ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ, ಮದ್ಯ ವಶ
Team Udayavani, May 24, 2022, 12:10 AM IST
ಬಂಟ್ವಾಳ: ಲೊರೆಟ್ಟೋಪದವಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಪಡಿಸಿದ್ದಾರೆ.
ಪಂಜಿಕಲ್ಲು ಗ್ರಾಮದ ನಿವಾಸಿ ಪೂವನಬೆಟ್ಟು ನಿವಾಸಿ ರಾಜೇಶ್ ಪೂಜಾರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ.
ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವಿನಾಶ್ ಗೌಡ ಗಸ್ತು ತಿರುಗುತ್ತಿದ್ದ ವೇಳೆಗೆ ಬಂದ ಮಾಹಿತಿಯಂತೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
350 ಎಂಎಲ್‌ನ ಚಿಲ್ಲರೆ ಮಾರಾಟ ಮಾಡುವ 8 ಪಿಎಂ ಬಾಟಲಿ, 750 ಎಂಎಲ್ ಮದ್ಯ, 200 ರೂ. ನಗದು ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಮಂಜೂರಿನಲ್ಲಿ ಓರ್ವ ವಶ
ಮಂಗಳೂರು: ವಾಮಂಜೂರಿನಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪೂವಪ್ಪ ಶೆಟ್ಟಿ(68)ಯನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿದ್ದ ಕೆಲವು ಮಂದಿ ಓಡಿ ಹೋಗಿದ್ದಾರೆ. ಪೂವಪ್ಪ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದು ಆತ ಗಂಜಿ ಊಟ ತಯಾರಿಸಿ ಮಾರಾಟ ಮಾಡುತ್ತಿರುವ ಶೆಡ್‌ನಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಆತನ ಬಳಿ ಇದ್ದ 90 ಎಂಎಲ್ ಪ್ರಮಾಣದ ಒಟ್ಟು 1,620 ರೂ. ಮೌಲ್ಯದ 45 ವಿಸ್ಕಿ ಟೆಟ್ರಾ ಪ್ಯಾಕೆಟ್ ಹಾಗೂ 200 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್
ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು