ಸುಳ್ಯ: ʼಕಾಂತಾರʼಸಿನೆಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ
Team Udayavani, Dec 8, 2022, 8:22 PM IST
ಸುಳ್ಯ: ಇಲ್ಲಿನ ಚಿತ್ರಮಂದಿರಕ್ಕೆ ʼಕಾಂತಾರʼ ಚಿತ್ರ ವೀಕ್ಷಿಸಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐವರ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ಹಮೀದ್, ಅಶ್ರಫ್, ಸಾದಿದ್, ಜಾಬೀರ್ ಜಟ್ಟಿಪಳ್ಳ, ಸಿದ್ದಿಕ್ ಬೋರುಗುಡ್ಡೆ ಎಂಬವರ ವಿರುದ್ಧ ದೂರು ನೀಡಲಾಗಿದೆ.
ಡಿ.7ರಂದು ಬೆಳಗ್ಗೆ ಒಂದೇ ಸಮುದಾಯಕ್ಕೆ ಸೇರಿದ ಬಿಸಿ ರೋಡ್ ಮೂಲದ ಬಿಕಾಂ ವಿದ್ಯಾರ್ಥಿ ಹಾಗೂ 18 ವರ್ಷ ಪ್ರಾಯದ ವಿದ್ಯಾರ್ಥಿನಿ ಸುಳ್ಯದ ಚಿತ್ರಮಂದಿರಕ್ಕೆ ಕಾಂತಾರ ಚಿತ್ರ ವೀಕ್ಷಿಸಲು ಬಂದಿದ್ದರು. ಸಿನೆಮಾ ಆರಂಭವಾಗಲು ಸಮಯವಿದ್ದ ಹಿನ್ನಲೆಯಲ್ಲಿ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ನಿಂತು ಮಾತನಾಡುತ್ತಿರುವಾಗ ಸುಮಾರು 5-10 ಜನರ ಗುಂಪು ವಿದ್ಯಾರ್ಥಿಗಳ ಬಳಿ ಬಂದು, ಅಬ್ದುಲ್ ಹಮೀದ್, ಅಶ್ರಫ್, ಸಾದಿದ್, ಜಾಬೀರ್ ಜಟ್ಟಿಪಳ್ಳ ಸಿದ್ದಿಕ್ ಬೋರು ಗುಡ್ಡೆ ಎಂಬವರು ಇಬ್ಬರು ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಬೆನ್ನಿಗೆ ಕೈಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಸುಳ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ಬಂದಾಗ ಅಣಬೆ ಹುಟ್ಟುತ್ತದೆ…. ಶಾಸಕ ಮಠಂದೂರು ಹೇಳಿಕೆಗೆ ಪುತ್ತಿಲ ಬೆಂಬಲಿಗರ ಆಕ್ರೋಶ
ಅನುಮತಿ ರಹಿತ ಪ್ರವಾಸ ಆಯೋಜನೆ: ಶಿಕ್ಷಕಿಯ ಪರ ನಿಂತ ಪೋಷಕರು
ಬೆಳ್ತಂಗಡಿ: ಪೊಲೀಸರ ಎಚ್ಚರಿಕೆ ಬೆನ್ನಲೇ ವೇಶ್ಯಾವಾಟಿಕೆ: ಐವರು ಮಹಿಳೆಯರು ಸೇರಿ 7 ಮಂದಿ ಬಂಧನ
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ