
ಅನ್ಯಧರ್ಮದ ಯುವಕನಿಂದ ಮಹಿಳೆಗೆ ಕಿರುಕುಳ
Team Udayavani, Sep 15, 2022, 7:15 AM IST

ಪುತ್ತೂರು: ಅಂಗಡಿಯೊಂದರಲ್ಲಿ ದಿನಸಿ ಸಾಮಗ್ರಿ ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿಯಲ್ಲಿ ಮಾಲಕನಿಲ್ಲದ ಸಂದರ್ಭ ಸ್ಥಳದಲ್ಲಿದ್ದ ಅನ್ಯಧರ್ಮದ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದು, ಹಿಂದೂ ಸಂಘಟನೆಯ ನೂರಾರು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ ಘಟನೆ ಸೆ. 14ರಂದು ತಿಂಗಳಾಡಿಯಲ್ಲಿ ನಡೆದಿದೆ.
ಸರ್ವೆ ನೇರೋಳ್ತಡ್ಕದ ಮಹಿಳೆ ಬುಧವಾರ ಸಂಜೆ ತಿಂಗಳಾಡಿ ಯಲ್ಲಿರುವ ಸೂಪರ್ ಬಜಾರ್‌ಗೆ ಸಾಮಗ್ರಿ ಖರೀದಿಸಲು ಬಂದಿದ್ದರು. ಅಂಗಡಿ ಮಾಲಕ ಹಮೀದ್ ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆೆ. ಈ ವೇಳೆ ಮಹಿಳೆ ಕಿರುಚಿದಾಗ ಜನ ಸೇರಿದ್ದು, ಆರೋಪಿ ಸ್ಥಳದಿಂದ ಪರಾರಿ ಯಾಗಿದ್ದಾನೆ. ಘಟನೆ ಸುದ್ದಿಯಾಗುತ್ತಲೇ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಹಿಂದೂ ಯುವಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಸೆ. 15ರ ಬೆಳಗ್ಗೆ 8 ಗಂಟೆಯೊಳಗೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಕೆದಂಬಾಡಿ ಗ್ರಾ.ಪಂ. ಅಧ್ಯಕ್ಷ ರತನ್ ರೈ ಕುಂಬ್ರ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಸದಸ್ಯರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ವಿಟuಲ ರೈ ಮಿತ್ತೋಡಿ, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅಶೋಕ್ ತ್ಯಾಗರಾಜನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಘಟನೆಯನ್ನು ಶಾಸಕ ಸಂಜೀವ ಮಠಂದೂರು ಮತ್ತು ವಿಹಿಂಪ, ಬಜರಂಗದಳದ ಮುಖಂಡರು ಖಂಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
