ಬಂಟ್ವಾಳ: ರಸ್ತೆ ಮಧ್ಯ ಮಲಗಿದ್ದ ವ್ಯಕ್ತಿ ಮೇಲೆ ದ್ವಿಚಕ್ರ ವಾಹನ ಹರಿದು ಸಾವು: ವಿಡಿಯೋ ವೈರಲ್
Team Udayavani, Sep 14, 2021, 9:04 PM IST
ಬಂಟ್ವಾಳ: ರಾತ್ರಿ ವೇಳೆ ರಸ್ತೆ ಮಧ್ಯೆ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ.
ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಒಂದರ ಸಮೀಪ ವ್ಯಕ್ತಿಯೋರ್ವರು ನಡೆದುಕೊಂಡು ಬಂದು ರಸ್ತೆಯಲ್ಲಿ ಮಲಗುವ ದೃಶ್ಯ ಹಾಗೂ ಆ ಬಳಿಕ ಕೆಲವೇ ಹೊತ್ತಿನಲ್ಲಿ ದ್ವಿಚಕ್ರವಾಹನ ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಹೋಗಿ ಸ್ಕೂಟರ್ ಸವಾರ ಕೂಡ ರಸ್ತೆಗೆ ಎಳೆಯಲ್ಪಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆ ಗೆ ದಾಖಲಿಸಲಾಗಿತ್ತು.
ಆದರೆ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರನಿಗೆ ಗಾಯವಾಗಿದ್ದು ಆತ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ