ಪ್ರಕೃತಿ ರಮಣೀಯ ಕೊಯಿಲ ಫಾರ್ಮ್ ಗೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳು

ಅನೈತಿಕ ಚಟುವಟಿಕೆಯ ತಾಣವಾಗುತ್ತಿದೆ; ಸೂಕ್ತ ಭದ್ರತೆ ಇಲ್ಲದ ವಿಶಾಲ ಹುಲ್ಲುಗಾವಲು

Team Udayavani, Sep 4, 2020, 4:05 AM IST

ಪ್ರಕೃತಿ ರಮಣೀಯ ಕೊಯಿಲ ಫಾರ್ಮ್ ಗೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳು

ಕಡಬ: ಪಶು ಸಂಗೋಪನ ಇಲಾಖೆಗೆ ಸೇರಿದ ಕೊಯಿಲ ಜಾನುವಾರು ತಳಿ ಸಂವರ್ಧನ ಕೇಂದ್ರದ ವಿಶಾಲವಾದ ಹುಲ್ಲುಗಾವಲಿನ ಸೌಂದರ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹಸುರು ಹುಲ್ಲು ಚಿಗುರಿ ಸುಂದರವಾಗಿ ಕಂಗೊಳಿಸುವ ಇಲ್ಲಿನ ಗುಡ್ಡಗಳಿಗೆ ಕಿಡಿಗೇಡಿ ಪ್ರವಾಸಿಗರೇ ತಲೆನೋವಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಸಂದರ್ಶಿಸಲು ಉಪ್ಪಿನಂಗಡಿ-ಕಡಬ ಮಾರ್ಗದ ಮೂಲಕ ಸಂಚರಿಸುವ ಪ್ರಯಾಣಿಕರು ಕೊಯಿಲ ಗ್ರಾಮವನ್ನು ತಲುಪಿದಾಗ ಈ ಪ್ರಕೃತಿ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ಸ್ಥಳೀಯವಾಗಿ ಕೊçಲ ಫಾರ್ಮ್ ಎಂದೇ ಕರೆಸಿಕೊಳ್ಳುವ ಈ ಪ್ರದೇಶ ಮಳೆಗಾಲದಲ್ಲಿ ತಳಿ ಸಂವರ್ಧನ ಕೇಂದ್ರದ ಜಾನುವಾರುಗಳಿಗೆ ವಿಪುಲವಾದ ಹಸುರು ಹುಲ್ಲನ್ನು ಒದಗಿಸಿದರೆ ಬೇಸಗೆಯಲ್ಲಿ ಯಥೇತ್ಛವಾಗಿ ಒಣ ಹುಲ್ಲು ಲಭಿಸುತ್ತದೆ.

ಕಿಡಿಗೇಡಿ ಪ್ರವಾಸಿಗರ ಸಮಸ್ಯೆ
ಸಾಲು ಸಾಲು ಗುಡ್ಡಗಳಿಗೆ ಪ್ರಕೃತಿಯ ಹಚ್ಚ ಹಸುರಿನ ಹೊದಿಕೆಯಿಂದ ನೋಡುಗರ ಕಣ್ಮನ ಸೆಳೆಯುವ ಈ ಪ್ರದೇಶಕ್ಕೆ ತನ್ನ ಸೌಂದರ್ಯವೇ ಮುಳುವಾದಂತಿದೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಬರುವ ಜನರು ಪರಿಸರದ ಸ್ವಚ್ಛತೆಗೆ ಗಮನ ನೀಡದೇ ಹಾಳುಗೆಡವುತ್ತಿರುವುದು ಫಾರ್ಮ್ನ ಅಧಿಕಾರಿಗಳಿಗೆ ತಲೆನೋವಾಗಿ ಪರಿ ಣಮಿಸಿದೆ. ಗುಡ್ಡದ ಎಲ್ಲೆಡೆ ಖಾಲಿ ಮದ್ಯದ ಬಾಟಲಿಗಳು, ಒಡೆದ ಗ್ಲಾಸಿನ ಚೂರುಗಳು, ಪ್ಲಾಸ್ಟಿಕ್‌ ಕವರ್‌ಗಳು, ತಿಂಡಿ ತಿನಿಸಿನ ತ್ಯಾಜ್ಯಗಳು ಹಾಗೂ ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುವ ವಸ್ತುಗಳ ಕುರುಹುಗಳು ಕಂಡುಬರುತ್ತಿವೆ. ಗುಡ್ಡದ ಅಂದವನ್ನು ಸವಿಯಲು ಬರುವ ಮಂದಿಗಿಂತ ಮಜಾ ಉಡಾಯಿಸಲು ಬರುವವರ ಸಂಖ್ಯೆ ಹೆಚ್ಚಾಗಿದೆ ಎನ್ನುವುದು ಇಲ್ಲಿನ ಜನರ ಆರೋಪ.

ಭದ್ರತೆಯೇ ಇಲ್ಲ
ಸುಮಾರು 704 ಎಕ್ರೆಯಲ್ಲಿ ಹರಡಿ ಕೊಂಡಿರುವ ಪಶುಸಂಗೋಪನ ಇಲಾಖೆಗೆ ಸೇರಿದ ಎ ಫಾರ್ಮ್ ಒಂದು ಕಾಲದಲ್ಲಿ ರಾಜ್ಯದಲ್ಲೇ ಹೆಸರು ಪಡೆದಿತ್ತು. ಆದರೆ ಈಗ ಇಲ್ಲಿನ ಪರಿಸ್ಥಿತಿ ಬದಲಾಗಿದೆ. ಸಿಬಂದಿ ಕೊರತೆಯಿಂದಾಗಿ ಯಾವ ಕೆಲಸವೂ ಸಮರ್ಪಕವಾಗಿ ನಡೆಯುತ್ತಿಲ್ಲ. ದನ, ಕರು, ಎಮ್ಮೆ, ಕೋಣ, ಹಂದಿ, ಕೋಳಿ ಮುಂತಾದುವುಗಳನ್ನು ಇಲ್ಲಿ ಸಾಕಲಾಗುತ್ತಿದೆ. ಮಳೆಗಾಲ ಆರಂಭದಿಂದ ವರ್ಷಾಂತ್ಯದವರೆಗೆ ಗುಡ್ಡಗಳು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಹಿಂದೆ ಭದ್ರತೆಗಾಗಿ ಫಾರ್ಮ್ ಸುತ್ತ ಮಣ್ಣು ಅಗೆದು ಅಗಳು ತೆಗೆದು ಬೇಲಿ ಹಾಕಲಾಗಿತ್ತು. ಆದರೆ ಹಲವು ಕಡೆ ಕಿಡಿಗೇಡಿಗಳು ಬೇಲಿಯನ್ನು ಕಿತ್ತೆಸೆದು ಅಕ್ರಮ ಹಾದಿಗಳನ್ನು ನಿರ್ಮಿಸಿದ್ದಾರೆ. ಗಂಡಿಬಾಗಿಲು, ಆನೆಗುಂಡಿ ಮೊದಲಾದೆಡೆ ಫಾರ್ಮ್ಗೆ ಪ್ರವೇಶಿಸಲು ಅಕ್ರಮ ಮಾರ್ಗಗಳಿವೆ. ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಗೋಕುಲನಗರ ಎಂಬಲ್ಲಿ ಸುಂದರ ಪ್ರವೇಶ ದ್ವಾರವಿದೆ. ಈ ಹಿಂದೆ ಮುಖ್ಯ ಪ್ರವೇಶ ದ್ವಾರದಲ್ಲಿ ಕಾವಲುಗಾರ ಕಾರ್ಯನಿರ್ವಹಿಸುತ್ತಿದ್ದ. ಒಳ ,ಹೊರ ಹೋಗಲು ಸಮಯ ನಿಗದಿಪಡಿಸಲಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಅದ್ಯಾವುದೂ ಇಲ್ಲ. ಗೇಟು ಸದಾ ತೆರದಿರುತ್ತೆ. ರಜಾ ದಿನ ಬಂದರೆ ಸಾಕು ಯುವ ಜನರು ಮೋಜು ಮಸ್ತಿಗೆ ಆಗಮಿಸುತ್ತಾರೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಾರೆ, ತಿಂಡಿ ಪೊಟ್ಟಣಗಳನ್ನು ಅಲ್ಲಲ್ಲಿ ಬಿಸಾಡುತ್ತಾರೆ. ನೀರಿನ ಟ್ಯಾಂಕ್‌ಗಳಿಗೆ ಕಸಕಡ್ಡಿಗಳನ್ನು ಹಾಕುತ್ತಾರೆ. ಪ್ರಶ್ನಿಸಲು ಹೋದ ಸಿಬಂದಿಯನ್ನೇ ದಬಾಯಿಸುತ್ತಾರೆ.

ಸ್ಥಳೀಯರ ಆಗ್ರಹ.
ಇದಕ್ಕೆಲ್ಲ ಕಡಿವಾಣ ಹಾಕಲು ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹ.

ಹೊರಠಾಣೆ ಅಗತ್ಯ
ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಬರುವುದು ತಪ್ಪಲ್ಲ. ಆದರೆ ಅದನ್ನು ಹಾಳುಗೆಡಹುವುದು ಯಾವ ನ್ಯಾಯ? ಇಲ್ಲಿನ ಭದ್ರತೆಯ ಬಗ್ಗೆ ಇಲಾಖೆ ಆಸ್ಥೆ ವಹಿಸಿಬೇಕು. ಕೊಯಿಲ ಕೇಂದ್ರಿತವಾಗಿ ಪೊಲೀಸ್‌ ಹೊರಠಾಣೆ ತೆರೆದರೆ ಇಲ್ಲಿಗೆ ಬರುವ ಕಿಡಿಗೇಡಿ ಪ್ರವಾಸಿಗರ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದು.
– ಪ್ರದೀಪ್‌ ಕೊಯಿಲ, ಸ್ಥಳೀಯ ಮುಖಂಡ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.