
ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ
Team Udayavani, Jun 4, 2023, 6:45 AM IST

ವಿಟ್ಲ: ಹಳೆಯ ದ್ವೇಷವನ್ನಿಟ್ಟುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಶನಿವಾರ ಕಂಬಳಬೆಟ್ಟುವಿನಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಹಲ್ಲೆ ಮಾಡಿದ ಆರೋಪಿಗಳು.
ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು ಮಹಮ್ಮದ್ ಸರ್ವನ್ ಅವರನ್ನು ಕಾರಿನಿಂದ ಕೆಳಗೆ ಎಳೆದು ಕೈಯಿಂದ ಮುಖಕ್ಕೆ, ಬೆನ್ನಿಗೆ, ಹೊಟ್ಟೆಗೆ ಹೊಡೆದರಲ್ಲದೇ ತುಳಿದಿದ್ದಾರೆ. ಸರ್ವನ್ ಜತೆ ಕೆಲಸ ಮಾಡುವ ಫಾರೂಕ್ ತಡೆಯಲು ಬಂದಾಗ ಮರದ ದೊಣ್ಣೆಯಿಂದ ಆತನ ತಲೆಗೆ, ಬೆನ್ನಿಗೆ ಹೊಡೆದಿದ್ದಾರೆ. ಬಳಿಕ ಜೀವ ಬೆದರಿಕೆ ಹಾಕಿ ದೊಣ್ಣೆಯನ್ನು ಅಲ್ಲೇ ಎಸೆದು ಹೋಗಿದ್ದಾರೆಂದು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗಾಯಾಳು ಮಹಮ್ಮದ್ ಸರ್ವನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರೆ, ಫಾರೂಕ್ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ