ವಿದ್ಯುತ್ ಆಘಾತ: ವಿದ್ಯುತ್ ಕಂಬದಲ್ಲೇ ಓರ್ವ ಸಾವು, ಇಬ್ಬರು ಗಂಭೀರ
Team Udayavani, Nov 27, 2020, 3:07 PM IST
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಇಲ್ಲಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.
ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬಂದಿ ಪ್ರತಾಪ್ ಮೂಡುಬಿದ್ರೆ (20) ಮೃತಪಟ್ಟವರು
ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗಪ್ಪ ಮೂಡುಬಿದ್ರೆ ಹಾಗೂ ಕಿಶೋರ್ ಮೂಡುಬಿದ್ರೆ ಇವರುಗಳಿಗೆ ಗಾಯಗಳಾಗಿವೆ.
ಇದನ್ನೂ ಓದಿ:ಬಂಡೀಪುರ ಹೆಬ್ಬಾಗಿಲಿನಲ್ಲಿ ನಿಂತ ಐರಾವತ: ಎರಡು ಗಂಟೆಗೆ ಹೆಚ್ಚು ಟ್ರಾಫಿಕ್ ಜಾಮ್
ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರತಾಪ್ ಅವರಿಗೆ ವಿದ್ಯುತ್ ಕಂಬದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿದ್ದಾರೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444