Belthangady ವಿದ್ಯುತ್‌ ವಯರ್‌ನಲ್ಲಿ ಬೆಂಕಿ; ತಪ್ಪಿದ ಅನಾಹುತ

Team Udayavani, Dec 23, 2023, 1:21 AM IST

Belthangady ವಿದ್ಯುತ್‌ ವಯರ್‌ನಲ್ಲಿ ಬೆಂಕಿ; ತಪ್ಪಿದ ಅನಾಹುತ

ಬೆಳ್ತಂಗಡಿ: ನೆರಿಯ ಅಣಿಯೂರು ಹಳ್ಳದ ಖಾಸಗಿ ಕಿರು ಜಲವಿದ್ಯುತ್‌ ಯೋಜನೆಯಿಂದ ಗುರುವಾಯನಕೆರೆ ಪವರ್‌ ಗ್ರಿಡ್‌ಗೆ ವಿದ್ಯುತ್‌ ಹರಿಯುವ ವಯರ್‌ನಲ್ಲಿ ಗುರುವಾರ ಮಧ್ಯರಾತ್ರಿ ಸೋಮಂತಡ್ಕ ಶಾರದಾ ನಗರ ಅಡೂರು ತಿರುವು ಸನಿಹ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವತರಣ ಸೃಷ್ಟಿಯಾಗಿತ್ತು.

ಈ ವಯರ್‌ನಲ್ಲಿ 2 ಗಂಟೆ ರಾತ್ರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಉಂಡೆಗಳು ಕೆಳಬಿದ್ದು ಪೊದೆಗೆ ಬೆಂಕಿ ಹತ್ತಿಕೊಂಡಿತ್ತು. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಲಾರಂಭಿಸಿದೆ.

ಆದರೆ ಕಳೆದ ರಾತ್ರಿ ಮಂಜುಶ್ರೀ ಭಜನಾ ಮಂದಿರದಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ ಇದ್ದುದರಿಂದ ರಸ್ತೆಯಲ್ಲಿ ಅಪರಾತ್ರಿಯೂ ಜನ ಸಂಚಾರ ಇತ್ತು. ಪೂಜೆಯಿಂದ ಮನೆಗೆ ಮರಳುತ್ತಿದ್ದ ಮುಂಡಾಜೆ ಗ್ರಾ.ಪಂ.ಅಧ್ಯಕ್ಷ ಗಣೇಶ್‌ ಬಂಗೇರ ಅವರು ಬೆಂಕಿ ಉರಿಯುತ್ತಿದ್ದುದನ್ನು ಗಮನಿಸಿ ಇಲಾಖೆ ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಬೆಂಕಿ ಹೊತ್ತಿಕೊಂಡ ಪಕ್ಕದಲ್ಲೇ ಹಳೆಯ ವಾಹನಗಳ ಬಿಡಿಭಾಗ ಮಾರಾಟದ ವಿಶಾಲ ಶೋರೂಂ ಇದ್ದು, ಅಪರಾತ್ರಿ ಬೆಂಕಿಯನ್ನು ಯಾರೂ ನೋಡಿರದಿದ್ದರೆ ಬೆಂಕಿ ವ್ಯಾಪಿಸಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅಲ್ಲೇ ಹಿಂದಕ್ಕೆ ಮನೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೂಡ ಇತ್ತು. ವಿಷಯ ಅರಿತ ಸ್ಥಳೀಯರು ಪೊದೆಗೆ ನೀರು ಹಾಯಿಸಿ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್‌ ಮಾರ್ಗದುದ್ದಕ್ಕೂ ಪೊದೆಗಳು ವಯರ್‌ನ ಸಮೀಪದವರೆಗೂ ಜೋತುಬಿದ್ದಿವೆ. ಸಮರ್ಪಕ ನಿರ್ವಹಣೆಯಿಲ್ಲದೆ ಇಂತಹಾ ಅವ್ಯವಸ್ಥೆಗೆ ಕಾರಣವಾಗುತ್ತದೆ. ಕಂಪೆನಿ ಕಡೆಯಿಂದ ಪೊದೆಗಳ ನಿರ್ವಹಣೆಯಾದರೆ ಇಂತಹ ಸಂದರ್ಭಗಳಲ್ಲಿ ಹಾನಿ ಪ್ರಮಾಣ ತಗ್ಗಿಸಬಹುದಾಗಿದೆ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.