ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಚಳವಳಿ: ಬಂಟ್ವಾಳದ ಮಗ್ಗ ಶಾಲೆಯಿಂದಲೂ ಬೆಂಬಲ

Team Udayavani, Aug 15, 2021, 6:07 AM IST

 ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಚಳವಳಿ: ಬಂಟ್ವಾಳದ ಮಗ್ಗ ಶಾಲೆಯಿಂದಲೂ ಬೆಂಬಲ

ಬಂಟ್ವಾಳ: ದೇಶದ  ಸ್ವಾತಂತ್ರ್ಯ ಚಳವಳಿಗೆ ಬಂಟ್ವಾಳದ  ಸ್ವಾತಂತ್ರ್ಯ ಹೋರಾಟಗಾರರಿಂದ ಉತ್ತಮ ಬೆಂಬಲ ಸಿಕ್ಕಿತ್ತು. ಆದರೆ  ಸ್ವಾತಂತ್ರ್ಯ ಹೋರಾಟದ ನೆನಪಿನ ಭಾಗವಾಗಿ ವಿಶೇಷ ಸ್ಮಾರಕಗಳು ಬಂಟ್ವಾಳದಲ್ಲಿ ಕಾಣ ಸಿಗುವುದಿಲ್ಲ. ಆದರೆ ಗಾಂಧೀಜಿ ಅವರ ಸ್ವದೇಶಿ ಚಳವಳಿಯ ಭಾಗವಾಗಿ ಬಂಟ್ವಾಳದಲ್ಲಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರು ಮಗ್ಗದ ಕೈಗಾರಿಕೆ ಘಟಕವನ್ನು ಸ್ಥಾಪಿಸಿದ್ದು, ಅದು ಮಗ್ಗ ಶಾಲೆಯೆಂದೇ ಪ್ರಸಿದ್ಧಿ ಪಡೆದಿದೆ.

ಬಂಟ್ವಾಳದ ಭಂಡಾರಿಬೆಟ್ಟಿನಲ್ಲಿ ಈ ಮಗ್ಗ ಶಾಲೆಯಿದ್ದು, ಅದರ ಕಟ್ಟಡದ ಭಾಗವನ್ನು ಈಗಲೂ ಕಾಣಬಹುದಾಗಿದೆ. ದೇಶೀ ಚಳವಳಿಗಾಗಿ ಮನೆ ಮನೆಗಳಲ್ಲಿ ಖಾದಿಯ ನೂಲನ್ನು ನೇಯಲು ಅಗತ್ಯ ವಾದ ಚರಕವನ್ನು ತಯಾರಿಸಲು ಮಗ್ಗದ ಕೈಗಾರಿಕ ಘಟಕ ಇದಾಗಿತ್ತು ಎಂಬ ಉಲ್ಲೇಖವಿದೆ.

ವಿಕಿಪೀಡಿಯ ಮಾಹಿತಿ ಪ್ರಕಾರ  ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬಂಟ್ವಾಳ ನರಸಿಂಹ ಲಕ್ಷ್ಮಣ ಗಣಪತಿ ಬಾಳಿಗಾ ಅವರು ಈ ಘಟಕವನ್ನು ಸ್ಥಾಪಿಸಿದ್ದರು. ಕೆಲವು ವರ್ಷಗಳ ಕಾಲ ಈ ಮಗ್ಗ ಶಾಲೆಯು ಕಾರ್ಯಾಚರಣೆ ನಡೆಸಿ ಬಳಿಕ ನಷ್ಟವನ್ನು ಹೊಂದಿ ಮುಚ್ಚಲ್ಪಟ್ಟಿತ್ತು ಎಂಬುದು ತಿಳಿದು ಬರುತ್ತದೆ.

ಮಗ್ಗ ಶಾಲೆಯ ಕುರಿತು ಅಲ್ಲೇ ದುಡಿಯುತ್ತಿದ್ದ ಹಿರಿಯರಾದ ಸದಾಶಿವ ಆಚಾರ್‌ ಅಭಿಪ್ರಾಯವನ್ನು ಹೇಳುತ್ತಿದ್ದು, ಆದರೆ ಅವರಿಗೆ ನೆನಪುಶಕ್ತಿಯ ಕೊರತೆಯಿಂದ ಪೂರ್ತಿ ವಿಚಾರವನ್ನು ತಿಳಿಸುವುದಕ್ಕೆ ಸಾಧ್ಯವಾಗಿಲ್ಲ. ಅಂಬರ್‌ ಚರಕ ಅಭ್ಯಾಸವನ್ನೂ ಇಲ್ಲಿ ಮಾಡಿದ್ದು, ಜತೆಗೆ ಮಂಗಳೂರಿನ ಖಾದಿ ಭಂಡಾರದಲ್ಲೂ ಕೆಲಸ ಮಾಡಿದ್ದೇವೆ. ಸಾಕಷ್ಟು ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ಆಚಾರ್‌ ವಿವರಿಸುತ್ತಾರೆ.

ಮಗ್ಗ ಶಾಲೆಗೆ ಗಾಂಧೀಜಿ ಭೇಟಿ ನೀಡಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಅವರು ಭೇಟಿ ನೀಡಿದ್ದಾರೆ ಎಂದು ಪೂರ್ವಜರು ಹೇಳುತ್ತಿದ್ದರು ಎಂದು ಒಂದಷ್ಟು ಮಂದಿ ಹೇಳುತ್ತಾರೆ. 1934ರ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ ಮಡಿಕೇರಿಯಿಂದ ಮಂಗ ಳೂರು ಭಾಗಕ್ಕೆ ಹೋಗುತ್ತಿರುವ ಸಂದರ್ಭ ಬಂಟ್ವಾಳಕ್ಕೂ ಭೇಟಿ ನೀಡಿದ್ದಾರೆ ಎಂದು ಇತಿಹಾಸ ಹೇಳುತ್ತಿದೆ.

ಬಂಟ್ವಾಳದಲ್ಲಿ ಖಾದಿವ್ರತಿಯೊಬ್ಬರು  ಸ್ವತಃ ನೂಲು ತೆಗೆದು ನೇಯ್ದ ಖಾದಿ ಬಟ್ಟೆಯನ್ನು ಗಾಂಧೀಜಿ ಅವರಿಗೆ ಒಪ್ಪಿಸಿದ್ದರು ಎಂದು ಪುಸ್ತಕವೊಂದರಲ್ಲಿ ಉಲ್ಲೇಖೀತವಾಗಿದೆ. ಇದೇ ಸಂದರ್ಭದಲ್ಲಿ ಗಾಂಧೀಜಿ ಅವರಿಗೆ ದಾರಿಯುದ್ದಕ್ಕೂ ಬಂಟ್ವಾಳ(ಈಗಿನ ಬಂಟ್ವಾಳ ತಾಲೂಕು)ದ ಜನತೆ ನಿಧಿಯನ್ನು ಒಪ್ಪಿಸಿದ್ದರು ಎನ್ನಲಾಗಿದೆ.

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.