Udayavni Special

ಸೇವಾಜೆ-ಕಜೆ ಸಂಚಾರವೇ ಪ್ರಯಾಣಿಕನಿಗೆ ಸಜೆ!

Team Udayavani, Feb 28, 2019, 6:46 AM IST

28-february-7.jpg

ಗುತ್ತಿಗಾರು : ಡಾಮರು ಹಾಕಿದ್ದಕ್ಕೆ ಕುರುಹೇ ಇಲ್ಲದ ಸ್ಥಿತಿ. ಸಂಚರಿಸಿದರೆ ಧೂಳಿನ ರಾಶಿ, ಅಲ್ಲಲ್ಲಿ ಸೃಷ್ಟಿಯಾಗಿರುವ ಬೃಹತ್‌ ಗುಂಡಿಗಳು, ಪ್ರಯಾಣಿಕರು ಗುರಿ ಮುಟ್ಟುವುದೇ ಇಲ್ಲಿ ಬಹು ದೊಡ್ಡ ಸವಾಲು. ಮಡಪ್ಪಾಡಿ- ಎಲಿಮಲೆ ನಡುವಿನ ರಸ್ತೆಯಲ್ಲಿ ಸೇವಾಜೆಯಿಂದ ಕಜೆ ತನಕ ತೆರಳುವುದೇ ಪ್ರಯಾಣಿಕರಿಗೆ ಸಜೆಯಾಗಿದೆ!

ಸೇವಾಜೆಯಿಂದ ಕಜೆ ವರೆಗಿನ 4 ಕಿ.ಮೀ. ಜಿ.ಪಂ. ರಸ್ತೆ ಡಾಮರು ಕಾಣದೆ ಹಲವು ವರ್ಷಗಳೇ ಕಳೆದಿವೆ. ದಿನ ನಿತ್ಯ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಕೆಲಸಗಳಿಗೆ, ದೂರದ ಊರಿಗೆ ಗ್ರಾಮಸ್ಥರು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅವರಿಗೆ ಬೇರೆ ವ್ಯವಸ್ಥೆ ಇಲ್ಲ. ಇದರಲ್ಲಿ ಪ್ರಯಾಣಿಸುವ ಕಷ್ಟದ ಅರಿವಿದ್ದರೂ, ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಪ್ರಸ್ತಾವ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಸ್ಥಳೀಯರು ರಸ್ತೆ ದುರಸ್ತಿಯ ನಿರೀಕ್ಷೆಯನ್ನೇ ಕೈ ಬಿಟ್ಟಿದ್ದಾರೆ. 

ಸಂಪರ್ಕ ರಸ್ತೆ
ಗ್ರಾಮೀಣ ಪ್ರದೇಶ ಮಡಪ್ಪಾಡಿಗೆ ಅತ್ಯಂತ ಹತ್ತಿರದ ಸಂಪರ್ಕ ರಸ್ತೆ ಇದಾಗಿದೆ. ಇದು ಹದೆಗೆಟ್ಟ ಕಾರಣ ಮಡಪ್ಪಾಡಿ ನಾಗರಿಕರು ಬದಲಿ ರಸ್ತೆಯನ್ನು ಬಳಸಿ ತಾಲೂಕು ಕೇಂದ್ರ ಸುಳ್ಯ ಸಹಿತ ವಿವಿಧೆಡೆಗೆ ಪ್ರಯಾಣಿಸುತ್ತಾರೆ. ಕಜೆಯಿಂದ ಬಲ್ಕಜೆ ತನಕ ಕಳೆದ ವರ್ಷ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 3 ಕಿ.ಮೀ.ನಷ್ಟು ರಸ್ತೆಗೆ ಡಾಮರು ಹಾಕಲಾಗಿದೆ. ಅದಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಮಾತ್ರ ನಿರ್ವಾಣ ಸ್ಥಿತಿಯಲ್ಲಿದೆ.

ಬೇರೆ ಅನುದಾನಕ್ಕೆ ಪ್ರಯತ್ನ
ಈ ಹಿಂದೆ ಸಡಕ್‌ ಯೋಜನೆಯಲ್ಲಿ ಅಭಿವೃದ್ಧಿಗೊಳಿಸಿ ಈ ರಸ್ತೆಯನ್ನು ಜಿ.ಪಂ. ಹಸ್ತಾಂತರಿಸಲಾಗಿತ್ತು. ಆದರೆ ರಸ್ತೆ ಅಭಿವೃದ್ಧಿಗೆ ಜಿ.ಪಂ.ನಲ್ಲಿ ಅನುದಾನದ ಕೊರತೆ ಇದೆ. ಹಾಗಾಗಿ ಶಾಸಕರ ಅನುದಾನದಲ್ಲಿ ರಸ್ತೆಗೆ
ಅನುದಾನ ಕಾದಿರಿಸಲು ಪ್ರಯತ್ನ ನಡೆಸಲಾಗುವುದು.
 - ಆಶಾ ತಿಮ್ಮಪ್ಪ,
  ಜಿ.ಪಂ. ಸದಸ್ಯೆ, ಗುತ್ತಿಗಾರು

ಮಳೆಗಾಲದಲ್ಲಿ ನರಕ
ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಸಂಚರಿಸಲು ಕಷ್ಟವಾಗುತ್ತಿದೆ. ಆದಷ್ಟು ಬೇಗ ಈ ರಸ್ತೆಗೆ ಅನುದಾನ ತರಿಸುವಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು, ಇಲಾಖೆ ಕಾರ್ಯನ್ಮುಖವಾಗಬೇಕಿದೆ. ಮಳೆಗಾಲದಲ್ಲಿ ಇಲ್ಲಿ ಪ್ರಯಾಣ ನರಕಸದೃಶವಾಗಲಿದೆ.
– ಶುಭಕರ ಎನ್‌.ಎಂ.,
ರಸ್ತೆ ಫಲಾನುಭವಿ

ವಿಶೇಷ ವರದಿ

ಟಾಪ್ ನ್ಯೂಸ್

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

1-www

ಲ್ಯಾಪ್‌ಟಾಪ್‌ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

sirsi news

ಅಕ್ರಮ ಗೋ ಹತ್ಯೆ ಆರೋಪ : ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.