ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Team Udayavani, Nov 6, 2020, 10:03 PM IST
ಬಂಟ್ವಾಳ: ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿಯ ಬೊಗೋಡಿಯಲ್ಲಿ ನಡೆದ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ನ. 5ರಂದು ತೊಕ್ಕೊಟ್ಟುವಿನಲ್ಲಿ ಬಂಧಿಸಿದ್ದಾರೆ.
ಮೂಲತಃ ನಂದಾವರ ನಿವಾಸಿ ಹಫೀಜ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಷಾದ್ ಬಂಧಿತ ಆರೋಪಿಗಳು. ಬಂಟ್ವಾಳ ನಗರ ಠಾಣಾ ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿ ಸಲಾಗಿದೆ.
ಅ. 23ರಂದು ಬೊಗೋಡಿ ಬಳಿ ಫಾರೂಕ್ ಯಾನೆ ಚೆನ್ನ ಫಾರೂಕ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಆರೋಪಿಗಳು ಆತನನ್ನು ಕೊಲೆ ಮಾಡಿದ್ದರು. ಆ ಬಳಿಕ ಬೆಂಗಳೂರು ಕಡೆಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಗುಂಡ್ಯ ಬಳಿ ಪ್ರಕರಣದ ಪ್ರಮುಖ ಆರೋಪಿ ಇಬ್ರಾಹಿಂ ಖಲೀಲ್ನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರೆ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದರು.