Kadaba: ಒಂದೂವರೆ ವರ್ಷದ ಬಳಿಕ ಕಳ್ಳತನ ಆರೋಪಿಗಳ ಬಂಧನ
Team Udayavani, Jul 18, 2023, 6:23 AM IST
ಕಡಬ: ಇಲ್ಲಿನ ಪೇರಡ್ಕ ನಿವಾಸಿ ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಹೊಂದಿರುವ ವರ್ಗಿàಸ್ (ಶಾಜನ್) ಅವರ ಮನೆಗೆ ಹಾಡುಹಗಲೇ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷದ ಬಳಿಕ ಕಡಬ ಪೊಲೀಸರು ಬಂಧಿಸಿದ್ದಾರೆ.
ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಹಾಗೂ ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಈ ಪೈಕಿ ಸದ್ದಾಂ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.
2021ರ ಡಿ. 13ರಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಮನೆಗೆ ಬೀಗ ಹಾಕಿ ಶಾಜನ್ ಹಾಗೂ ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಕಳ್ಳತನ ನಡೆದಿತ್ತು. ಸಂಜೆ ವೇಳೆಗೆ ಮನೆಯೊಡತಿ ಬಂದು ಮನೆಯ ಬೀಗ ತೆರೆದು ಮನೆಯೊಳಗೆ ಬಂದಾಗ ಮನೆಯ ಹಿಂಭಾಗದ ಬಾಗಿಲನ್ನು ಒಡೆದಿರುವುದು ಗಮನಕ್ಕೆ ಬಂದಿದೆ. ಸುಮಾರು 24 ಗ್ರಾಂ ತೂಕದ ಚಿನ್ನದ ಸರ,8 ಗ್ರಾಂ ತೂಕದ ಚಿನ್ನದ ಸರ, 6 ಗ್ರಾಂ ತೂಕದ ಚಿನ್ನದ ಬೆಂಡೋಲೆ, ಮಕ್ಕಳ ಬೆಂಡೋಲೆಗಳು ಸಹಿತ ಅಂದಾಜು ರೂ. 1.50 ಲಕ್ಷ ರೂ. ಮೌಲ್ಯದ ಸುಮಾರು 41ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿತ್ತು. ಆ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳಿಂದ ಕಳ್ಳತನವಾದ 41ಗ್ರಾಂ ಚಿನ್ನದ ಪೈಕಿ 17 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ ಚಿನ್ನಾಭರಣ ಇನ್ನಷ್ಟೇ ಪತ್ತೆಯಾಗಬೇಕಿದೆ. ಸದ್ದಾಂ ಹೇಳಿಕೆಯಂತೆ ಕಳ್ಳತನಕ್ಕೆ ಆರೋಪಿಗಳು ಬಳಸಿದ್ದ ಜೀಪನ್ನು ವಶಕ್ಕೆ ಪಡೆಯಲು ಕಡಬ ಪೊಲೀಸರು ಆರೋಪಿ ಸದ್ದಾಂನ ಮನೆಗೆ ಹೋದಾಗ ಮನೆಯಲ್ಲಿದ್ದ ಮಹಿಳೆಯರು ಮಕ್ಕಳೊಂದಿಗೆ ಪೊಲೀಸರನ್ನು ಅಡ್ಡಗಟ್ಟಿ ಜೀಪನ್ನು ವಶಕ್ಕೆ ಪಡೆಯದಂತೆ ತಡೆದ ಘಟನೆಯೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ