ಕೆಪಿಎಸ್‌ನಲ್ಲಿ ಹೆಚ್ಚಿದ ದಾಖಲಾತಿ

Team Udayavani, Jul 27, 2021, 3:00 AM IST

Untitled-1

ಪುತ್ತೂರು: ತಾಲೂಕಿನ ಎರಡು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗ‌ಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

ಕೋವಿಡ್‌ ಕಾಲಘಟ್ಟದಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಉತ್ಸುಕರಾಗಿದ್ದು, ಖಾಸಗಿ ವಿದ್ಯಾ ಸಂಸ್ಥೆಗಳಿಂದಲೂ ಕೆಪಿಎಸ್‌ಗೆ ಪ್ರವೇಶ ಬಯಸುತ್ತಿರುವ ಸಂಖ್ಯೆಯಲ್ಲಿ ಹೆಚ್ಚಳ ಕಂಡಿರುವುದನ್ನು ದಾಖಲಾತಿ ಸಂಖ್ಯೆ ಪುಷ್ಟೀಕರಿಸಿದೆ.

ದಾಖಲಾತಿಯಲ್ಲಿ ಏರಿಕೆ:

ಹಾಲಿ ಶೈಕ್ಷಣಿಕ ವರ್ಷದಲ್ಲಿ ಜೂ. 15 ರಿಂದ ದಾಖಲಾತಿ ಪ್ರಾರಂಭಗೊಂಡಿದ್ದು ಇತ್ತೀಚೆಗಿನ ತನಕ ದಾಖಲಾತಿಯಲ್ಲಿ ಪುತ್ತೂರು ತಾಲೂಕಿನ ಕೆಯ್ಯೂರು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ 137, ಕುಂಬ್ರ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ 104  ವಿದ್ಯಾರ್ಥಿಗಳು ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ದಾಖ ಲಾತಿ ಪ್ರಕ್ರಿಯೆ ಇನ್ನೂ ಪ್ರಗತಿ ಯಲ್ಲಿದ್ದು, ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಉಭಯ ವಿದ್ಯಾ ಸಂಸ್ಥೆಗಳಲ್ಲಿ ಕ್ರಮವಾಗಿ 157, 132 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದರು.

1 ಸಾವಿರ ದಾಟಿದ ಸಂಖ್ಯೆ:

ಕೆಪಿಎಸ್‌ನಲ್ಲಿ ಎಲ್‌ಕೆಜಿಯಿಂದ 12 ನೇ ತರಗತಿ ತನಕ ವಿದ್ಯಾಭ್ಯಾಸಕ್ಕೆ ಅವಕಾಶ ಇದ್ದು ಈಗಾಗಲೇ ಒಟ್ಟು 1,144 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕೆಯ್ಯೂರಿನಲ್ಲಿ 649, ಕುಂಬ್ರದಲ್ಲಿ 495 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 2018-19ರ ಶೈಕ್ಷಣಿಕ ಸಾಲಿನಲ್ಲಿ ಇಡೀ ವರ್ಷದ ದಾಖಲಾತಿ ಪ್ರಕಾರ ಕೆಯ್ಯೂರಿನಲ್ಲಿ 542, ಕುಂಬ್ರದಲ್ಲಿ 504, 2019-20ರಲ್ಲಿ ಕೆಯ್ಯೂರಿನಲ್ಲಿ 639, ಕುಂಬ್ರದಲ್ಲಿ 578 ವಿದ್ಯಾರ್ಥಿಗಳು ದಾಖಲಾಗಿದ್ದರು.

ಈ ಬಾರಿ ಹಿಂದಿನ ಎರಡು ವರ್ಷದ ಸಂಖ್ಯೆಯನ್ನು ಮೀರಿದ ದಾಖಲಾತಿ ಆಗುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಖಲಾತಿಗೆ ಮಿತಿ ಇಲ್ಲ  :

ಸರಕಾರಿ ಶಾಲೆಗಳಿಗೆ ವಿದ್ಯಾ ರ್ಥಿಗಳನ್ನು ಆಕರ್ಷಿಸಲು ಮತ್ತು ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆ ಗಳಲ್ಲಿಯೂ ಸಿಗಬೇಕೆಂಬ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳಡಿ (ಕೆಪಿಎಸ್‌) ನೋಂದಾಯಿಸಲ್ಪಟ್ಟ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯ ಮವನ್ನು ಆರಂಭಿಸಿದೆ.

ಪ್ರಸ್ತುತ ಖಾಸಗಿ ವಿದ್ಯಾಸಂಸ್ಥೆಗಳಿಂದಲು ಕೆಪಿಎಸ್‌ಗೆ ಸೇರ್ಪಡೆ ಆಗುತ್ತಿರುವುದರಿಂದ ಸಂಖ್ಯಾ ಪ್ರಮಾಣ ವೃದ್ಧಿಸಿದೆ. ಸರಕಾರವು  ತರಗತಿಗೆ 30 ವಿದ್ಯಾರ್ಥಿಗಳ ಮಿತಿ ವಿಧಿಸಿದ್ದರೂ ಆಸಕ್ತ ಯಾವುದೇ ವಿದ್ಯಾರ್ಥಿಯು ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರವೇಶ ಬಯಸುವ ಎಲ್ಲ ವಿದ್ಯಾರ್ಥಿಗಳನ್ನು ದಾಖಲು ಮಾಡಿ ಕೊಳ್ಳಲಾಗುತ್ತಿದೆ. ಬಳಿಕ ಹಂತ ಹಂತವಾಗಿ ಅವರಿಗೆ ಸೌಲಭ್ಯ ಒದಗಿಸಲಾಗುತ್ತದೆ.

ಆಲಂಕಾರು ಶಾಲೆಯತ್ತಲೂ ಚಿತ್ತ :

ಆಲಂಕಾರು: ರಾಜ್ಯ ಸರಕಾರವು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಲಂಕಾರು ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಅಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ನೀಡಿದ ಪರಿಣಾಮ ವಿದ್ಯಾರ್ಥಿ ಹಾಗೂ ಪೊಷಕರು ಆಲಂಕಾರು ಸರಕಾರಿ ಶಾಲೆಯತ್ತ ಆಕರ್ಷಿತರಾಗಿದ್ದಾರೆ. ಈಗಾಗಲೇ ಶಾಲಾ ದಾಖಲಾತಿ ಅತ್ಯಂತ ಬಿರುಸಿನಿಂದ ನಡೆಯುತ್ತಿದೆ. ಈ ಸರಕಾರಿ ಶಾಲೆಗೆ ಇದೀಗ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಕರ್ಷಿತ ರಾಗಿದ್ದಾರೆ. ಈಗಾಗಲೇ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ 70 ವಿದ್ಯಾರ್ಥಿಗಳ ದಾಖಲಾತಿಯಾಗಿದೆ. 1ನೇ ತರಗತಿಗೆ 54 ವಿದ್ಯಾರ್ಥಿಗಳ ದಾಖಲಾತಿ ನಡೆದಿದೆ.

ಇಡೀ ಶೈಕ್ಷಣಿಕ ವರ್ಷದಲ್ಲಿ ಯಾವುದೇ ದಿನದಲ್ಲಿಯು ವಿದ್ಯಾರ್ಥಿ ಪ್ರವೇಶ ಬಯಸಿದರೆ ದಾಖಲು ಮಾಡಿಕೊಳ್ಳಲಾಗುವುದು. ಪ್ರಸ್ತುತ ಅವಿಭಜಿತ ಪುತ್ತೂರು ತಾಲೂಕಿನಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರಿಕೆ ಕಂಡಿದೆ. ಮುಂದಿನ ಬಾರಿ ಕಡಬ ತಾಲೂಕಿನ ಕೊಣಾಲು ಸರಕಾರಿ ಶಾಲೆಯನ್ನು ಕೆಪಿಎಸ್‌ ಆಗಿ ಪರಿವರ್ತಿಸಬೇಕೆಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.