Bantwal; ಸಾವಿರಾರು ಕಾರ್ಯಕರ್ತರ ಅಭಿಯಾನದಿಂದ ಕ್ಷೇತ್ರದಲ್ಲಿ ಸಂಚಲನ: ರಾಜೇಶ್‌ ನಾೖಕ್‌

ಬಿಜೆಪಿಯಿಂದ ಮಹಾ ಸಂಪರ್ಕ ಅಭಿಯಾನ

Team Udayavani, May 1, 2023, 10:55 AM IST

Bantwal; ಸಾವಿರಾರು ಕಾರ್ಯಕರ್ತರ ಅಭಿಯಾನದಿಂದ ಕ್ಷೇತ್ರದಲ್ಲಿ ಸಂಚಲನ: ರಾಜೇಶ್‌ ನಾೖಕ್‌

ಬಂಟ್ವಾಳ: ಚುನಾವಣ ಸಿದ್ಧತೆಯ ಭಾಗವಾಗಿ ರಾಜ್ಯ ಬಿಜೆಪಿಯು ಮಹಾ ಸಂಪರ್ಕ ಅಭಿಯಾನವನ್ನು ಹಮ್ಮಿಕೊಂಡಿದ್ದು, ರವಿವಾರ ಬಂಟ್ವಾಳ ಕ್ಷೇತ್ರದ ಎಲ್ಲಾ 249 ಬೂತ್‌ಗಳಲ್ಲೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅಭಿಯಾನ ಕೈಗೊಂಡರು.

ಅಭಿಯಾನದ ವೇಳೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್‌ ಕಾರ್ಯಕ್ರಮದ 100ನೇ ವಿಶೇಷ ಸಂಚಿಕೆಯು ಪ್ರಸಾರಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಪಾಣೆಮಂಗಳೂರು ಬೋಳಂಗಡಿಯ ಗಣೇಶ್‌ ಅವರ ಮನೆಯಲ್ಲಿ ಮನ್‌ ಕೀ ಬಾತ್‌ ವೀಕ್ಷಿಸಿದರು. ಕಾರ್ಯಕರ್ತರು ಕೂಡ ಆಯಾಯ ಭಾಗದಲ್ಲಿ ಮನ್‌ ಕೀ ಬಾತ್‌ ವೀಕ್ಷಿಸಿದರು. ರಾಜೇಶ್‌ ನಾೖಕ್‌ ಅವರು ಬಡಗಬೆಳ್ಳೂರು, ಪಾಣೆಮಂಗಳೂರು, ನರಿಕೊಂಬು ಗ್ರಾಮಗಳ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ಕಾರ್ಯಕರ್ತರ ಜತೆ ಪಾಲ್ಗೊಂಡರು.

ಈ ವೇಳೆ ಅಭ್ಯರ್ಥಿ ರಾಜೇಶ್‌ ನಾೖಕ್‌ ಅವರು ಮಾತನಾಡಿ, ಬಂಟ್ವಾಳ ಕ್ಷೇತ್ರದ ಎಲ್ಲಾ 249 ಬೂತ್‌ಗಳಲ್ಲೂ ನಡೆದ ಮಹಾ ಸಂಪರ್ಕ ಅಭಿಯಾನದಲ್ಲಿ ದಾಖಲೆ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದು, ಒಂದೇ ದಿನದ ಕ್ಷೇತ್ರದ ಬಹುತೇಕ ಎಲ್ಲಾ ಮನೆಗಳನ್ನು ತಲುಪಿ ಸರಕಾರದ ಸಾಧನೆಯ ಜತೆಗೆ ಬಂಟ್ವಾಳದ ಅಭಿವೃದ್ಧಿಯನ್ನು ತಿಳಿಸಿ ಬಿಜೆಪಿಗೆ ಮತ ನೀಡುವಂತೆ ವಿನಂತಿಸಿದರು. ಪ್ರತಿ ಬೂತ್‌ಗಳಲ್ಲೂ ನೂರಾರು ಸಂಖ್ಯೆಯ ಕಾರ್ಯಕರ್ತರು ಸೇರಿ ಮನೆ ಸಂಪರ್ಕ ನಡೆಸಿರುವುದು ಕ್ಷೇತ್ರದಲ್ಲೇ ಸಂಚಲನ ಸೃಷ್ಟಿಸಿದೆ.

ಬಿಜೆಪಿಯು ಕಾರ್ಯಕರ್ತರ ಪಕ್ಷವಾಗಿದ್ದು, ಪಕ್ಷ ಗೆಲುವು ಸಾಧಿಸಿದರೆ ಅದು ಕಾರ್ಯಕರ್ತರ ಗೆಲುವು. ಕಳೆದ 5 ವರ್ಷಗಳಲ್ಲಿ ಅವರ ಬೇಡಿಕೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಸ್ಪಂದಿಸಲಾಗಿದೆ, ಮುಂದೆಯೂ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿಕೊಂಡು ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್‌ನ ಎಲ್ಲಾ ಆರೋಪಗಳಿಗೂ ಉತ್ತರ ಎಂಬಂತೆ ಇಂದಿನ ಮಹಾ ಸಂಪರ್ಕ ಅಭಿಯಾನ ಮೂಡಿಬಂದಿದೆ ಎಂದರು.

ಕ್ಷೇತ್ರದ ಯಾವುದೇ ಮತದಾರರ ಗೌರವಕ್ಕೆ ಧಕ್ಕೆಯಾಗದ ರೀತಿ ಕೆಲಸ ಮಾಡಿದ್ದು, ಕಳೆದ 10 ವರ್ಷಗಳಲ್ಲಿ ನಿಮ್ಮ ಮನೆಯ ಮಗನ ರೀತಿಯಲ್ಲಿ ಜತೆಗೆ ನಿಂತಿದ್ದೇನೆ. ಮುಂದೆ ಮತ್ತೆ ನೀವು ಅವಕಾಶ ನೀಡಿದರೆ ನಿಮ್ಮ ಪ್ರತಿ ಬೇಡಿಕೆಗೆ ಸ್ಪಂದಿಸುವ ಕಾರ್ಯ ಮಾಡಲಿದ್ದೇನೆ. ಚುನಾವಣೆಗೆ ಕೆಲವೇ ದಿನಗಳಿದ್ದು, ಪ್ರತಿ ಕಾರ್ಯಕರ್ತರು ಕೂಡ ಬಿಜೆಪಿಯ ಅಭಿವೃದ್ಧಿ ಪ್ರೋಗ್ರೆಸ್‌ ಕಾರ್ಡ್‌ನ್ನು ಕ್ಷೇತ್ರದ ಮತದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಮಾತನಾಡಿ, ಪಕ್ಷದ ಸೂಚನೆಯನ್ವಯ 59 ಗ್ರಾಮಗಳ 249 ಬೂತುಗಳಲ್ಲಿ ಮಹಾ ಸಂಪರ್ಕ ಅಭಿಯಾನವು ಅತ್ಯಂತ ಯಶಸ್ವಿಯಾಗಿದೆ, ಅದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಪಕ್ಷದ ಜವಾಬ್ದಾರಿ ಇರುವ ಎಲ್ಲಾ ಪ್ರಮುಖರು ತಮ್ಮ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯ, ಜಿಲ್ಲೆ, ಮಂಡಲ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ಹಾಗೂ ಬೂತ್‌ ಸಮಿತಿಯ ಎಲ್ಲಾ ಪ್ರಮುಖರು ಒಂದು ಮತಗಟ್ಟೆಯಲ್ಲಿ ಮತಯಾಚನೆ ಅಭಿಯಾನದಲ್ಲಿ ತೊಡಗಿಸಿಕೊಂಡರು. ಮಹಿಳಾ ಕಾರ್ಯಕರ್ತೆಯರು ಕೂಡ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.