ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ
Team Udayavani, Mar 30, 2021, 10:53 AM IST
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಸಮೀಪದ ಪಾಣೆಮಂಗಳೂರು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ವಾಪಸ್ಸು ಆಗುತ್ತಿದ್ದರು.
ಇದನ್ನೂ ಓದಿ:ಭಾರೀ ಗಾಳಿ ಮಳೆಗೆ ಕಡಲ ಕಿನಾರೆಗೆ ಬಂದು ನಿಂತ ಮೀನುಗಾರಿಕಾ ಬೋಟ್ ಗಳು!
ಅವರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಎದುರಿನಿಂದ ಗ್ಯಾಸ್ ಟ್ಯಾಂಕರ್ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ.
ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿರುವ ಪ್ರಯಾಣಿಕರ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಟ್ರಾಫಿಕ್ ಎಸ್ಐ.ರಾಜೇಶ್ ಮತ್ತು ತಂಡ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆ ಗೆ ದಾಖಲಿಸುವಲ್ಲಿ ಸಹಾಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ