ಧರ್ಮಸ್ಥಳ: ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ
Team Udayavani, Dec 16, 2020, 11:46 PM IST
ಧರ್ಮಸ್ಥಳದಲ್ಲಿ ಸಮವಸರಣ ಪೂಜೆ ನೆರವೇರಿತು.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನೆರವೇರಿತು.
ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, ಸ್ತೋತ್ರ ಮತ್ತು ಪೂಜಾಮಂತ್ರ ಪಠಣ ಮಾಡಿದರು.ಎಸ್.ಡಿ.ಎಂ. ತಂಡದ ತೃಪ್ತ ಜೈನ್, ಸುಮನ್ ಜೈನ್, ಸಮ್ಯಕ್ ಜೈನ್, ರಂಜಿತ್ ಮತ್ತು ವಿನ್ಯಾಸ್ ಜೈನ್ ಬಳಗದವರು ಜಿನ ಭಜನೆಗಳನ್ನು ಹಾಡಿದರು.
ಮಹಾಮಂಗಳಾರತಿ ಮತ್ತು ಶಾಂತಿಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ
ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಡಾ| ಬಿ.ಯಶೋವರ್ಮ, ಶ್ರದ್ಧಾ ಅಮಿತ್, ಶುೃತ, ಮೈತ್ರಿ, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್ ಮತ್ತು ಮಾಣಿಲದ ಮೋಹನ ದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444