Kadaba: ಬೈಕ್, ಗೂಡ್ಸ್ ವಾಹನ ಡಿಕ್ಕಿ ; ಸವಾರ ಕಾಲೇಜು ವಿದ್ಯಾರ್ಥಿ ಮೃತ್ಯು
Team Udayavani, Mar 5, 2024, 10:06 AM IST
ಕಡಬ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಸೋಮವಾರ ಮಾ.4 ರ ರಾತ್ರಿ ನಡೆದಿದೆ.
ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತಪಟ್ಟ ದುರ್ದೈವಿ.
ಶ್ರೀಜಿಸ್ ರಾಮಕುಂಜ ಶಾರದಾ ನಗರದಲ್ಲಿರುವ ಚಿಕ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯೂ ಆಗಿರುವ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್ ಪಂಪ್ನಲ್ಲಿ ಬೈಕ್ಗೆ ಪೆಟ್ರೋಲ್ ತುಂಬಿಸಿ ಮತ್ತೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.
ಘಟನೆಯ ಪರಿಣಾಮ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್ ರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ.
ಮೃತ ಶ್ರೀಜಿಸ್ ತಂದೆ ಗುರುವಪ್ಪ, ತಾಯಿ ಗಿರಿಜಾ, ಸಹೋದರರಾದ ಸುನೀಶ್ ಹಾಗೂ ಸುಜಿಸ್ ರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!