ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಪರಿವರ್ತನ ಪ್ರಪಂಚದಲ್ಲಿ ಸ್ವಾಭಾವಿಕ ಬದುಕೇ ಶ್ರೇಷ್ಠ: ಡಾ| ಹೆಗ್ಗಡೆ

Team Udayavani, Nov 29, 2021, 5:28 AM IST

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಬೆಳ್ತಂಗಡಿ: ಪ್ರಪಂಚದ ಪರಿವರ್ತನೆಯಲ್ಲಿ ಕೃತಕವಾಗಿ ಬದುಕದೆ ಸ್ವಾಭಾವಿಕವಾಗಿ ಜೀವಿಸುವುದನ್ನು ಕಲಿತಾಗ ಎಲ್ಲವೂ ಸುಂದರ ಕ್ಷಣವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಕಲಾವಿದ, ಬಹುಶ್ರುತ ವಿದ್ವಾಂಸರಾದ ಡಾ| ಎಂ.ಪ್ರಭಾಕರ ಜೋಶಿ ಅವರು ಬರೆದ ಲೇಖನಗಳ ಸಂಕಲನ “ಶ್ರೀ ವೀರೇಂದ್ರ ಹೆಗ್ಗಡೆ ದೃಷ್ಟಿ -ಸೃಷ್ಟಿ’ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಂಥ ಲೋಕಾರ್ಪಣೆ ಮಾಡಿದ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌ ಮಾತನಾಡಿ, ಸೂರ್ಯನ ಮಹಾಶಕ್ತಿಯನ್ನು ಅನುಭವಿಸಿದಷ್ಟು ವರ್ಣಿಸಲು ಸಾಧ್ಯವಿಲ್ಲ. ಹೆಗ್ಗಡೆ ಅವರ ವ್ಯಕ್ತಿತ್ವವೂ ಅದೇ ರೀತಿಯದಾಗಿದೆ. ಅಂದು ವೀರೇಂದ್ರ ಕುಮಾರ್‌ ಜನಿಸಿದಾಗ ಧರ್ಮಸ್ಥಳದ ಜ್ಯೋತಿ ಬೆಳಗಿತು ಎಂದು ಹಿರಿಯರು ಹೇಳಿದ್ದರಂತೆ. ಆದರೆ, ಈಗ ಹೆಗ್ಗಡೆಯವರು ಭುವನದ ಜ್ಯೋತಿಯಾಗಿ ಬೆಳೆಯುತ್ತಿದ್ದಾರೆ ಎಂದು ಬಣ್ಣಿಸಿದರು.

ಡಾ| ಪ್ರಭಾಕರ ಜೋಶಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಬಹಳ ದಿನಗಳ ಕಲ್ಪನೆ ಮತ್ತು ಆಸೆಯೊಂದಿಗೆ ಪುಸ್ತಕ ಪ್ರಕಟಿತವಾಗಿದೆ. ಆನೆಯನ್ನು ಕನ್ನಡಿಯಲ್ಲಿ ತೋರಿಸಿದ ರೀತಿ, ಆಕಾಶವನ್ನು ಹನಿ ನೀರಿನ ಬಿಂದುವಿನಲ್ಲಿ ತೋರಿಸಿದಂತೆ ಹೆಗ್ಗಡೆ ಅವರ ವಿಶಾಲ ವ್ಯಕ್ತಿತ್ವವನ್ನು ಕಟ್ಟಿಡುವುದು ಕಷ್ಟ. ಆದರೂ ನನ್ನದೊಂದು ಸಣ್ಣ ಪ್ರಯತ್ನ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್‌, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಘಟಕದ ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್‌, ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್‌, ಶ್ರೀ ಕ್ಷೇ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌. ಮಂಜುನಾಥ್‌, ಬಿ. ಭುಜಬಲಿ ಮುಂತಾದವರು ಉಪಸ್ಥಿತರಿದ್ದರು.ಉಜಿರೆ ಅಶೋಕ್‌ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಡಾ| ಪ್ರಭಾಕರ ಜೋಶಿಯವರು ಸಮಗ್ರ ಅಧ್ಯಯನ ಮಾಡಿ, ನೋಡಿ, ತಿಳಿದು, ಮಾಹಿತಿ ಕಲೆ ಹಾಕಿ ಉತ್ತಮ ಪುಸ್ತಕವನ್ನು ರಚಿಸಿದ್ದಾರೆ. ಪುಸ್ತಕ
ಬಿಡುಗಡೆ ಸಮಾರಂಭವು ನಾನು ಕನ್ನಡಿಯ ಎದುರು ನಿಂತ ಅನುಭವವನ್ನು ನೀಡಿದೆ.
– ಡಾ| ಡಿ.ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.