದರು. ರಂಗ ಕಲಾವಿದ ಎಚ್ಕೆ ನಯನಾಡು, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ನಿರೂಪಿಸಿದರು.

ಗುಣಮಟ್ಟದ ಶಿಕ್ಷಣ
ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ವಾಮದಪದವುನಲ್ಲಿ ಪ್ರಾಥಮಿಕ ಶಿಕ್ಷಣದಿಂದ ತೊಡಗಿ ಪದವಿ ಕಾಲೇಜಿನವರೆಗೆ ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.