ಸಂಸ್ಕಾರ ನೀಡುವ ಶಿಕ್ಷಣ ಅಗತ್ಯ: ವಜೂಭಾಯಿ ವಾಲಾ


Team Udayavani, Feb 12, 2017, 3:45 AM IST

wala.jpg

ಈಶ್ವರಮಂಗಲ: ದೇಶದಲ್ಲಿ ಶಿಕ್ಷಣ ಪಡೆದವರ ಪ್ರಮಾಣ ಹೆಚ್ಚುತ್ತಿದೆ. ಆದರೆ ಸಂಸ್ಕಾರವಂತರ ಪ್ರಮಾಣ ಕಡಿಮೆಯಾಗುತ್ತಿದೆ. ಇದು ರಾಷ್ಟ್ರ ನಿಷ್ಠೆಗೆ ಸವಾಲಾಗಿದೆ. ಸಂಸ್ಕಾರ ನೀಡುವ ಶಿಕ್ಷಣ ಇಂದು ಅತ್ಯಗತ್ಯವಾಗಿದೆ. ರಾಷ್ಟ್ರಕ್ಕಾಗಿ ಚಿಂತನೆ, ತ್ಯಾಗ ಮಾಡುವ ಜತೆಗೆ ದೇಶದ ಶಕ್ತಿಯಾಗಿರುವ ರೈತರು, ಸೈನಿಕರಿಗೆ ನಾವು ನೆರವಾಗಬೇಕು ಎಂದು ರಾಜ್ಯಪಾಲ ವಜೂಭಾಯಿ ರುಡಾಭಾಯಿ ವಾಲಾ ಹೇಳಿದರು.

ಅವರು ಹನುಮಗಿರಿಯಲ್ಲಿ ಶನಿವಾರ ಭಕ್ತಾಂಜನೇಯ ಸಹಿತ ಶ್ರೀ ಕೋದಂಡರಾಮ ರಾಮ ದೇವರು ಮತ್ತು ಬಾಲಗಣಪತಿ ದೇವರ ಪ್ರತಿಷ್ಠಾ ಬ್ರಹ್ಮಕಲಶದ ಸಂದರ್ಭ ಬಾಲಿವುಡ್‌ ನಟ ನಾನಾ ಪಾಟೇಕರ್‌ ಅವರಿಗೆ ಧರ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ನಾನಾ ಪಾಟೇಕರ್‌ ಅವರು ದೇಶಕ್ಕಾಗಿ, ಸಂಸ್ಕೃತಿಗಾಗಿ ಮಾಡುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ನಮ್ಮಲ್ಲಿ ಜಾnನವಿದ್ದರೂ ಕರ್ಮದಲ್ಲಿ ತೋರಿಸದಿದ್ದರೆ ವ್ಯರ್ಥ. ಸಮಾಜ ಸೇವೆಯನ್ನು ಜೀವನದಲ್ಲಿ ಮಾಡಿ ತೋರಿಸುವ ಅವರ ಗುಣ ವೈಶಾಲ್ಯತೆಗೆ ಧರ್ಮಶ್ರೀ ಪ್ರಶಸ್ತಿ ಸಂದಿದೆ ಎಂದರು.

ಪ್ರಶಸ್ತಿ ಸ್ವೀಕರಿಸಿದ ನಾನಾ ಪಾಟೇಕರ್‌ ಮಾತನಾಡಿ, ಸಮಾಜ ನನಗೆ ನೀಡಿದ್ದನ್ನು ಸಮಾಜಕ್ಕೇ ಅರ್ಪಿಸುತ್ತಿದ್ದೇನೆ. ಪಾರಂಪರಿಕವಾಗಿ ಕೃಷಿ ಮಾಡುವವರ ಮಕ್ಕಳು ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಡೆಯುವ ಕೆಲಸ ಆಗಬೇಕು. ದೇಶಕ್ಕೆ ಗೌರವ ತರುವ ರೈತರು ಹಾಗೂ ಯೋಧರ ಕುಟುಂಬಕ್ಕೆ ನೆರವಾಗಬೇಕು ಎಂದು ವಿನಂತಿಸಿದರು.

ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಕೇಂದ್ರ ಸಚಿವ ಡಿ.ವಿ.
ಸದಾನಂದ ಗೌಡ ಮಾತನಾಡಿದರು. ಎಸ್‌.ಕೆ. ಅನಂದ್‌ ಅವರಿಗೆ ನಿರ್ಮಾಣ ರತ್ನ ಪ್ರಶಸ್ತಿ, ರಾಜೇಶ್‌ ಆಚಾರ್ಯ ಅವರಿಗೆ ಶಿಲ್ಪರತ್ನ ಪ್ರಶಸ್ತಿ ಹಾಗೂ ರಾಮ ಬಸಿರಡ್ಕ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರಸಲಾಯಿತು.

ಧರ್ಮಶ್ರೀ ಪ್ರತಿಷ್ಠಾನದ ಮಹಾಪೋಷಕ ಕೊನೆತೋಟ ಮಹಾಬಲೇಶ್ವರ ಭಟ್‌, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು, ಸಮಿತಿಯ ಗೌರವ ಮಾರ್ಗದರ್ಶಕಿ, ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯಾಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮಹೇಶ ಕಜೆ ಕಾರ್ಯಕ್ರಮ ನಿರ್ವಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.