ಕೃಷಿಕರಿಗೆ ವರದಾನ ಏತ ನೀರಾವರಿ

2 ಕೋಟಿ ರೂ. ಯೋಜನೆ; ಕಾಮಗಾರಿ ಅನುಷ್ಠಾನದಲ್ಲಿ ಅಸಮಾಧಾನ

Team Udayavani, Feb 19, 2020, 5:25 AM IST

skin-31

ನರಿಮೊಗರು ಗ್ರಾ.ಪಂ. ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲಿರುವ ಏತ ನೀರಾವರಿ ಯೋಜನೆ.

ಪುತ್ತೂರು: ನೂರಾರು ರೈತರಿಗೆ ಆಶಾದಾಯಕವಾದ ಏತ ನೀರಾವರಿ ಯೋಜನೆಯೊಂದು ನರಿಮೊಗರು ಗ್ರಾ.ಪಂ. ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಆದರೆ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಒಂದಷ್ಟು ಅಸಮಾಧಾನ, ಏಕಪಕ್ಷೀಯ ನೀತಿ ಯೋಜನೆಯ ಫಲವನ್ನು ಹಾಳು ಮಾಡುವ ಭೀತಿ ಕಾಡುತ್ತಿದೆ.

ಕೃಷಿ ತೋಟಗಳಿಗೆ ನೀರುಣಿಸುವ ಸುಮಾರು 2 ಕೋಟಿ ರೂ. ವೆಚ್ಚದ ಈ ಏತ ನೀರಾವರಿ ಯೋಜನೆ ನರಿಮೊಗರು ಗ್ರಾ.ಪಂ. ವ್ಯಾಪ್ತಿಯ ವೀರಮಂಗಲದ ಪುಡಿಂಕನಡ್ಕದಲ್ಲಿ ತಲೆ ಎತ್ತಲಿದೆ. ಕುಮಾರಧಾರಾದಿಂದ 40 ಎಚ್‌.ಪಿ. ಸಾಮರ್ಥ್ಯದ ಪಂಪ್‌ನಿಂದ ನೀರನ್ನು ಮೇಲೆತ್ತಿ ಬೃಹತ್‌ ಟ್ಯಾಂಕ್‌ಗಳ ಮೂಲಕ ಆ ಭಾಗದ ಕೃಷಿ ತೋಟಗಳಿಗೆ ನೀರು ನೀಡುವ ಮಹತ್ವದ ಉದ್ದೇಶವನ್ನು ಈ ಯೋಜನೆಯ ಮೂಲಕ ಹೊಂದಲಾಗಿದೆ. ಜಿಲ್ಲೆಯಲ್ಲಿ ಕಾಲುವೆ ಮೂಲಕ ನೀರು ನೀಡುವುದು ಕಷ್ಟವಾದ ಕಾರಣ ಇದಕ್ಕಾಗಿ ಪೈಪ್‌ಲೈನ್‌ ಅಳವಡಿಕೆ ನಡೆದಿದೆ.

100 ಕುಟುಂಬಗಳಿಗೆ ಪ್ರಯೋಜನ
ಎರಡು ವರ್ಷಗಳ ಹಿಂದೆ ಆಗಿನ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 100 ಕುಟುಂಬಗಳ ಕೃಷಿಗೆ ಈ ಯೋಜನೆಯಲ್ಲಿ ನೀರು ನೀಡಬಹುದಾಗಿದೆ. ಜತೆಗೆ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರವಾಗಲಿದೆ. ಈ ಭಾಗದಲ್ಲಿ ಹಲವು ಮನೆಗಳಿಗೆ ಈಗಾಗಲೇ ಪೈಪ್‌ಲೈನ್‌ ಅಳವಡಿಕೆ ಮಾಡಲಾಗಿದ್ದು, ಇನ್ನುಳಿದ ಪ್ರದೇಶಗಳಿಗೂ ನೀರು ನೀಡಲು ಅನುಕೂಲವಾಗುವಂತೆ ಎರಡು ಪ್ರತ್ಯೇಕ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ.

ಅಸಮಾಧಾನಕ್ಕೆ ಕಾರಣ
ಈ ಯೋಜನೆಯ ಅನುಷ್ಠಾನದ ಸಂದರ್ಭ ಸ್ಥಳೀಯ ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಡೆಸಲಾಗುತ್ತಿದೆ ಎಂಬುದು ಪ್ರಧಾನ ಆರೋಪ. ಏತ ನೀರಾ ವರಿಯ ಪೈಪ್‌ಲೈನ್‌ ಅಳವಡಿಕೆಗಾಗಿ ತಮ್ಮ ವರ್ಗ ಜಾಗ ಬಿಟ್ಟುಕೊಟ್ಟಿರುವ ಸ್ಥಳೀಯರೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪ ಡಿಸುತ್ತಿದ್ದಾರೆ. ಸಮಿತಿ ರಚನೆಯಲ್ಲೂ ಸ್ಥಳೀಯ ಫಲಾನುಭವಿಗಳ ಬದಲಿಗೆ ಬೇರೆ ವ್ಯಕ್ತಿಗಳನ್ನು ಆರಿಸಲಾಗಿದೆ. ಸ್ಥಳೀಯಾಡಳಿತ ಗ್ರಾ.ಪಂ.ಗೂ ಈ ಯೋಜನೆ ಕುರಿತು ಮಾಹಿತಿ ನೀಡಿಲ್ಲ ಎಂಬ ಆರೋಪವೂ ವ್ಯಕ್ತವಾಗಿರುವುದು ಯೋಜನೆಯ ಹಿನ್ನಡೆಗೆ ಕಾರಣವಾಗಿದೆ.

ದೂರು ಸಲ್ಲಿಕೆ
ಸ್ಥಳೀಯರಲ್ಲಿದ್ದ ವರ್ಗ ಸ್ಥಳದಲ್ಲಿ ಪೈಪ್‌ಲೈನ್‌ ಅಳವಡಿಕೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಈಗ ಸಣ್ಣ ನೀರಾವರಿ ಇಲಾಖೆ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದೆ. ಸ್ಥಳೀಯರನ್ನು, ಗ್ರಾ.ಪಂ. ಆಡಳಿತ ವ್ಯವಸ್ಥೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಯೋಜನೆಗೆ ಸ್ಥಳೀಯ ವಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು, ಫಲಾನುಭವಿಗಳಲ್ಲದವರನ್ನು ಹಾಕಿಕೊಂಡು ರಾಜಕೀಯ ನಡೆಸಲಾಗುತ್ತಿದೆ. ಇದರ ವಿರುದ್ಧ ಗ್ರಾ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಮತ್ತು ಸಣ್ಣ ಕೈಗಾರಿಕಾ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್‌ ಸದಸ್ಯ ಬಾಬು ಶೆಟ್ಟಿ ತಿಳಿಸಿದ್ದಾರೆ.

ಸಮಿತಿ ರಚನೆ ಮಾಡಿಲ್ಲ
ಈ ಯೋಜನೆ ಮೂಲ ಸೌಕರ್ಯಗಳಿಗೆ 1.50 ಕೋಟಿ ರೂ. ಹಾಗೂ ಪೈಪ್‌ಲೈನ್‌ ಅಳವಡಿಕೆಗೆ 50 ಲಕ್ಷ ರೂ. ವೆಚ್ಚವಾಗಲಿದೆ. ಈ ಯೋಜನೆಯಲ್ಲಿ ಯಾವುದೇ ಅಧಿಕೃತ ಸಮಿತಿ ರಚನೆ ಮಾಡಲಾಗಿಲ್ಲ. ಆದರೆ ಮಾಹಿತಿ ನೀಡುವ ಸಭೆ ನಡೆಸಲಾಗಿದೆ. ಈ ಯೋಜನೆಯ ನಿರ್ವಹಣೆಯನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದಲೇ ನಡೆಸಲಾಗುತ್ತಿದೆ. ಫಲಾನುಭವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗಿದೆ. ಶೀಘ್ರ ಲೋಕಾರ್ಪಣೆಗೊಳ್ಳಲಿದೆ ಎನ್ನುತ್ತಾರೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ ಆನಂದ್‌.

ನನ್ನ ಕನಸಿನ ಯೋಜನೆ
ಈ ಯೋಜನೆಗಾಗಿ 2 ಕೋಟಿ ಅನುದಾನವನ್ನು ಸಣ್ಣ ನೀರಾವರಿ- ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಒದಗಿಸಿ ಕೊಟ್ಟಿದ್ದೇನೆ. ಇಲ್ಲಿ ಅರಣ್ಯ ಪ್ರದೇಶ, ವರ್ಗ ಜಾಗ ಇದ್ದುದರಿಂದ ಆ ಸಂದರ್ಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ ಉಂಟಾಗಿ ವಿಳಂಬವಾಗಿತ್ತು. ಇದು ನನ್ನ ಕನಸಿನ ಯೋಜನೆಯಾಗಿದೆ. ಈ ಯೋಜನೆ ಸಂಪೂರ್ಣ ಗೊಂಡಲ್ಲಿ ರೈತರಿಗೆ ಅನುಕೂಲವಾಗಲಿದೆ.
-ಶಕುಂತಳಾ ಟಿ. ಶೆಟ್ಟಿ, ಮಾಜಿ ಶಾಸಕಿ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.