
Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ
Team Udayavani, Jun 2, 2023, 10:38 AM IST

ಕಡಬ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ.
ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ