Belthangady ಗೋ, ಗೋಮಾಂಸ ಅಕ್ರಮ ಸಾಗಾಟ; ಆರೋಪಿಗಳ ಸಹಿತ ಕರು ವಶಕ್ಕೆ
Team Udayavani, Sep 21, 2023, 12:16 AM IST
ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗೋವಧೆ ಮಾಡಿ ಮಾಂಸವನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬಂದಿ ಸೆ. 18ರಂದು ಮಾಂಸ ಸಹಿತ ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಸಾಗಾಟದ ವೇಳೆ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದಲ್ಲಿ ಜೀಪಿನಲ್ಲಿ ಆರೋಪಿಗಳಾದ ತೋಡುಪುಡ ತಾಲೂಕು, ಇಡಿ ಜಿಲ್ಲೆ, ಕೇರಳ ನಿವಾಸಿ ಜಿನು ತೋಮಸ್ (34) ಮತ್ತು ಕುತ್ತೂರು ನಿವಾಸಿ ರಂಜಿತ್ (31) ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗೋ ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳು, ಸಾಗಾಟಕ್ಕೆ ಉಪಯೋಗಿಸಿದ ಜೀಪು ಸಹಿತ ಕರುವನ್ನು ಸ್ವಾಧೀನಪಡಿಸಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು