ಗುಳಿಕಾನದ ಸಂತ್ರಸ್ತರಿಗೆ ದೊರೆತಿಲ್ಲ ನಿವೇಶನ

ಮಳೆಗಾಲದಲ್ಲಿ ಆತಂಕ ಸ್ಥಿತಿ; ಅಲೆದಾಟಕ್ಕೆ ಸಿಗಬೇಕಿದೆ ಮುಕ್ತಿ

Team Udayavani, Aug 19, 2022, 12:23 PM IST

12

ಸುಬ್ರಹ್ಮಣ್ಯ: ಮಡಿಕೇರಿ, ಸುಳ್ಯ ತಾಲೂಕಿನ ಗಡಿಭಾಗ ಕಲ್ಮಕಾರು ಗ್ರಾಮದ ಗುಳಿಕಾನದಬಲ್ಲಿ 2018ರಲ್ಲಿ ಸಂಭವಿಸಿದ ಭೂ ಕುಸಿತ ಆತಂಕದಿಂದ ಅಲ್ಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶವಿದೆ. ಆದರೆ ನಾಲ್ಕು ವರ್ಷಗಳಿಂದ ಗ್ರಾಮದಲ್ಲಿ ಕಂದಾಯ ಇಲಾಖೆ ಜಾಗವನ್ನು ಹುಡಕಾಟ ನಡೆಸುತ್ತಿದ್ದು, ಅಂತಿಮ ಮಾಡಲು ಇದುವರೆಗೆ ಸಾಧ್ಯವಾಗಿಲ್ಲ. ಅರಣ್ಯ ಇಲಾಖೆ ಆಕ್ಷೇಪದಿಂದ ಹಿನ್ನಡೆ ಎಂಬುದು ಹಳೆಯ ವಿಷಯ.

2018ರಲ್ಲಿ ಮಡಿಕೇರಿ ಭಾಗದಲ್ಲಿ ಉಂಟಾದ ಭೂ ಕುಸಿತದಿಂದ ಗುಳಿಕಾನ ಭಾಗದಲ್ಲೂ ನೆಲ ಬಿರುಕು ಬಿಟ್ಟಿತ್ತು. ಈ ವೇಳೆ ಗುಳಿಕಾನ ಪ್ರದೇಶ ವಾಸಕ್ಕೆ ಯೋಗ್ಯವಲ್ಲ ವರದಿ ಆಧಾರಿತವಾಗಿ ಅಪಾಯಕಾರಿ ಎನ್ನುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಲ್ಲಿನ ನಿವಾಸಿಗಳಿಗೆ ಕಂದಾಯ ಇಲಾಖೆ ಬದಲಿ ಜಾಗ ಗುರುತಿಸಲು ಪ್ರಯತ್ನ ಆರಂಭಿಸಿತ್ತು. ಅಂದಿನಿಂದ ಇಂದಿನವರೆಗೂ ಬದಲಿ ಜಾಗ ನೀಡುವುದಕ್ಕೆ ಸಾಧ್ಯವಾಗಿಲ್ಲ.

10 ಕುಟುಂಬಗಳು

ಗುಳಿಕಾನದಲ್ಲಿ ಸುಮಾರು 10 ಕುಟುಂಬಗಳು ನೆಲೆಸಿವೆ. ಇದರಲ್ಲಿ 8 ಕುಟುಂಬಗಳು ಪರಿಶಿಷ್ಠ ಜಾತಿಯವರು. ಈ ಹಿಂದೆ ಭೂ ಕುಸಿತ ವೇಳೆ ಅವರನ್ನು ಅಲ್ಲಿಂದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಮಳೆಗಾಲದಲ್ಲಿ ಅಲ್ಲಿನ ಜನರಿಗೆ ಕಾಳಜಿ ಕೇಂದ್ರವೇ ಗತಿ ಎಂಬಂತಾಗಿದೆ. ಗುಳಿಕಾನದಲ್ಲಿರುವ ಜಾಗ ನಿವಾಸಿಗಳ ಪಟ್ಟಾ ಜಾಗವಾಗಿದ್ದು, ಕೃಷಿ ಕಾರ್ಯ ನಡೆಸುತ್ತಿದ್ದಾರೆ.

ಆತಂಕ

ಮಳೆ ಬರುವ ಸಂದರ್ಭದಲ್ಲಿ ಅಲ್ಲಿನ ಜನ ಜೀವ ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದಾರೆ. ಇತ್ತೀಚೆಗೆ ಸಂಭವಿಸಿದ ಭೂಕಂಪನದ ಅನುಭವ ಗುಳಿಕಾನದಲ್ಲೂ ಅನುಭವಕ್ಕೆ ಬಂದಿತ್ತು. ಕೆಲವು ದಿನಗಳ ಹಿಂದೆ ಸುರಿದ ಬಾರೀ ಮಳೆ, ಭೂ ಕುಸಿತಕ್ಕೆ ಆ ಭಾಗಕ್ಕೆ ಸಂಪರ್ಕಿಸುವ ಸೇತುವೆಯೂ ತುಂಡಾಗಿದ್ದು,. ತಾತ್ಕಾಲಿಕ ಪಾಲ ನಿರ್ಮಿಸಲಾಗಿದೆ.

ನಾಲ್ಕು ವರ್ಷಗಳಾಗುತ್ತ ಬಂದರೂ ಶಾಶ್ವತ ಪರಿಹಾರ ಹಾಗೂ ಶಾಶ್ವತ ನಿವೇಶನಕ್ಕೆ ಜಾಗ ಗುರುತಿಸಲು ಕಂದಾಯ ಇಲಾಖೆ ಸಫ‌ಲವಾಗದಿರುವ ಬಗ್ಗೆ ಅಲ್ಲಿನ ನಿವಾಸಿಗಳು ಹಾಗೂ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಕ್ಕಳು, ವೃದ್ಧರು ಸಹಿತ ಗುಳಿಕಾನದ ಜನತೆಗೆ ಶೀಘ್ರ ಮನೆ ನಿರ್ಮಿಸಲು ಸೂಕ್ತ ಜಾಗ ಗುರುತಿಸಿ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದವರು ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಅರ್ಜಿಗಳಿಗೆ ಬೆಲೆ ಇಲ್ಲ

2018ರಿಂದ ಇಂದಿನವರೆಗೂ ಬದಲಿ ಮನೆ ನಿರ್ಮಾಣಕ್ಕೆ ಜಾಗ ಅಂತಿಮಗೊಂಡಿಲ್ಲ. ನಮ್ಮ ಅರ್ಜಿಗಳಿಗೆ ಇನ್ನೂ ಬೆಲೆ ಸಿಕ್ಕಿಲ್ಲ. ಆತಂಕದಿಂದಲೇ ಬದುಕು ನಡೆಸುವಂತಾಗಿದೆ ಎಂದು ಗುಳಿಕಾನದ ನಿವಾಸಿಗಳು ಪ್ರತಿಕ್ರಿಯಿಸಿದ್ದಾರೆ.

ತಜ್ಞರಿಂದ ಪರಿಶೀಲನೆ

ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಭೂ ಕುಸಿತ ಬಗ್ಗೆ ಪರಿಶೀಲನೆಗೆ ಜುಲೈ ಮೊದಲ ವಾರದಲ್ಲಿ ಅಂದರೆ ನಾಲ್ಕು ವರ್ಷದ ಬಳಿಕ(ಭೂ ಕಂಪನ ನಡೆದ ಬಳಿಕ)ಭೂ ವಿಜ್ಞಾನಿಗಳು ಹಾಗೂ ಗಣಿ ಇಲಾಖೆಯವರು ಆಗಮಿಸಿದ್ದರು. ಗುಡ್ಡದ ಭಾಗಕ್ಕೆ ತೆರಳಿದ ತಂಡ ಅಲ್ಲಿನ ಜನರಿಂದ ಮಾಹಿತಿ ಪಡೆದಿದ್ದರು. ಕೆಲವು ದಿನಗಳ ಹಿಂದೆ ಸಂಭವಿಸಿದ ಭೂ ಕುಸಿತದಿಂದ ಗುಳಿಕಾನ ಪ್ರದೇಶದ ಸಮೀಪದಲ್ಲೇ ನೂರಾರು ಬೃಹತ್‌ ಮರಗಳು ಬಂದು ಸಿಲುಕಿಕೊಂಡಿವೆ ಎನ್ನುತ್ತಾರೆ ಅಲ್ಲಿನ ಜನರು. ಈ ವರ್ಷವೂ ಅಲ್ಲಿನ ನಿವಾಸಿಗಳನ್ನು ಕಲ್ಮಕಾರು ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಜಾಗ ಸಿಗುತ್ತಿಲ್ಲ: ಗುಳಿಕಾನದ ಜನರಿಗೆ ಮನೆ ನಿರ್ಮಾಣಕ್ಕೆ ಕಲ್ಮಕಾರಿನ ಸುತ್ತಮುತ್ತ ಯಾವುದೇ ಸರಕಾರಿ ಜಾಗ ಸಿಗುತ್ತಿಲ್ಲ. ಸಿದ್ಧಪಡಿಸಿದ ಎರಡು-ಮೂರು ಫೈಲ್‌ಗ‌ಳಿಗೂ ಅರಣ್ಯ ಇಲಾಖೆದ್ದು ಎಂದು ತೋರಿಸುತ್ತಿದೆ. ಜಾಗ ಹುಡುಕುವ ಕಾರ್ಯ ನಡೆಯುತ್ತಿದೆ. ಒಂದು ಫೈಲ್‌ ಎಸಿ ಕಚೇರಿಗೆ ಕಳುಹಿಸಲಾಗಿದೆ. ಆದಷ್ಟು ಶೀಘ್ರ ಜಾಗ ಗುರುತಿಸಲು ಪ್ರಯತ್ನಿಸಲಾಗುವುದು. –ಅನಿತಾ ಲಕ್ಷ್ಮೀ, ತಹಶೀಲ್ದಾರ್‌ ಸುಳ್ಯ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.