Hacker: ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಬಂದಿಯಾದ ಕಡಬದ ಯುವಕ

ಮದುವೆಗೆ ತಯಾರಿ ಮಾಡುವಾಗಲೇ ಸೆರೆ! ದಿಕ್ಕು ತೋಚದಾದ ಕುಟುಂಬ

Team Udayavani, Aug 18, 2023, 7:30 AM IST

Hacker: ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಬಂದಿಯಾದ ಕಡಬದ ಯುವಕ

ಮಂಗಳೂರು: ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವ್ಯಕ್ತಿಯೊಬ್ಬರು ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಅಲ್ಲಿ ಬಂದಿಯಾಗಿದ್ದು, ಅವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರಕಾರದ ಮೊರೆ ಹೋಗಿದ್ದಾರೆ.

ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ತಪ್ಪು ಮಾಡದೆ ರಿಯಾದ್‌ನಲ್ಲಿ ಜೈಲಲ್ಲಿರುವವರು. ಅವರ ಕುಟುಂಬದ ಪರವಾಗಿ ನಿಕಟ ವರ್ತಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಹಾಗೂ ಮಂಗಳೂರಿನ ಎನ್‌ಇಸಿಎಫ್‌ ಕಾರ್ಯದರ್ಶಿ ಶಶಿಧರ ಶೆಟ್ಟಿ ಅವರು ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರಿಗೆ ಈ ಕುರಿತ ಮಾಹಿತಿ ನೀಡಿದರು.

ಆಗಿದ್ದೇನು?
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಪದೋನ್ನತಿ ಮೂಲಕ ಸೌದಿ ಅರೇಬಿಯಾಕ್ಕೆ 2022ರಲ್ಲಿ ಕಂಪೆನಿ ಕೆಲಸಕ್ಕೆ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿದ್ದರು. ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿ ದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳ ಲಾಗಿತ್ತು. ಒಟಿಪಿ ಸಂಖ್ಯೆ ತಿಳಿಸುವಂತೆ ಸೂಚಿಸಿದಾಗ ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿದ್ದರು.

ಯಾಕೆ ಜೈಲು ವಾಸ?
ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಈ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದು, ಬಂಧಿಸಲಾಗಿದೆ ಎಂದು ಚಂದ್ರಶೇಖರ್‌ ಅವರ ಗೆಳೆಯರು ಮಾಹಿತಿ ಪಡೆದು ಮನೆಮಂದಿಗೆ ತಿಳಿಸಿದ್ದಾರೆ.

ಮದುವೆಗೆ ತಯಾರಿ ಮಾಡುವಾಗಲೇ ಸೆರೆ!
ಚಂದ್ರಶೇಖರ್‌ಗೆ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಸಿದ್ಧತೆಯಲ್ಲಿ ಇರುವಾಗಲೇ ಅವರ ಬಂಧನವಾಗಿದೆ. ಹ್ಯಾಕರ್‌ಗಳ ಕಿರುಕುಳದಿಂದ ಚಂದ್ರಶೇಖರ್‌ಗೆ ಅನ್ಯಾಯವಾಗಿದೆ. ಕಳೆದ 8 ತಿಂಗಳಿಂದ ಅವರ ಕುಟುಂಬ ನ್ಯಾಯಕ್ಕಾಗಿ ಕಾಯುತ್ತಿದೆ. ತಪ್ಪು ಮಾಡದೆ ಶಿಕ್ಷೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ ಶ್ರೀಧರ ಗೌಡ ಅವರು, ಆತನ ಸ್ನೇಹಿತರು 10 ಲಕ್ಷ ರೂ.. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದಾರೆ. ಆದರೂ ಬಿಡುಗಡೆ ಸಾಧ್ಯವಾಗಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಮೂಲಕ ಕೇಂದ್ರ ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಜಿಲ್ಲೆಯ ಇತರ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ನಾಗರಿಕರು ಸೇರಿ ಕೇಂದ್ರ ಸರಕಾರಕ್ಕೆ ಒತ್ತಡ ಹಾಕುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.