ವಿದ್ಯಾರ್ಥಿ ಸೇರ್ಪಡೆಗೆ ತಕ್ಕ ಸೌಲಭ್ಯ ಅಗತ್ಯ

Team Udayavani, Sep 9, 2021, 3:00 AM IST

Untitled-1

ಪುಂಜಾಲಕಟ್ಟೆ: ವಿದ್ಯಾರ್ಥಿಗಳ ಉನ್ನತ ಭವಿಷ್ಯ ರೂಪಿಸಲು ಸರಕಾರ ಕೈಗೊಂಡ ಯೋಜನೆ ಅನ್ವಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ಸೇರ್ಪಡೆ ಹೆಚ್ಚಿ ದ್ದು, ಇದೀಗ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ, ದಾನಿಗಳು ಹಾಗೂ ಹಳೇ ವಿದ್ಯಾ ರ್ಥಿಗಳ ನೆರವನ್ನು ನಿರೀಕ್ಷಿ ಸುತ್ತಿದೆ.

ಬೆಳ್ತಂಗಡಿ-ಬಂಟ್ವಾಳ ತಾಲೂಕಿನ ಗಡಿಭಾಗವಾಗಿರುವ ಪುಂಜಾಲಕಟ್ಟೆಯಲ್ಲಿ 1927ರಲ್ಲಿ ಸ್ಥಾಪನೆಯಾದ ಈ ಶಾಲೆಯು 2004ರಲ್ಲಿ ಅಮೃತ ಮಹೋತ್ಸವವನ್ನು ಆಚರಿಸಿ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಈ ಶಾಲೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದೆ. ವಿಶಾಲ ಮೈದಾನದ ಪ್ರದೇ ಶದಲ್ಲಿ 1ರಿಂದ 8ನೇ ತರಗತಿಯವರೆಗೆ ಪ್ರಾಥಮಿಕ ವಿಭಾಗವಾಗಿದ್ದು, ಇದೇ ಸಂಕೀರ್ಣದಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ತರಗತಿಗಳನ್ನು ಹೊಂದಿದೆ.

ಮೂಲ ಸೌಕರ್ಯ ಅಗತ್ಯ :

ಶಾಲೆಗೆ ಕೆಲವು ಮೂಲ ಸೌಲಭ್ಯಗಳು ಬೇಕಾಗಿವೆ. ಖಾಲಿ ಇರುವ ಹುದ್ದೆಗಳ ಭರ್ತಿ, ತರಗತಿ ಕೊಠಡಿಗಳು, ಸುಸಜ್ಜಿತ ಅಡುಗೆ ಕೋಣೆ, ಗ್ರಂಥಾಲಯ, ಶೌಚಾಲಯ, ಪ್ರಯೋಗಾಲಯಗಳು, ಕಂಪ್ಯೂಟರ್‌ ಲ್ಯಾಬ್‌, ಸ್ಮಾರ್ಟ್‌ ಕ್ಲಾಸ್‌ ವ್ಯವಸ್ಥೆ, ಸೋಲಾರ್‌ ಸಿಸ್ಟಂ, ಪೀಠೊಪರಕಣಗಳ ಕೊರತೆ ಇದೆ. ಜತೆಗೆ ಆವರಣ ಗೋಡೆಯ ಅಗತ್ಯವಿದೆ.

ಕಟ್ಟಡ ಶಿಥಿಲ :

ಶಾಲೆ ಹಳೆಯ ಕಟ್ಟಡದಲ್ಲಿ 1ರಿಂದ 7ನೇ ತರಗತಿಗಳಿದ್ದು, ಕಟ್ಟಡ ಶಿಥಿಲಗೊಳ್ಳುತ್ತಿದೆ. ಪ್ರಸ್ತುತ ಪ್ರಾಥ ಮಿಕ ವಿಭಾಗದಲ್ಲಿ 764 ವಿದ್ಯಾ ರ್ಥಿಗಳಿದ್ದು, ಆಂಗ್ಲ ಮಾಧ್ಯಮ ವಿಭಾಗವಿದೆ. ಎಲ್‌ಕೆಜಿ, ಯುಕೆಜಿಗೆ ದಾನಿಗಳ ಸಹಕಾರದಿಂದ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಆದರೆ ಪ್ರಾಥಮಿಕ ವಿಭಾಗಕ್ಕೆ ನೂತನ ಕಟ್ಟಡದ ನಿರೀಕ್ಷೆಯಲ್ಲಿದೆ. ಕನ್ನಡ-ಆಂಗ್ಲ ಮಾಧ್ಯಮ ತರಗತಿಗಳಿರುವುದರಿಂದ ಶಿಕ್ಷಕರ ನೇಮಕಾತಿಯಾಗಬೇಕಾಗಿದೆ. ಮುಖ್ಯ ಶಿಕ್ಷಕ, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಈಗಾಗಲೇ ಬಸ್‌ನ ವ್ಯವಸ್ಥೆ, ಎರಡು ಕೊಠಡಿಗಳ ನಿರ್ಮಾಣ, ಗೌರವ ಶಿಕ್ಷಕಿಯರ ನೇಮಕ ಸಹಿತ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ವಿವಿಧ ಬೇಡಿಕೆಗಳ ಬಗ್ಗೆ ಸರಕಾರಕ್ಕೂ ಮನವಿ ಮಾಡಲಾಗಿದೆ.

ಪುಂಜಾಲಕಟ್ಟೆ ಪಬ್ಲಿಕ್‌ ಸ್ಕೂಲ್‌ ಪ್ರಾಥಮಿಕ ವಿಭಾಗ ಸರಕಾರದ ಅನುದಾನದೊಂದಿಗೆ ಜನ ಪ್ರತಿನಿಧಿಗಳ ನೆರವಿನಿಂದ, ದಾನಿಗಳ ಸಹಕಾರದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.  ಈ ಬಾರಿ ಆಂಗ್ಲ ಮಾಧ್ಯಮ ದೊಂದಿಗೆ ಕನ್ನಡ ಮಾಧ್ಯಮ ತರಗತಿಗೂ ಉತ್ತಮ ದಾಖಲಾತಿಯಾಗಿದೆ. ಅಗತ್ಯ ಸವಲತ್ತು ಗಳನ್ನು ಪೂರೈಸಿದಲ್ಲಿ ಮತ್ತಷ್ಟು ಅಭಿವೃದ್ಧಿ ಹೊಂದುತ್ತದೆ. ಮೋನಪ್ಪ ಕೆ., ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗ.

ಈ ವರ್ಷ ನಮ್ಮ ಶಾಲೆಗೆ ಅತೀ ಹೆಚ್ಚಿನ ಸಂಖ್ಯೆ ಯಲ್ಲಿ ವಿದ್ಯಾರ್ಥಿಗಳು ದಾಖಲಾಗಿದ್ದು, ಮಕ್ಕಳ ಸಂಖ್ಯೆಗನುಗುಣವಾಗಿ ಸೌಲಭ್ಯಗಳು ಅಗತ್ಯ ವಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದಿದ್ದು, ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಪ್ರಸ್ತುತ ಅಭಿವೃದ್ಧಿ ಯೋಜನೆಗಳನ್ನು ನಡೆ ಸುತ್ತಿದ್ದು, ಇನ್ನಷ್ಟು ಯೋಜನೆಗಳು ಅನುಷ್ಠಾನಗೊಳಿಸಲು ದಾನಿಗಳು ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದ ಅಗತ್ಯ. ಕೆ.ಜಯರಾಮ ಶೆಟ್ಟಿ, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ. 

-ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.