“ಹಣಕಾಸು ಯೋಜನೆಯ ಕಾಮಗಾರಿ ಪಟ್ಟಿ ನೀಡಿ’


Team Udayavani, May 27, 2020, 9:21 PM IST

“ಹಣಕಾಸು ಯೋಜನೆಯ ಕಾಮಗಾರಿ ಪಟ್ಟಿ ನೀಡಿ’

ಬಿ.ಸಿ.ರೋಡ್‌ನ‌ಲ್ಲಿರುವ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಸಭೆ ಜರಗಿತು.

ಬಂಟ್ವಾಳ: ಬಂಟ್ವಾಳ ತಾ.ಪಂ.ನ 2020-12ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಪ್ರತಿ ಸದಸ್ಯರಿಗೆ 5.90 ಲಕ್ಷ ರೂ. ಅನುದಾನ ಮೀಸಲಿಡಲಾಗುತ್ತಿದ್ದು, ಮೇ 28ರ ಸಂಜೆಯೊಳಗೆ ಕ್ಷೇತ್ರವಾರು ಕಾಮಗಾರಿಗಳ ಪಟ್ಟಿ ನೀಡುವಂತೆ ತಾ.ಪಂ.ಅಧ್ಯಕ್ಷ ಚಂದ್ರ ಹಾಸ ಕರ್ಕೇರ ಸದಸ್ಯರಿಗೆ ಸೂಚಿಸಿದರು.

ಬಿ.ಸಿ.ರೋಡ್‌ನ‌ಲ್ಲಿರುವ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಸದಸ್ಯರ ಒಟ್ಟು ಅನು ದಾನದಲ್ಲಿ ಪ.ಜಾತಿ, ಪ.ಪಂ.ದ ಕಾಮಗಾರಿಗೆ 1.48 ಲಕ್ಷ ರೂ., ಕುಡಿಯುವ ನೀರು ಹಾಗೂ ಗ್ರಾಮೀಣ ನೈರ್ಮಲ್ಯ ಯೋಜನೆಗೆ ತಲಾ 1.11 ಲಕ್ಷ ರೂ., ರಸ್ತೆ, ಕಟ್ಟಡ, ಶಾಲೆ ಮೊದಲಾದ ಕಾಮಗಾರಿಗೆ 2.21 ಲಕ್ಷ ರೂ.ಗಳಂತೆ ವಿಭಾಗಿಸಲಾಗಿದ್ದು, ಅದರಂತೆ ಪಟ್ಟಿ ನೀಡ ಬೇಕು ಎಂದು ಸೂಚಿಸಿದರು.

ಕಳೆದ ಸಾಲಿನ ತಾ.ಪಂ.ಅನುದಾನದಲ್ಲಿ ಸುಮಾರು 90 ಲಕ್ಷ ರೂ.ಹಿಂದಕ್ಕೆ ಹೋಗಿ ರುವುದಕ್ಕೆ ಸದಸ್ಯ ಉಸ್ಮಾನ್‌ ಕರೋಪಾಡಿ ಆಕ್ಷೇಪ ವ್ಯಕ್ತಪಡಿಸಿದರು. ತಾ.ಪಂ.ನ ಖಜನಾಧಿಕಾರಿಯ ಕಾರ್ಯ ವೈಖರಿ ಕುರಿತು ಸದಸ್ಯ ಪ್ರಭಾಕರ ಪ್ರಭು ಆಕ್ಷೇಪ ವ್ಯಕ್ತಪಡಿಸಿ, ಪುತ್ತೂರು ತಾ.ಪಂ.ನಲ್ಲಿ ಪೂರ್ಣ ಅನುದಾನ ವ್ಯಯವಾಗಿದೆ. ನಮ್ಮಲ್ಲಿ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು. ಉಪಾಧ್ಯಕ್ಷ ಅಬ್ಟಾಸ್‌ ಆಲಿ ಮಾತನಾಡಿ, ಮಾ. 12ಕ್ಕೆ ಕೊಟ್ಟ ಬಿಲ್‌ ಆಗಿಲ್ಲ, ಮಾ. 23ಕ್ಕೆ ಕೊಟ್ಟ ಬಿಲ್‌ ಆಗಿದೆ. ಇದು ಹೇಗೆ ಸಾಧ್ಯ ಎಂಬುದಕ್ಕೆ ಖಜನಾಧಿಕಾರಿ ಉತ್ತರ ನೀಡಲಿ ಎಂದು ತಿಳಿಸಿದಾಗ, ಅಧ್ಯಕ್ಷರು ಖಜನಾಧಿಕಾರಿಯವರನ್ನು ಕರೆಸಿದರು.

ಬಳಿಕ ಮಾತನಾಡಿದ ಖಜನಾಧಿಕಾರಿ, ಮಾ. 18ರ ವರೆಗೆ ಕೊನೆಯ ದಿನಾಂಕವಿದ್ದರೂ, ಮಾ. 21ರ ವರೆಗೂ ಬಿಲ್‌ ಪಾಸ್‌ ಮಾಡಿದ್ದೇನೆ. ಮಾ. 23ಕ್ಕೆ ಕಮೀಷನರ್‌ ಸೂಚನೆಯಂತೆ ನಿಲ್ಲಿಸಿದ್ದೇವೆ ಎಂದರು. ನಾವು ಒತ್ತಡದಲ್ಲಿ ಕೆಲಸ ಮಾಡಿದರೂ, ಬಿಲ್‌ಗ‌ಳು ಲ್ಯಾಪ್ಸ್‌ ಆಗುವುದಕ್ಕೆ ಅವಕಾಶ ನೀಡಿಲ್ಲ ಎಂದು ಎಇಇ ಯಶವಂತ ಸಾಲ್ಯಾನ್‌ ತಿಳಿಸಿದರು.

ಅನುದಾನ ವಾಪಸ್‌ ಹೋಗದಂತೆ ಕೆಲಸ ಮಾಡೋಣ ಎಂದು ಅಧ್ಯಕ್ಷರು ಹೇಳಿದರು. ಸದಸ್ಯರಾದ ರಮೇಶ್‌ ಕುಡೆ¾àರ್‌, ಯಶವಂತ ಪೊಳಲಿ, ಕೆ.ಸಂಜೀವ ಪೂಜಾರಿ ಚರ್ಚೆಯಲ್ಲಿ ಪಾಲ್ಗೊಂಡರು. ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು. ಕುಡಿಯುವ ನೀರು ವಿಭಾಗದ ಎಇಇ ಮಹೇಶ್‌ ಇದ್ದರು. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು.

ನೆರವು ನೀಡಲು ಸಲಹೆ
ಗ್ರಾ.ಪಂ.ನ 14ನೇ ಹಣಕಾಸಿನ ಅನುದಾನದಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ನೆರವು ನೀಡಲು ಕ್ರಮಕೈಗೊಳ್ಳುವಂತೆ ಸದಸ್ಯ ಆದಂ ಕುಂಞಿ ಸಲಹೆ ನೀಡಿದರು. ಆತ್ಮಹತ್ಯೆ ಮಾಡಿಕೊಂಡ ಯುವಕನ ರಕ್ಷಣೆಗೆ ಮುಂದಾದ ಗೂಡಿನಬಳಿಯ ಯುವಕರಿಗೆ ತಾ.ಪಂ.ನಿಂದ ಸಮ್ಮಾನ ಮಾಡು ವಂತೆ ಸದಸ್ಯೆ ನಸೀಮಾ ಬೇಗಂ ಸಲಹೆ ನೀಡಿದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.