ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ- ಪಿಕಪ್ ಢಿಕ್ಕಿ; ಮೂವರು ಗಂಭೀರ
Team Udayavani, Oct 17, 2022, 5:07 PM IST
ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ವಾಹನ ನಡುವೆ ಢಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀ ರಾಮ ನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ (ಅ.17 ರಂದು) ನಡೆದಿದೆ.
ಘಟನೆಯಲ್ಲಿ ಚಾಲಕರು ಹಾಗೂ ಪಿಕಪ್ ನಲ್ಲಿದ್ದ ಸಹಾಯಕ ಗಂಭೀರಗೊಂಡಿದ್ದಾರೆ.
ಕಬ್ಬಿಣದ ರಾಡ್ ಹೇರಿಕೊಂಡು ಮಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಲಾರಿ ಪುಂಜಾಲಕಟ್ಟೆಯಿಂದ ಬಂಟ್ವಾಳ ಕಡೆ ಸಾಗುತ್ತಿದ್ದ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಿನಿ ಲಾರಿಯ ಮುಂಭಾಗ ಮತ್ತು ಹಿಂಭಾಗ ಬೇರೆ ಬೇರೆಯಾಗಿದೆ. ಪಿಕಪ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮಿನಿ ಲಾರಿ ಚಾಲಕನ ಕೈ , ಕಾಲು ತುಂಡಾಗಿದ್ದು, ಇತರರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತತ್ ಕ್ಷಣ 108 ಅಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆ ಗೆ ಸಾಗಿಸಲಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ