ಗುರುವಾಯನಕೆರೆ – ಬೆಳ್ತಂಗಡಿ ಪೇಟೆ ಮಧ್ಯೆಯೇ ಸಾಗಲಿದೆ ಹೆದ್ದಾರಿ

Team Udayavani, Jul 29, 2021, 6:45 AM IST

Untitled-1

ಬೆಳ್ತಂಗಡಿ: ಅಭಿವೃದ್ಧಿಯೆಡೆಗಿನ ಏನೇ ಯೋಜನೆಗಳು ದೂರದೃಷ್ಟಿಯುಳ್ಳ ಚಿಂತನೆಯಾಗಿರಬೇಕು. ಹೀಗಾಗಿ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ  -75ರ ಶಿರಾಡಿಗೆ ಪರ್ಯಾಯವಾಗಿ ರಾ.ಹೆ.-73ರ ಚಾರ್ಮಾಡಿಯನ್ನು ಮೇಲ್ದರ್ಜೆಗೇರಿಸುವುದು ಅನಿವಾರ್ಯ. ಈಗಾಗಲೇ ಬಿ.ಸಿ.ರೋಡ್‌ – ಅಡ್ಡಹೊಳೆ, ಬಿ.ಸಿ.ರೋಡ್‌-ಪುಂಜಾಲಕಟ್ಟೆ ಚತುಷ್ಪಥ ಕಾಮಗಾರಿ ಬಿರುಸಿನಿಂದ ಸಾಗಿದ್ದು, ಎರಡನೇ ಹಂತದ ಪುಂಜಾಲಕಟ್ಟೆ – ಚಾರ್ಮಾಡಿ ಚತುಷ್ಪಥಕ್ಕಾಗಿ ಸರ್ವೇ ಆರಂಭಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು ವಿಲ್ಲುಪುರಂ ರಸ್ತೆಯ ಬಿ.ಸಿ. ರೋಡಿನಿಂದ ಪುಂಜಾಲಕಟ್ಟೆವರೆಗೆ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. 2018ರಲ್ಲಿ ಆರಂಭಗೊಂಡಿದ್ದ ಕಾಮಗಾರಿ 2020ರ ಡಿಸೆಂಬರ್‌ಗೆ ಪೂರ್ಣಗೊಳ್ಳಬೇಕಿತ್ತು. ಕೋವಿಡ್‌ನಿಂದಾಗಿ ವಿಳಂಬವಾಗಿದೆ.

ಈ ಮಧ್ಯೆ ದ್ವಿತೀಯ ಹಂತದಲ್ಲಿ ಪುಂಜಾಲಕಟ್ಟೆ-ಚಾರ್ಮಾಡಿ ನಡುವಣ 35 ಕಿ.ಮೀ. ಚತುಷ್ಪಥ ಕಾಮಗಾರಿ ಹಮ್ಮಿಕೊಳ್ಳುವುದಾಗಿ ಬೆಳ್ತಂಗಡಿ ನಿಡಿಗಲ್‌ ನೂತನ ಸೇತುವೆ ಲೋಕಾರ್ಪಣೆ ವೇಳೆ ಸಂಸದ ನಳಿನ್‌ ಕುಮಾರ್‌ ಕಟೀಲು ಘೋಷಿಸಿದ್ದರು. ಅದರಂತೆ ಈ ಹಿಂದೆ ನಡೆಸಿದ್ದ ಸರ್ವೇಯನ್ನು ಕೈಬಿಟ್ಟು ಹೊಸದಾಗಿ ಸರ್ವೇಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಂದಾಗಿದ್ದು ಉಜಿರೆ ವರೆಗಿನ ಸರ್ವೇ ಮುಕ್ತಾಯ ಹಂತದಲ್ಲಿದೆ.

383 ಕೋ.ರೂ. ಪ್ರಸ್ತಾವನೆ:

ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ 383 ಕೋ.ರೂ.ನ ಪ್ರಸ್ತಾವನೆಯನ್ನು ಕೇಂದ್ರದ ಮುಂದಿಡಲಾಗಿದೆ. ಗುರುವಾಯನಕೆರೆಯಿಂದ ಉಜಿರೆವರೆಗೆ ಅಂದಾಜು 80 ಕೋ.ರೂ. ವೆಚ್ಚದಲ್ಲಿ ರಸ್ತೆ ಮಧ್ಯಭಾಗದಿಂದ 13+13 ಮೀಟರ್‌ (ಒಟ್ಟು ರಸ್ತೆ 100 ಅಡಿ) ಅಗಲದ ಕಾಂಕ್ರೀಟ್‌ ಚತುಷ್ಪಥ ರಸ್ತೆ ಒಳಗೊಂಡಿದ್ದು ಒಂದೂವರೆ ಮೀಟರ್‌ ಮೀಡಿಯನ್‌, 1 ಮೀಟರ್‌ ಡ್ರೈನೇಜ್‌ ಸೇರಲಿದೆ.

ಭೂಸ್ವಾಧೀನ ಪ್ರಕ್ರಿಯೆಗೆ 100 ಕೋ.ರೂ.:

ಚತುಷ್ಪಥ ಕಾಮಗಾರಿಗೆ ಈಗಾಗಲೆ 383 ಕೋ.ರೂ. ಪ್ರಸ್ತಾವನೆ ಸಿದ್ಧಗೊಂಡಿದ್ದು ಭೂಸ್ವಾಧೀನಕ್ಕಾಗಿ 100 ಕೋ.ರೂ. ಮೀಸಲಿಡಲಾಗಿದೆ. ಹೆದ್ದಾರಿ ಇಲಾಖೆ ಸರ್ವೇ ಕಾರ್ಯದ ಜತೆ ಕಂದಾಯ ಇಲಾಖೆಯಿಂದಲೂ 5 ಮಂದಿ ಸರ್ವೇಕಾರ್ಯದಲ್ಲಿ ತೊಡಗಿದ್ದಾರೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಅಧಿಸೂಚನೆ ಪ್ರಕಟಗೊಳ್ಳಲಿದೆ. ಆಬಳಿಕ ಆಕ್ಷೇಪಣೆಗೆ ಅವಕಾಶವಿರಲಿದ್ದು 2022ರ ಜನವರಿಯಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ.

ಬೈಪಾಸ್‌ ರಸ್ತೆ ಚಿಂತನೆ ತಟಸ್ಥ :

ಹಲವು ಚರ್ಚೆ ಹಾಗೂ ವರ್ತಕರಲ್ಲಿ ಗೊಂದಲಗಳಿಗೆ ಕಾರಣವಾಗಿದ್ದ ಗುರುವಾಯನಕೆರೆ-ಉಜಿರೆ ವರೆಗಿನ ಬೈಪಾಸ್‌ ರಸ್ತೆ ಚಿಂತನೆ ಸದ್ಯದ ಮಾಹಿತಿಯಂತೆ ಕೈಬಿಡಲಾಗಿದೆ. ಬೆಳ್ತಂಗಡಿ-ಗುರುವಾಯನಕೆರೆ ಪೇಟೆ ಮಧ್ಯೆಯೇ ಚತುಷ್ಪಥ ಕಾಂಕ್ರೀಟ್‌ ರಸ್ತೆ ಸಾಗಲಿದೆ. ಇದು ವರ್ತಕರಲ್ಲಿ ಹಲವು ಗೊಂದಲಗಳಿಗೆ ಎಡೆಮಾಡಿದೆ. ಪೇಟೆ, ವ್ಯಾಪಾರ ಹೋದ ಬಳಿಕ ರಸ್ತೆ ಅಭಿವೃದ್ಧಿಯಾದರೇನು? ಆದ್ದರಿಂದ ಬೈಪಾಸ್‌ ಮಾಡಲಿ ಎನ್ನುತ್ತಾರೆ ಅವರು.

ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಪುಂಜಾಲಕಟ್ಟೆಯಿಂದ-ಚಾರ್ಮಾಡಿ ವರೆಗೆ ಹೆದ್ದಾರಿ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ಆರಂಭಿಸಿವೆ. ಸರಕಾರದ ಮಟ್ಟದಲ್ಲಿ ಎಲ್ಲ ಪ್ರಕ್ರಿಯೆಗಳು ನಡೆದರೆ 2022ರ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.– ಕೃಷ್ಣಮೂರ್ತಿ, ಎಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಮಂಗಳೂರು ಉಪವಿಭಾಗ  

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.